Homeಮುಖಪುಟಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಸಚಿವ ಪೊನ್ಮುಡಿ ದೋಷಿ; ಮದ್ರಾಸ್ ಹೈಕೋರ್ಟ್‌

ಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಸಚಿವ ಪೊನ್ಮುಡಿ ದೋಷಿ; ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ತಪ್ಪಿತಸ್ಥ ಎಂದು ಮದ್ರಾಸ್ ಹೈಕೋರ್ಟ್‌ ಮಂಗಳವಾರ ಘೋಷಿಸಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು, ಹಿರಿಯ ಡಿಎಂಕೆ ನಾಯಕ ಪೊನ್ಮುಡಿ ಮತ್ತು ಅವರ ಪತ್ನಿ ಪಿ ವಿಶಾಲಾಕ್ಷಿ ಅವರನ್ನು ದೋಷಿಗಳು ಎಂದು ಘೋಷಿಸಿದ್ದಾರೆ. ಡಿಸೆಂಬರ್ 21 ರಂದು ಇಬ್ಬರಿಗೂ ಶಿಕ್ಷೆ ಪ್ರಮಾಣ ಪ್ರಕಟಿಸಲಾಗುತ್ತದೆ. ಅಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

1996ರಿಂದ 2001ರ ವರೆಗಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಎಐಎಡಿಎಂಕೆ 2002ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಾಗೃತ ಹಾಗೂ ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯ (ಡಿವಿಎಸಿ)ಅವರ ವಿರುದ್ದ ಪ್ರಕರಣ ದಾಖಲಿಸಿತ್ತು.

2015ರಲ್ಲಿ ಪೊನ್ಮುಡಿ ವಿರುದ್ಧ ಆರೋಪ ರೂಪಿಸಲಾಗಿತ್ತು. ವಿಚಾರಣೆಯನ್ನು ವಿಲ್ಲುಪುರಂನಿಂದ ವೆಲ್ಲೂರಿಗೆ ಸ್ಥಳಾಂತರಿಸಲಾಗಿತ್ತು. ಕಳೆದ ಜೂನ್ 28ರಂದು ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಧೀಶೆ ಎನ್ .ವಸಂತಲೀಲಾ ಅವರು ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದರು.

ಆದರೆ, ಮದ್ರಾಸ್ ಹೈಕೋರ್ಟ್‌ ಪೊನ್ಮುಡಿ ದಂಪತಿ ಸೇರಿದಂತೆ ಇತರ ಆರು ಮಂದಿ ರಾಜಕಾರಣಿಗಳ ವಿರುದ್ಧದ ಪ್ರಕರಣಗಳನ್ನು ಸ್ವಯಂ ಪ್ರೇರಿತ ಮರು ಪರಿಶೀಲನೆಗೆ ತೆಗೆದುಕೊಂಡಿತ್ತು.ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಪೊನ್ಮುಡಿ ದಂಪತಿಯ ಪ್ರಕರಣದ ವಿಚಾರಣೆ ಆರಂಭಿಸಿದ್ದರು.

ವಿಚಾರಣಾ ನ್ಯಾಯಾಲಯದ ಇತ್ಯರ್ಥಪಡಿಸಿದ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ವೆಂಕಟೇಶ್ ವಿರುದ್ಧ ಪೊನ್ಮುಡಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. “ನಮ್ಮ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರಂತಹ ನ್ಯಾಯಾಧೀಶರನ್ನು ಹೊಂದಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ನವೆಂಬರ್ 5 ರಂದು ಹೇಳಿತ್ತು.

ಬಳಿಕ ನ್ಯಾಯಾಲಯದ ರೋಸ್ಟರ್ ಬದಲಾವಣೆಯ ಕಾರಣ ನ್ಯಾಯಮೂರ್ತಿ ಜಿ.ಜಯಚಂದ್ರ ಅವರು ಈ ಪ್ರಕರಣಗಳ ವಿಚಾರಣೆಯನ್ನು ಮುಂದುವರೆಸಿದ್ದರು. ಡಿ.19ರಂದು ತೀರ್ಪು ಪ್ರಕಟಿಸಿದ್ದಾರೆ.

ಆರೋಪಿಗಳ ವಿರುದ್ಧದ ಸಾಕ್ಷ್ಯಗಳ ಕೊರತೆ ಮತ್ತು ಲಭ್ಯ ಸಾಕ್ಷ್ಯಗಳ ತಪ್ಪಾದ ವ್ಯಾಖ್ಯಾನ ಖುಲಾಸೆಗೊಳಿಸುವ ವಿಚಾರಣಾ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ತಪ್ಪು ಎಂದು ಸೂಚಿಸುತ್ತದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ತೀರ್ಪು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಜಿ. ಜಯಚಂದ್ರನ್ ಹೇಳಿದ್ದಾರೆ.

ಸಚಿವ ಪೊನ್ಮುಡಿ ಅನರ್ಹತೆ ಎದುರಿಸುವ ಸಾಧ್ಯತೆ ಇದ್ದು, ಗುರುವಾರ ನ್ಯಾಯಾಲಯದ ಶಿಕ್ಷೆ ಪ್ರಕಟಿಸಿದ ನಂತರ ಅದು ಸ್ಪಷ್ಟವಾಗಲಿದೆ.

ಇದನ್ನೂ ಓದಿ: ಎಲ್ಗರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...