Homeಮುಖಪುಟತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

- Advertisement -
- Advertisement -

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಮದ್ರಾಸ್ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ ತನ್ನ ಖಾಸಗಿ ಭೂಮಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಿದೆ.

“ಒಬ್ಬ ವ್ಯಕ್ತಿ ತನ್ನ ಖಾಸಗಿ ಭೂಮಿಯಲ್ಲಿ ಸ್ಮಾರಕ ಅಥವಾ ಪ್ರತಿಮೆ ಸ್ಥಾಪಿಸುವುದನ್ನು ಸರ್ಕಾರ ತಡೆಯಲು ಸಾಧ್ಯವಿಲ್ಲ” ಎಂದು ನವೆಂಬರ್ 24ರಂದು ಹೈಕೋರ್ಟ್ ಹೇಳಿದೆ.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತನ್ನ ಖಾಸಗಿ ಜಮೀನಿನಲ್ಲಿ ಸ್ಟ್ಯಾನ್ ಸ್ವಾಮಿಯವರ ಚಿತ್ರವಿರುವ ಕಲ್ಲಿನ ಕಂಬದ ಸ್ಮಾರಕವನ್ನು ನಿರ್ಮಿಸಲು ಪರಿಸರ ಹೋರಾಟಗಾರ ಪಿಯೂಷ್ ಸೇಥಿಯಾ ಅವರಿಗೆ ನ್ಯಾಯಮೂರ್ತಿ ಎಂ.ದಂಡಪಾಣಿ ಅನುಮತಿ ನೀಡಿದ್ದಾರೆ.

ಸ್ಮಾರಕ ನಿರ್ಮಿಸದಂತೆ ಸೇಥಿಯಾ ಅವರಿಗೆ ನಿರ್ಬಂಧ ವಿಧಿಸಿ ನಲ್ಲಂಪಲ್ಲಿ ತಾಲೂಕು ತಹಶೀಲ್ದಾರ್ 16 ಜುಲೈ 2021ರಲ್ಲಿ ನೀಡಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.

ತಹಶೀಲ್ದಾರ್ ಪ್ರತಿಮೆ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಜಿಲ್ಲಾಧಿಕಾರಿಗಳಿಗೆ ಸೇಥಿಯಾ ಪತ್ರ ಬರೆದಿದ್ದರು. ಅದನ್ನು ಜಿಲ್ಲಾಧಿಕಾರಿ ತಿರಸ್ಕೃಸಿದ್ದರು. ಈ ಹಿನ್ನೆಲೆ ಸೇಥಿಯಾ ಅವರು ವಕೀಲ ವಿ ಸುರೇಶ್ ಮೂಲಕ ಅರ್ಜಿ ಹೈಕೋರ್ಟ್‌ ಮೊರೆ ಹೋಗಿದ್ದರು.

“ಬುಡಕಟ್ಟು ಸಮುದಾಯಗಳಿಗೆ ಸಂಬಂಧಿಸಿದಂತೆ ಸ್ಟ್ಯಾನ್‌ ಸ್ವಾಮಿ ಅವರ ಹೋರಾಟದಿಂದ ತಾನು ಸ್ಫೂರ್ತಿ ಪಡೆದಿದ್ದೇನೆ. ಅವರು ನನ್ನ ಆರಾಧ್ಯ ದೈವ ಮತ್ತು ಮಾರ್ಗದರ್ಶಕರಾಗಿದ್ದಾರೆ. ಆದ್ದರಿಂದ, ನನ್ನ ಖಾಸಗಿ ಜಮೀನಿನಲ್ಲಿ ಸ್ಮಾರಕ ನಿರ್ಮಿಸುವ ಮೂಲಕ ಸ್ವಾಮಿ ಅವರ ಪರಂಪರೆ ಮುಂದುವರೆಸಲು ಬಯಸುತ್ತೇನೆ” ಎಂದು ಸೇಥಿಯಾ ಮನವಿ ಮಾಡಿದ್ದರು.

ಹೈಕೋರ್ಟ್‌ನಲ್ಲಿ ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಾಜ್ಯ ಸರ್ಕಾರ ಮತ್ತು ಧರ್ಮಪುರಿ ಜಿಲ್ಲಾಧಿಕಾರಿ, “ನಕ್ಸಲರು ಮತ್ತು ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯ ಕೆಲಸ ಸ್ಮರಿಸಲೆಂದು ಈ ಸ್ಮಾರಕ ನಿರ್ಮಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದರು. ಸ್ಮಾರಕ ನಿರ್ಮಾಣದಿಂದ ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟಾಗುತ್ತದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿತ್ತು.

ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸ್ಮಾರಕ ನಿರ್ಮಿಸುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂದು ಸೂಚಿಸಿ ಪ್ರತಿಮೆ ನಿರ್ಮಿಸಲು ಅವಕಾಶ ನೀಡಿದೆ.

ಸಾಮಾನ್ಯ ತತ್ವದ ಅನ್ವಯ ತಮ್ಮ ಖಾಸಗಿ ಜಮೀನಿನಲ್ಲಿ ಪ್ರತಿಮೆ ಸ್ಥಾಪಿಸುವ ಹಕ್ಕು ನಾಗರಿಕರಿಗೆ ಇದೆ. ಪ್ರತಿಮೆಯ ಸ್ಥಾಪನೆಯಿಂದ ಯಾವುದೇ ಎರಡು ಸಮುದಾಯಗಳ ನಡುವೆ ಸಂಘರ್ಷ ಉಂಟಾಗಬಾರದು ಅಥವಾ ನಿರ್ದಿಷ್ಟ ಸಮಾಜದ ಭಾವನೆಗಳಿಗೆ ಧಕ್ಕೆ ತರಬಾರದು ಎಂಬುವುದು ಒಂದೇ ನಿರ್ಬಂಧ. ಖಾಸಗಿ ಪಟ್ಟಾ ಭೂಮಿಯಲ್ಲಿ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡಿದರೆ ಯಾವುದೇ ಕಾನೂನು ಅಡ್ಡಿ ಇರದು ಎಂದು ನ್ಯಾಯಾಲಯ ಹೇಳಿದೆ. ಸೇಥಿಯಾ ಅವರೇ ಎಲ್ಲಾ ವೆಚ್ಚ ಭರಿಸಿ ಸ್ಮಾರಕ ನಿರ್ಮಿಸುತ್ತಿದ್ದಾರೆ ಎಂಬ ವಿಚಾರವನ್ನೂ ನ್ಯಾಯಾಲಯ ಗಮನಿಸಿದೆ.

ಭೀಮಾ ಕೋರೆಗಾಂವ್‌ ಎಲ್ಗಾರ್‌ ಪರಿಷದ್‌ ಪ್ರಕರಣದಲ್ಲಿ ವಿಚಾರಣಾಧೀನ ಆರೋಪಿಯಾಗಿದ್ದ ಸ್ಟ್ಯಾನ್‌ ಸ್ವಾಮಿ ಅವರು ವೈದ್ಯಕೀಯ ಜಾಮೀನಿನ ನಿರೀಕ್ಷೆಯಲ್ಲೇ ಜುಲೈ 5,2021 ರಂದು ನಿಧನರಾಗಿದ್ದರು.

ಇದನ್ನೂ ಓದಿ : ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...