Homeಚಳವಳಿನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

- Advertisement -
- Advertisement -

ರೈತ ಪ್ರತಿಭಟನೆ ಸ್ಥಳಕ್ಕೆ ಬಂದ ಬಿಜೆಪಿ ಸಂಸದರೊಬ್ಬರು ರೈತರ ಸಮಸ್ಯೆ ಬಗೆಹರಿಸುವುದಾಗಿ ಹೇಳಿ ನನಗೆ ಚಪ್ಪಾಳೆ ಹೊಡೆಯಿರಿ ಎಂದು ಕೇಳಿ, ರೈತರಿಂದ ಇಲ್ಲ ಎನಿಸಿಕೊಂಡಿರುವ ಮುಜುಗರದ ಘಟನೆ ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯಲ್ಲಿ ನಡೆದಿದೆ.

ಬೇತುಲ್‌ನ ಬಿಜೆಪಿ ಸಂಸದ ದುರ್ಗಾದಾಸ್ ಉಯ್ಕೆ ಹೀಗೆ ಮುಜುಗರಕ್ಕೆ ಒಳಗಾಗಿರುವ ಸಂಸದ. ರೈತರು ಪ್ರತಿಭಟನೆ ನಡೆಸುತ್ತಿದ್ದ ಬೆತುಲ್‌ನ ದಾಮ್‌ಜಿಪುರಕ್ಕೆ ಬಂದಿದ್ದ ಇವರು, ರೈತರ ಸಮಸ್ಯೆ ಬಗೆಹರಿಸುವ ಮಾತನಾಡಿ, ಬಾಲಿವುಡ್ ನಟ ನಾನಾ ಪಾಟೇಕರ್ ಅವರ ‘ಬಜಾವೋ ತಾಲಿ’ (ಚಪ್ಪಾಳೆ ಹೊಡೆಯಿರಿ) ಡೈಲಾಗ್ ಹೊಡೆದಿದ್ದಾರೆ. ಆದರೆ, ರೈತರು ಚಪ್ಪಾಳೆ ಹೊಡೆಯಲು ನಿರಾಕರಿಸಿದ್ದಾರೆ.

ಬೆತುಲ್‌ನ ದಾಮ್‌ಜಿಪುರದಲ್ಲಿ ಸುಮಾರು 40 ರಿಂದ 45 ಗ್ರಾಮಗಳ ರೈತರು ವಿದ್ಯುತ್‌ ಸಮಸ್ಯೆ ಬಗೆ ಹರಿಸುವಂತೆ ಪ್ರತಿಭಟನೆ ನಡೆಸುತ್ತಿದರು. ವಿದ್ಯುಚ್ಛಕ್ತಿ ಇಲಾಖೆಯ ಅಧಿಕಾರಿಗಳಲ್ಲದೆ, ಬಿಜೆಪಿ ಸಂಸದ ದುರ್ಗಾದಾಸ್ ಉಯ್ಕೆ , ಕಾಂಗ್ರೆಸ್ ಮುಖಂಡ ರಾಮು ಟೇಕಂ ಸಹ ರೈತರ ಬಳಿ ಚಳವಳಿಯನ್ನು ಬಿಡುವಂತೆ ಮಾತನಾಡಲು ಬಂದಿದ್ದರು.

ಇದನ್ನೂ ಓದಿ: ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ರೈತರನ್ನುದ್ದೇಶಿಸಿ ಮಾತನಾಡಿದ ಸಂಸದ ದುರ್ಗಾದಾಸ್, “ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರ ಸಮಸ್ಯೆ ಬಗೆಹರಿಸುವ ಕುರಿತು ಮಾತನಾಡಿದರು. ಶೀಘ್ರದಲ್ಲೇ ನಿಮ್ಮ ಬೇಡಿಕೆ ಈಡೇರಿಸಲಾಗುವುದು. 12 ಗಂಟೆಗಳ ಕಾಲ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು. 8 ದಿನಗಳಲ್ಲಿ ಈ ಸಮಸ್ಯೆ ಬಗೆಹರಿಸಲಾಗುವುದು” ಎಂದು ಹೇಳಿದ್ದಾರೆ.

ಬಳಿಕ ಈಗ ಚಪ್ಪಾಳೆ ತಟ್ಟಿ ಎಂದು ಕೇಳಿದ್ದಾರೆ. ಆದರೆ, ಬೇಡಿಕೆ ಈಡೇರುವವರೆಗೂ ನಾವು ಚಪ್ಪಾಳೆ ತಟ್ಟುವುದಿಲ್ಲ ಎಂದು ರೈತರು ಹೇಳಿದ್ದು, ರೈತರ ಮಾತಿನಿಂದ ಸಂಸದ ಮುಜಗರಕ್ಕೆ ಈಡಾಗಿದ್ದಾರೆ. ಇಷ್ಟೇ ಅಲ್ಲದೆ ರೈತರು ಕಿಸಾನ್ ಏಕ್ತಾ ಜಿಂದಾಬದ್ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ, ಘಟನೆಯನ್ನು ಸಮರ್ಥಿಸಿಕೊಂಡಿರುವ ಸಂಸದ ’ನಾನು ಮನವೊಲಿಸಿದ ನಂತರ ರೈತರು ತಕ್ಷಣವೇ ಧರಣಿಯನ್ನು ಕೈಬಿಟ್ಟರು’ ಎಂದಿದ್ದಾರೆ.

’ದಾಮಜೀಪುರ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ವಿದ್ಯುತ್ ಇಲಾಖೆ ಉನ್ನತಾಧಿಕಾರಿಗಳನ್ನು ಕರೆಸಿ 8 ದಿನದೊಳಗೆ ರೈತರ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆದೇಶಿಸಲಾಗಿದೆ.
ಭರವಸೆ ನೀಡಿದ ನಂತರ ರೈತರು ಧರಣಿಯನ್ನು ಅಂತ್ಯಗೊಳಿಸಿದ್ದಾರೆ’ ಎಂದು ಸಂಸದ ಟ್ವೀಟ್ ಮಾಡಿದ್ದಾರೆ.

ಡಿಸೆಂಬರ್‌ನಲ್ಲೂ ರೈತರು ವಿದ್ಯುತ್‌ ಕಂಪನಿ ನೀಡುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ 15 ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿಲಾಗಿತ್ತು. ಆದರೆ ಸಮಸ್ಯೆ ಬಗೆಹರಿಯದ ಕಾರಣ ಹೊಲಗಳಲ್ಲಿ ಬೆಳೆ ಒಣಗಲಾರಂಭಿಸಿತ್ತು. ಆದ್ದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...