Homeಮುಖಪುಟಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ.

- Advertisement -
- Advertisement -

ಈ ವರ್ಷದ ಮಾರ್ಚ್‌ನಲ್ಲಿ ದೇಶ ಕೋವಿಡ್ ಭಯದಲ್ಲಿದ್ದಾಗ ಮಧ್ಯಪ್ರದೇಶದಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿ 22 ಕಾಂಗ್ರೆಸ್ ಶಾಸಕರನ್ನು ರಾಜೀನಾಮೆ ಕೊಡಿಸಿ ಕಾಂಗ್ರೆಸ್ ಸರ್ಕಾರ ಬೀಳಿಸಿ, ತಾನು ಅಧಿಕಾರದ ಗದ್ದುಗೆಯೇರಿತ್ತು. ಈ ರೀತಿಯಾಗಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಿ ಸಿಎಂ ಕಮಲ್ ನಾಥ್ ಅವರನ್ನು ಪದಚ್ಯುತಗೊಳಿಸುವಲ್ಲಿ ಪ್ರಧಾನಿ ಮೋದಿಯವರು ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಇಂದೋರ್‌ನಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕೈಲಾಸ್ ವಿಜಯವರ್ಗಿಯಾ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಷ್ಟು ದಿನ ಕಾಂಗ್ರೆಸ್ ಪಕ್ಷದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದೊಂದಿಗೆ ಮುನಿಸಿಕೊಂಡು ತನ್ನ ಬೆಂಬಲಿಗ 22 ಶಾಸಕರ ಜೊತೆಗೆ ರಾಜೀನಾಮೆ ನೀಡಿದ್ದರು. ಆ ನಂತರವಷ್ಟೇ ಅವರು ಬಿಜೆಪಿ ಸೇರಿದ್ದರು ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಕಮಲ್‌ ನಾಥ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಪ್ರಧಾನಿ ಮೋದಿಯನ್ನು ದೂರಿದ್ದರು.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹಾಜರಿದ್ದ ಸಂದರ್ಭದಲ್ಲಿಯೇ ಮಾತನಾಡಿರುವ ವಿಜಯ ವರ್ಗಿಯಾ “ಈ ವಿಚಾರವನ್ನು ನಾನು ಮೊದಲ ಬಾರಿಗೆ ಸಾರ್ವಜನಿಕಗೊಳಿಸುತ್ತಿದ್ದೇನೆ. ಹೀಗಾಗಿ ನೀವೂ ಸಹ ಯಾರಿಗೂ ಹೇಳಬೇಡಿ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ” ಎಂದು ಹೇಳಿದ್ದಾರೆ.

ಈ ವರ್ಷದ ಜೂನ್‌ನಲ್ಲಿಯೂ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ “ಕಮಲ್ ನಾಥ್ ಸರ್ಕಾರವನ್ನು ಬಿಳೀಸುವಲ್ಲಿ ಬಿಜೆಪಿ ಕೇಂದ್ರ ನಾಯಕರು ಕೆಲಸ ಮಾಡಿದ್ದರು” ಎಂದು ಹೇಳಿದ್ದರು. ಆದರೆ ಅವರು ನಿರ್ಧಿಷ್ಟ ಹೆಸರುಗಳನ್ನು ಬಹಿರಂಗಪಡಿಸಿರಲಿಲ್ಲ.

“ಸಾಂವಿಧಾನಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಸಂವಿಧಾನಿಕ ರೀತಿಯಲ್ಲಿ ಕೆಳಗಿಳಿಸುವವರು ಪ್ರಧಾನಿ ನರೇಂದ್ರ ಮೋದಿ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. “ಕಾಂಗ್ರೆಸ್ ಸರ್ಕಾರ ಉರುಳಲು ಪ್ರಧಾನಿ ಮೋದಿಯೇ ಕಾರಣ ಎಂದು ಮೊದಲ ದಿನದಿಂದಲೇ ನಾವು ಹೇಳುತ್ತಿದ್ದೇವೆ. ಆದರೆ, ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾಂಗ್ರೆಸ್‌ನ ಆಂತರಿಕ ಜಗಳವೇ ಕಾರಣ ಎಂದು ಬಿಜೆಪಿ ಹೇಳುತ್ತಿತ್ತು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸತ್ಯವನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ನರೇಂದ್ರ ಸಲೂಜಾ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...