ಮದೀನಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹೈದರಾಬಾದ್‌ನ ಕನಿಷ್ಠ 42 ಉಮ್ರಾ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ಬಗ್ಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ದುಃಖ ವ್ಯಕ್ತಪಡಿಸಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಅವರು ಹೈದರಾಬಾದ್ ಮೂಲದ ಎರಡು ಪ್ರಯಾಣ ಏಜೆನ್ಸಿಗಳನ್ನು ಸಂಪರ್ಕಿಸಿ ಪ್ರಯಾಣಿಕರ ಮಾಹಿತಿಯನ್ನು ರಿಯಾದ್ ರಾಯಭಾರ ಕಚೇರಿಯೊಂದಿಗೆ ಹಂಚಿಕೊಂಡಿದ್ದಾರೆ.
ಈ ವೇಳೆ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಉಪ ಮುಖ್ಯಸ್ಥ (ಡಿಸಿಎಂ) ಅಬು ಮಾಥೇನ್ ಜಾರ್ಜ್ ಅವರೊಂದಿಗೆ ಮಾತನಾಡಿದ್ದು, ರಿಯಾದ್ ರಾಯಭಾರ ಕಚೇರಿ ಮತ್ತು ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಪ್ರಯಾಣಿಕರ ವಿವರಗಳನ್ನು ಹಂಚಿಕೊಂಡಿಕೊಂಡಿದ್ದಾರೆ.
ಅಲ್ಲದೇ ಕೇಂದ್ರ ಸರ್ಕಾರಕ್ಕೆ, ವಿಶೇಷವಾಗಿ ವಿದೇಶಾಂಗ ಕಾರ್ಯದರ್ಶಿ ಡಾ. ಎಸ್. ಜೈಶಂಕರ್ ಅವರಿಗೆ ಶವಗಳನ್ನು ಭಾರತಕ್ಕೆ ಮರಳಿ ತರುವಂತೆ ವಿನಂತಿಸಿದ್ದಾರೆ. ಜೊತೆಗೆ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.
#WATCH | Delhi | On the bus accident in Saudi Arabia, Hyderabad MP Asaduddin Owaisi says, "…Forty-two Hajj pilgrims who were travelling from Mecca to Medina were on a bus that caught fire…I spoke to Abu Mathen George, Deputy Chief of Mission (DCM) at the Indian Embassy in… https://t.co/oiPCgAz4tZ pic.twitter.com/jTuf2kCZPf
— ANI (@ANI) November 17, 2025
ಈ ಮಧ್ಯೆ, ಬಸ್ ಅಪಘಾತದ ಹಿನ್ನೆಲೆಯಲ್ಲಿ ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಸಹಾಯವಾಣಿಯ ಸಂಪರ್ಕ ವಿವರಗಳು 8002440003 (ಟೋಲ್ ಫ್ರೀ) ಅಥವಾ 0122614093 ಅಥವಾ 0126614276 ಅಥವಾ 0556122301 (ವಾಟ್ಸಾಪ್)
ಈ ಉಮ್ರಾ ಯಾತ್ರಿಕರಲ್ಲಿ ಹೈದರಾಬಾದ್‌ನ ಮಹಿಳೆಯರೂ ಮತ್ತು ಮಕ್ಕಳೂ ಸೇರಿದ್ದಾರೆ.
ಸೋಮವಾರ ಬೆಳಗಿನ ಜಾವ ಯಾತ್ರಿಕರು ಮಕ್ಕಾದಿಂದ ಪವಿತ್ರ ನಗರವಾದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಉಮ್ರಾ ಯಾತ್ರಿಕರೆಲ್ಲರೂ ಹೈದರಾಬಾದ್ ನಿವಾಸಿಗಳಾಗಿದ್ದರು ಎಂದು ವರದಿಗಳು ದೃಢಪಡಿಸಿವೆ.
ಆ ಗುಂಪು ಮಕ್ಕಾದಲ್ಲಿ ತಮ್ಮ ಧಾರ್ಮಿಕ ವಿಧಿವಿಧಾನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮದೀನಾಗೆ ಭೇಟಿ ನೀಡಲು ಹೊರಟಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.


