Homeಕರ್ನಾಟಕಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

- Advertisement -
- Advertisement -

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದ ಮತ ಚಲಾಯಿಸಲು ಸಮುದಾಯ ನಿರ್ಣಯ ಕೈಗೊಂಡಿದೆ.

ಮಂಡ್ಯನಗರದ ಗಾಂಧಿಭವನದಲ್ಲಿ ಬುಧವಾರ ನಡೆದ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಂಪುಟ ಸಭೆಯಲ್ಲಿ ಮಾದಿಗರಿಗೆ ಪಾಲು ನೀಡಿದರೆ ಮಾದಿಗ ಸಮುದಾಯ ಕಾಂಗ್ರೆಸ್ ಜತೆಗೂಡಲಿದೆ. ಒಂದು ವೇಳೆ ವ್ಯತಿರಿಕ್ತವಾದ ತೀರ್ಮಾನ ಕೈಗೊಂಡರೆ, ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಷ್ಟೇ ನಡೆಯಲಿದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ನಾಯಕರು ಪಕ್ಷವನ್ನು ಸೋಲಿಸಲು ಸಮುದಾಯ ಮುಂದಾಗಬೇಕೆಂದು ಕರೆ ನೀಡಿದರು.

ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ, “ಕಳೆದ 35 ವರ್ಷಗಳಿಂದ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡಿದೆ. ಆದರೆ ಸುಪ್ರೀಂ ಕೋರ್ಟಿನ ತೀರ್ಪಿನ ನಂತರವು ರಾಜ್ಯ ಸರ್ಕಾರ ಒಳಮೀಸಲಾತಿ ಪರವಾದ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ ಬೆಳವಣಿಗೆಯಲ್ಲ” ಎಂದು ಹೇಳಿದರು.

“ಒಳಮೀಸಲಾತಿ ಎಂಬುದು ಸಾಮಾಜಿಕ ನ್ಯಾಯದ ಧ್ವನಿಯಾಗಿದೆ, ಎಲ್ಲ ಸಮುದಾಯಗಳು ಹಂಚಿಕೊಂಡು ತಿನ್ನುವವು. ಯಾರಿಗೂ ಅನ್ಯಾಯವಾಗದಂತೆ ತೀರ್ಮಾನ ಕೈಗೊಂಡು ಒಳಮೀಸಲಾತಿಯನ್ನು ಜಾರಿಮಾಡಕು” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಬಸವರಾಜ್ ಕೌತಾಳ್ ಮಾತನಾಡಿ, “ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಘೋಷಿಸಿ ಭರವಸೆ ನೀಡಿತ್ತು. ಆದರೆ, 2 ವರ್ಷ ಕಳೆದರೂ ಇನ್ನಿಲ್ಲದ ನೆಪ ಹೇಳಿ ಸಮುದಾಯವನ್ನು ಕಾಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ಮಾದಿಗ ಸಮಾಜದ ಶತ್ರುಗಳಾಗಿದ್ದರೆ, ಇನ್ನಾದರೂ ನೆಪ ಹೇಳದೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಾಗ ಉಗ್ರ ಹೋರಾಟಕ್ಕೆ ಮುಂದಾಗಿದೆ” ಎಂದು ಎಚ್ಚರಿಕೆ ನೀಡಲಾಗಿದೆ.

ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಎಸ್.ಮಾರಪ್ಪ, ಹೆಚ್.ಹನುಮಂತಪ್ಪ, ಅಂಬಣ್ಣ ಆರೋಲಿಕರ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪ್ರಸನ್ನ ಚಕ್ರವರ್ತಿ, ಎನ್.ಆರ್.ಚಂದ್ರಶೇಖರ್, ಸಿ.ಕೆ.ಪಾಪಯ್ಯ ಹಾಗೂ ಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...