Homeಕರ್ನಾಟಕಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

ಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

- Advertisement -
- Advertisement -

ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಶುಕ್ರವಾರ ಬೃಹತ್ ಪಾದಯಾತ್ರೆ ನಡೆದಿದ್ದು, ಬಡ ಜನರಿಗೆ ಭೂಮಿ ಹಾಗೂ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ರ‍್ಯಾಲಿಗೆ ಕೊಡಗಿನ ಎಲ್ಲಾ ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳುವುದರ ಮೂಲಕ ಬೆಂಬಲ ಸೂಚಿಸಿದವು ಎಂದು ಈದಿನ.ಕಾಂ ವರದಿ ಮಾಡಿದೆ. ಮಡಿಕೇರಿ

ಕೊಡಗಿನಲ್ಲಿ ಭೂ ಗುತ್ತಿಗೆ ಆದೇಶವಾಗಿದ್ದು, ಉಳ್ಳವರ ಪರವಾಗಿ ಒತ್ತುವರಿ ಮಾಡಿಕೊಂಡ ಭೂ ಮಾಲೀಕರು ಕೇವಲ ಸಾವಿರಾರು ರೂಪಾಯಿ ಪಾವತಿಸಿ ಸರ್ಕಾರದಿಂದ ಅಧಿಕೃತವಾಗಿ ಮೂವತ್ತು ವರ್ಷಗಳವರೆಗೆ ಭೂ ಗುತ್ತಿಗೆ ಪಡೆಯುವ ಪ್ರಕ್ರಿಯೆ ಆರಂಭಗೊಂಡು, ಇನ್ನೇನು ವಿತರಿಸುವ ಹಂತಕ್ಕೆ ತಲುಪಿದೆ. ಕೊಡಗಿನ ಬಡ ಜನರ ವಿರೋಧಿ ಭೂ ಗುತ್ತಿಗೆ ಆದೇಶ ಜಾರಿಗೆ ತಂದ ಸರ್ಕಾರ, ಅನುಷ್ಠಾನ ಮಾಡುತ್ತಿರುವ ಜಿಲ್ಲಾಡಳಿತ ವಿರುದ್ಧ ಕೊಡಗಿನಲ್ಲಿ ಹೋರಾಟಗಳು ಆರಂಭಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರ ಉಳ್ಳವರಿಗೆ 25 ಎಕರೆ ಕೊಡುವುದಾದರೆ ನಿವೇಶನ, ಭೂಮಿ ಏನೂ ಇರದ ಬಡ ಜನರ ಪರಿಸ್ಥಿತಿ ಏನು? ಅಂತಹವರಿಗೆ ಭೂಮಿ ಕೊಡಿ ಭೂ ಮಾಲೀಕರು ಕೊಡುವ ಹಣಕ್ಕಿಂತ ದುಪ್ಪಟ್ಟು ಕೊಡುವುದಾಗಿ ಹೋರಾಟಗಾರರು ಆಗ್ರಹ ಮಾಡಿದ್ದಾರೆ.

ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಿಂದ ಬಂದಿದ್ದ ಆದಿವಾಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದ ಜನರು ನೀಲಿ, ಕೆಂಪು, ಹಸಿರು ಬಾವುಟ ಹಿಡಿದು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕುತ್ತಾ ಧಿಕ್ಕಾರ ಕೂಗುತ್ತ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಜಿಲ್ಲೆಯ ದಸಂಸ, ಸಿಪಿಐಎಂ, ಸಿಪಿಐಎಂಎಲ್, ಸಿಪಿಐಎಂ(ರೆಡ್ ಸ್ಟಾರ್), ರೈತ ಸಂಘಟನೆ, ಬಹುಜನ ಕಾರ್ಮಿಕ ಸಂಘಟನೆ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಹಲವು ಮುಖಂಡರು ಮಾತನಾಡಿದರು. ಮಡಿಕೇರಿ

ಪ್ರತಿಭಟನೆಯಲ್ಲಿ ಭೂ ಗುತ್ತಿಗೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಕಾಮ್ರೇಡ್ ನಿರ್ವಾಣಪ್ಪ, ಸಂಚಾಲಕರಾದ ಕೆ ಮೊಣ್ಣಪ್ಪ, ರಮೇಶ್ ಮಾಯಮುಡಿ, ರಮೇಶ್ (ಸಿಪಿಐಎಂ), ಅಡ್ವೋಕೇಟ್ ಸುನಿಲ್, ದಸಂಸ ಮಾರ್ಕ್ಸ್‌ವಾದಿ ಕುಟ್ಟಪ್ಪ, ದಸಂಸ ಸಂಚಾಲಕರಾದ ಗೋವಿಂದಪ್ಪ, ರಜನೀಕಾಂತ್, ಹೆಚ್ ಎಲ್ ದಿವಾಕರ್, ವೀರಭದ್ರಯ್ಯ, ಜಗದೀಶ್, ಭೀಮವಾದ ಸಂಘಟನೆಯ ಕೆ ಬಿ ರಾಜು, ಗ್ರಾಮ ಪಂಚಾಯ್ತಿ ಸದಸ್ಯರಾದ ಕುಸುಮಾವತಿ, ಲಕ್ಷ್ಮಿ, ಪತ್ರಕರ್ತರಾದ ಜಯಪ್ಪ ಹಾನಗಲ್, ಮೋಹನ್ ಮೈಸೂರು ಭಾಗಿಯಾಗಿದ್ದರು.

ಇದನ್ನೂಓದಿ:  ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...