Homeಚಳವಳಿಮಧ್ಯಪ್ರದೇಶ: 4 ವರ್ಷಗಳಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣ ದಾಖಲು

ಮಧ್ಯಪ್ರದೇಶ: 4 ವರ್ಷಗಳಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣ ದಾಖಲು

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ತಿಳಿಸಿದೆ.

ರಾಜ್ಯ ವಿಧಾನಸಭೆಯಲ್ಲಿ ಶುಕ್ರವಾರ ಕಾಂಗ್ರೆಸ್ ಶಾಸಕ ಜಿತು ಪಟ್ವಾರಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಲಿಖಿತ ಉತ್ತರ ನೀಡಿದ್ದಾರೆ. ಈ ಮಾಹಿತಿಯ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 33,239 ಪ್ರಕರಣಗಳು ಜನವರಿ 2018 ಮತ್ತು ನವೆಂಬರ್ 2021 ನಡುವೆ ಸುಮಾರು ನಾಲ್ಕು ವರ್ಷಗಳ ಅವಧಿಯಲ್ಲಿ ದಾಖಲಾಗಿವೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ. 2020 ರಲ್ಲಿ 9,664 ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷದ ಕಳೆದ 11 ತಿಂಗಳಲ್ಲಿ 9,249 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

2018 ರಲ್ಲಿ ಈ ಕಾಯ್ದೆಯಡಿ ಒಟ್ಟು 6,852 ಪ್ರಕರಣಗಳು ದಾಖಲಾಗಿದ್ದರೆ, 2019 ರಲ್ಲಿ ಈ ಸಂಖ್ಯೆ 7,474 ಆಗಿದೆ.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಮಾಹಿತಿ ಜೊತೆಗೆ, ಅದೇ ಪ್ರಶ್ನೆಯಲ್ಲಿ ಶಾಸಕ ಜಿತು ಪಟ್ವಾರಿ ಅವರು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನೀಡಿರು ಶಿಕ್ಷೆಯ ಶೇಕಡಾವಾರು ಬಗ್ಗೆಯೂ ಮಾಹಿತಿ ನಿಡುವಂತೆ ಕೇಳಿದ್ದರು.

ಇದಕ್ಕೆ ನೀಡಿರುವ ಉತ್ತರದಲ್ಲಿ ಕಳೆದ ಏಳು ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾರ್ಷಿಕ ಸರಾಸರಿ ಶೇ.27ರಷ್ಟು ಶಿಕ್ಷೆಯಾಗಿದೆ ಎಂದು ತಿಳಿಸಲಾಗಿದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ 2015ರಲ್ಲಿ ಶೇ.27.16 ಇದ್ದರೇ, 2016ರಲ್ಲಿ ಶೇ.27.34, 2017ರಲ್ಲಿ ಶೇ.26.98, 2018ರಲ್ಲಿ ಶೇ.23.15, 2019ರಲ್ಲಿ ಶೇ.29.39, 2020 ರಲ್ಲಿ ಶೇ.26.26 ಮತ್ತು 2021 ರಲ್ಲಿ ಶೇ 28.29 ರಷ್ಟು ಶಿಕ್ಷಿಯಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿಯೂ ಇತ್ತಿಚೆಗೆ ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದಾರೆಂದು 27 ಮಂದಿ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...