Homeಮುಖಪುಟಸೋದರ ಮಾವನೊಂದಿಗೆ ಮಾತನಾಡಿದ ಯುವತಿಯರ ಮೇಲೆ ಸಂಬಂಧಿಕರಿಂದಲೇ ಮಾರಣಾಂತಿಕ ಹಲ್ಲೆ

ಸೋದರ ಮಾವನೊಂದಿಗೆ ಮಾತನಾಡಿದ ಯುವತಿಯರ ಮೇಲೆ ಸಂಬಂಧಿಕರಿಂದಲೇ ಮಾರಣಾಂತಿಕ ಹಲ್ಲೆ

- Advertisement -
- Advertisement -

ಸೋದರ ಮಾವನೊಂದಿಗೆ ಪೋನಿನಲ್ಲಿ ಮಾತನಾಡಿದ ಕಾರಣಕ್ಕೆ ಇಬ್ಬರು ಬುಡಕಟ್ಟು ಯುವತಿಯರ ಮೇಲೆ ಸಂಬಂಧಿಕರು ಸಾರ್ವಜನಿಕ ಪ್ರದೇಶದಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದಲ್ಲಿ ನಡೆದಿರುವ ಈ ಕೃತ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,  ವೀಡಿಯೊಗಳಲ್ಲಿ ಇಬ್ಬರು ಸಹೋದರಿಯರ ಮೇಲೆ ಏಳು ಮಂದಿ ಸಂಬಂಧಿಕರು, ಕಪಾಳಮೋಕ್ಷ ಮಾಡುವುದು, ಒದೆಯುವುದು, ಕೂದಲು ಹಿಡಿದು ಎಳೆದೊಯ್ಯುವುದು, ಕಟ್ಟಿಗೆಗಳಿಂದ ಬಡಿಯುವ ಅಮಾನವೀಯ ದೃಶ್ಯಗಳು ಸೆರೆಯಾಗಿದೆ.

ಸಹೋದರಿಯರಾದ ಬುಡಕಟ್ಟು ಯುವತಿಯರ ಮೇಲೆ ಕುಟುಂಬ ಸದಸ್ಯರು ಸಾರ್ವಜನಿಕ ಸ್ಥಳದಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಿದ್ದರೂ ಕೂಡ ಯಾರು ಸಹಾಯಕ್ಕೆ ಬಂದಿಲ್ಲ. ಅನೇಕ ಮಂದಿ ಅಲ್ಲೆ ನಿಂತು ಘಟನೆಯನ್ನು ಗಮನಿಸುತ್ತಾ, ವಿಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ, ಆದರೆ ಯುವತಿಯರ ಮೇಲೆ ನಡೆಯುತ್ತಿದ್ದ ಅಮಾನವೀಯ ಹಲ್ಲೆಯನ್ನು ತಡೆಯಲು ಪ್ರಯತ್ನಿಸಿಲ್ಲ.

ಈ ಅಮಾನವೀಯ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಪಿಪಾಲ್ವಾ ಗ್ರಾಮದಲ್ಲಿ ನಡೆದಿದೆ. ನದಿಯ ಬಳಿ ನಿಂತಿರುವ ಯುವತಿಯರ ಮೇಲೆ ತಮ್ಮ ಸೋದರಸಂಬಂಧಿಗಳ ತಂಡ ಥಳಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ ಮಹಡಿ ಮೇಲಿನಿಂದ ತಳ್ಳಿದ ಕಿಡಿಗೇಡಿಗಳು

ಜೂನ್ 22 ರಂದು ಈ ಘಟನೆ ನಡೆದಿದ್ದು, ಕೆಲವು ದಿನಗಳ ನಂತರ ಈ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ಗಮನಕ್ಕೆ ಬಂದ ನಂತರ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಹಲ್ಲೆಗೊಳಗಾದ ಯುವತಿಯರನ್ನು ವೈದ್ಯಕೀಯ ತಪಾಸಣೆಗಾಗಿ ಕಳುಹಿಸಲಾಗಿದ್ದು, ಹಲ್ಲೆಗೊಳಗಾದ ಒಬ್ಬ ಯುವತಿಯ ತಾಯಿ ಮತ್ತು ಸಹೋದರ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಚಿತ್ರಹಿಂಸೆ ಇಲ್ಲಿಯೇ ನಿಂತಿಲ್ಲ. ನದಿ ದಂಡೆಯಿಂದ ಹಳ್ಳಿಗೆ ಕರೆದೊಯ್ಯದು ಅಲ್ಲಿ ಮತ್ತೆ ಇಬ್ಬರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇ‌ತ್ತ ಅಲಿರಾಜ್‌ಪುರದಲ್ಲಿ, 19 ವರ್ಷದ ಯುವತಿಯನ್ನು ಮರಕ್ಕೆ ಕಟ್ಟಿ ಕೋಲುಗಳಿಂದ ಹೊಡೆದಿರುವ ಘಟನೆ ನಡೆದಿದೆ. ಮೂರು ತಿಂಗಳ ಹಿಂದೆ ಮದುವೆಯಾದ ಯುವತಿ ತನ್ನ ಗಂಡನನ್ನು ಬಿಟ್ಟು ತವರು ಮನೆಗೆ ಬಂದಿದ್ದಕ್ಕಾಗಿ ಕುಟುಂಬ ಸದಸ್ಯರು ಕೋಪಗೊಂಡಿದ್ದು, ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆಯಲಾಗಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿದ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...