Homeಮುಖಪುಟಮಧ್ಯಪ್ರದೇಶ: ಮಹಿಳಾ ಕಾನ್‌ಸ್ಟೇಬಲ್ ಮೇಲೆ ಅತ್ಯಾಚಾರ-ಇಬ್ಬರ ಬಂಧನ

ಮಧ್ಯಪ್ರದೇಶ: ಮಹಿಳಾ ಕಾನ್‌ಸ್ಟೇಬಲ್ ಮೇಲೆ ಅತ್ಯಾಚಾರ-ಇಬ್ಬರ ಬಂಧನ

- Advertisement -
- Advertisement -

ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಮೂವರು ಕಾಮುಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಆರೋಪಿಸಿದ್ದಾರೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ ಈ ಘಟನೆ ನಡೆದಿತ್ತು, ಆರೋಪಿಗಳು ಸಾಮೂಹಿಕ ಅತ್ಯಾಚಾರದ ಕೃತ್ಯವನ್ನು ಚಿತ್ರೀಕರಿಸಿದ್ದು, ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಕಾನ್‌ಸ್ಟೇಬಲ್ ಆರೋಪಿಸಿದ್ದಾರೆ.

ಆದರೆ, ಸೆಪ್ಟೆಂಬರ್ 13 ರಂದು ಸಂತ್ರಸ್ತೆ ದೂರು ದಾಖಲಿಸಿದ್ದು, ನಂತರ ತನಿಖೆ ನಡೆಸಿ ಐದು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಮುಖ್ಯ ಆರೋಪಿಯ ತಾಯಿಯ ಹೆಸರನ್ನೂ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ಪ್ರಕರಣದ ಪ್ರಮುಖ ಆರೋಪಿ ತನ್ನನ್ನು ಆತನ ತಮ್ಮನ ಹುಟ್ಟು ಹಬ್ಬದ ಪಾರ್ಟಿಗೆ ಕರೆದಿದ್ದ, ಅಲ್ಲಿಗೆ ಹೋದಾಗ ಆತ, ಆತನ ಸಹೋದರ ಮತ್ತು ಇನ್ನೊಬ್ಬ ಪುರುಷ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಮುಖ್ಯ ಆರೋಪಿಯ ತಾಯಿ ಸಂತ್ರಸ್ತೆಯನ್ನು ಮತ್ತಷ್ಟು ಬ್ಲ್ಯಾಕ್ ಮೇಲ್ ಮಾಡಿದ್ದು, ಆರೋಪಿಯ ಸಂಬಂಧಿಕರೊಬ್ಬರು ಕೂಡ ಕೊಲೆ ಬೆದರಿಕೆ ಹಾಕಿ ಹಣ ವಸೂಲಿಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಆರೋಪಿಗಳು ಮೊದಲು ಫೇಸ್‌ಬುಕ್‌ನಲ್ಲಿ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿದ್ದರು. ಏಪ್ರಿಲ್‌ನಿಂದ ಆಕೆಯೊಂದಿಗೆ ವಾಟ್ಸಾಪ್‌ನಲ್ಲಿ ಸಂವಹನ ನಡೆಸುತ್ತಿದ್ದರು. ನಂತರ ಮುಖ್ಯ ಆರೋಪಿ ತನ್ನ ಕಿರಿಯ ಸಹೋದರನ ಹುಟ್ಟುಹಬ್ಬಕ್ಕೆ ಸಂತ್ರಸ್ತೆಯನ್ನು ಆಹ್ವಾನಿಸಿದ್ದ, ಈ ವೇಳೆ ಆಕೆಯ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಪೊಲೀಸ್ ಠಾಣೆಯ ಎಸ್‌ಐ ಅನುರಾಧಾ ಗಿರ್ವಾಲ್ ಹೇಳಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 26 ಆರೋಪಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2025ಕ್ಕೆ ಬಿಜೆಪಿ ಸಂಪೂರ್ಣ ಮೀಸಲಾತಿಯನ್ನು ರದ್ದುಗೊಳಿಸಲಿದೆ: ರೇವಂತ್ ರೆಡ್ಡಿ

0
ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮೀಸಲಾತಿಯನ್ನು ರದ್ದುಗೊಳಿಸುವ ಉದ್ದೇಶದಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನದ ವಿರುದ್ಧ ಸಮರ ಸಾರಿವೆ ಎಂದು ಆರೋಪಿಸಿರುವ ತೆಲಂಗಾಣದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಮೀಸಲಾತಿ ರದ್ದುಗೊಳಿಸುವ...