Homeಮುಖಪುಟಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

ಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

- Advertisement -
- Advertisement -

ತಮಿಳು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ನಟಿಸಿದ ಇಂಡೋ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರ  ಮೇಲೆ ಅತ್ಯಾಚಾರ ಮತ್ತು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ತಮಿಳುನಾಡಿದ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್ ಅವರಿಗೆ ಮದ್ರಾಸ್ ಹೈಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ನೀಡಿದೆ.

ನ್ಯಾಯಮೂರ್ತಿ ಎಂ. ನಿರ್ಮಲ್ ಕುಮಾರ್ ಜಾಮೀನು ಮಂಜೂರು ಮಾಡಿದ್ದು, ಪಾಸ್‌ಪೋರ್ಟ್‌ ಮತ್ತು ತಲಾ  10,000 ಸಾವಿರ ರೂಪಾಯಿಗಳಂತೆ ಇಬ್ಬರು ಶ್ಯೂರಿಟಿ ಹಾಕಿದ ನಂತರ ಜಾಮೀನು ನೀಡಲಾಗಿದೆ. ಜೊತೆಗೆ  ಎರಡು ವಾರಗಳವರೆಗೆ ಪ್ರತಿದಿನ ತನಿಖಾ ಅಧಿಕಾರಿಯ ಮುಂದೆ ಹಾಜರಾಗಬೇಕು. ತನಿಖಾಧಿಕಾರಿ ಕರೆ ಮಾಡಿದಾಗಲೆಲ್ಲಾ ಬಂದು ಹೋಗಬೇಕು ಎಂದು ತಿಳಿಸಲಾಗಿದೆ.

ಮಾಜಿ ಸಚಿವ ಮಣಿಕಂಠನ್ ಮದುವೆಯಾಗಿದ್ದರು ಕೂಡ ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯ ಜೊತೆಗೆ ವಾಸಿಸುತ್ತಿದ್ದರು. “ಮಣಿಕಂಠನ್ ಕಳೆದ ನಾಲ್ಕು ವರ್ಷಗಳಿಂದ ತಮ್ಮ ಜೊತೆ ಲಿವ್‌ ಇನ್ ಸಂಬಂಧದಲ್ಲಿ ಇದ್ದಾರೆ. 3 ಸಾರಿ ಬಲವಂತದಿಂದ ಗರ್ಭಪಾತವನ್ನು ಮಾಡಿಸಿದ್ದಾರೆ. ತಮ್ಮ ಹೆಂಡತಿಗೆ ವಿಚ್ಛೇದನ ನೀಡಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

“ತನಿಖೆಯೂ ಈಗಾಗಲೇ ಭಾಗಶಃ ಮುಗಿದಿದೆ. ಕಕ್ಷಿದಾರರು ನ್ಯಾಯಾಲಯದ ಎಲ್ಲಾ ಷರತ್ತುಗಳಿಗೆ ಬದ್ಧರಾಗಿರುತ್ತಾರೆ” ಎಂದು ಮಾಜಿ ಸಚಿವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ. ಜೊತೆಗೆ ಅತ್ಯಾಚಾರ ಮತ್ತು ಒಮ್ಮತದ ಲೈಂಗಿಕತೆಯ ನಡುವೆ ಸ್ಪಷ್ಟ ವ್ಯತ್ಯಾಸವಿದೆ. ರಾಜಕೀಯ ಪ್ರೇರಿತವಾಗಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮದ್ರಾಸ್ ಹೈಕೋರ್ಟ್‌ನಲ್ಲಿ ತಮ್ಮ ಬಂಧನಕ್ಕೆ ತಡಕೋರಿ ಮಣಿಕಂಠನ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮದ್ರಾಸ್ ಹೈಕೋರ್ಟ್ ಮಣಿಕಂಠನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿ ಜೂನ್ 9 ರ ವರೆಗೆ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು. ಜೂನ್ 9 ರ ನಂತರ ಮಣಿಕಂಠನ್ ತಮಿಳುನಾಡನ್ನು ತೊರೆದು ತಲೆಮರೆಸಿಕೊಂಡಿದ್ದರು. ನಂತರ ಜೂನ್ 20 ರಂದು ಬೆಂಗಳೂರಿನಲ್ಲಿ ಮಣಿಕಂಠನ್ ಅಡಗಿರುವ ನಿಖರ ಮಾಹಿತಿಯನ್ನು ಪಡೆದ ಪೊಲೀಸರು ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದೊಯ್ದಿದ್ದರು.

ಮಲೇಷಿಯಾ ಮೂಲದ ಮಹಿಳೆ ಆಡ್ಯಾರ್ ಆಲ್ ವಿಮೆನ್ ಪೊಲೀಸ್ ಠಾಣೆಯಲ್ಲಿ ಮಣಿಕಂಠನ್ ಅವರ ವಿರುದ್ಧ ಮೋಸ, ಅತ್ಯಾಚಾರ, ಗರ್ಭಪಾತದ ಆರೋಪದಲ್ಲಿ ದೂರು ದಾಖಲಿಸಿದ್ದರು.  ಆಡ್ಯಾರ್ ಪೊಲೀಸರು ಮಣಿಕಂಠನ್ ವಿರುದ್ಧ IPC ಸೆಕ್ಷನ್ 376 ( ಅತ್ಯಾಚಾರ) ,ಸೆಕ್ಷನ್ 313 (ಗರ್ಭಪಾತ), ಸೆಕ್ಷನ್ 323 ( ಸ್ವಯಂ ಪ್ರೇರಿತ ಹಲ್ಲೆ), ಸೆಕ್ಷನ್ 417(ಮೋಸ), ಸೆಕ್ಷನ್ 506(i)(ಅಪರಾಧಿಕ ಕೃತ್ಯಕ್ಕೆ ಕುಮ್ಮಕ್ಕು) IT ಕಾಯ್ದೆ ಸೇರಿ ಹಲವು ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...