Homeಕರ್ನಾಟಕಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಡಿವಾಳ ಸಮುದಾಯದ ಪ್ರಗತಿಗೆ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಬೆಂಗಳೂರಿನ ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಕಲಿದೇವ ಕನ್ವೆನ್ಷನ್ ಹಾಲ್’ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತಿ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದ್ದರು ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಶ್ರಮಿಸಿದ್ದರು. ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ. ಒಬ್ಬರು ಮಾತ್ರ ಐಎಸ್‌ಎಸ್ ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದು ಸಿಎಂ ತಿಳಿಸಿದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್‌ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

ಸಂವಿಧಾನ ವಿರೋಧಿಗಳನ್ನು ದೂರ ಇಡಿ

ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ, ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಾತಿಗಣತಿ ಕುರಿತ ಸಚಿವ ಸಂಪುಟ ಸಭೆ ‘ಅಪೂರ್ಣ, ಆದರೆ ಸೌಹಾರ್ದಯುತ’: ಎಚ್.ಕೆ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...