Homeಮುಖಪುಟಮದ್ರಾಸ್ ಹೈಕೋಟ್‌ | ಹಾಸ್ಯನಟ ಕುನಾಲ್ ಕಾಮ್ರಾಗೆ ಏಪ್ರಿಲ್ 7 ರವರೆಗೆ ನಿರೀಕ್ಷಣಾ ಜಾಮೀನು

ಮದ್ರಾಸ್ ಹೈಕೋಟ್‌ | ಹಾಸ್ಯನಟ ಕುನಾಲ್ ಕಾಮ್ರಾಗೆ ಏಪ್ರಿಲ್ 7 ರವರೆಗೆ ನಿರೀಕ್ಷಣಾ ಜಾಮೀನು

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ನ್ಯಾಯಮೂರ್ತಿ ಸುಂದರ್ ಮೋಹನ್ ಅವರು ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾಗೆ

ಕುನಾಲ್ ಅವರು ನಿರೀಕ್ಷಣಾ ಜಾಮೀನಿಗಾಗಿ ಮಹಾರಾಷ್ಟ್ರದ ನ್ಯಾಯಾಲಯಗಳನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ ಎಂಬುವುದನ್ನು ಪ್ರಾಥಮಿಕ ಹಂತದಲ್ಲಿ ಕೋರ್ಟ್‌ ಒಪ್ಪಿಕೊಂಡಿದೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈನ ಖಾರ್ ಪೊಲೀಸ್ ಠಾಣೆಗೆ ಖಾಸಗಿ ನೋಟಿಸ್ ಕಳುಹಿಸಲು ಅವರು ಕುನಾಲ್ ಅವರಿಗೆ ಅವಕಾಶ ನೀಡಿದ್ದಾರೆ.

ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಹಾಸ್ಯನಟ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾಗೆ

ಮಾರ್ಚ್ 23 ರಂದು, ಕುನಾಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು ಹಿಂದಿ ಚಲನಚಿತ್ರದ ಹಾಡಿನ ವಿಡಂಬನಾತ್ಮಕ ಆವೃತ್ತಿಯನ್ನು ಪ್ರದರ್ಶಿಸಿ ಶಿಂಧೆ ಅವರನ್ನು ಟೀಕಿಸಿದ್ದರು.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ 2022 ರಲ್ಲಿ ನಡೆದ ದಂಗೆಯೆದ್ದಿದ್ದ ಶಿಂಧೆ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದರು. ಮಹಾರಾಷ್ಟ್ರದ ಈ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಹೇಳಿದ್ದ ಕುನಾಲ್ ಅವರು ಶಿಂಧೆಯನ್ನು “ದೇಶದ್ರೋಹಿ” ಎಂದು ಉಲ್ಲೇಖಿಸಿದ್ದರು. ಆದಾಗ್ಯೂ, ಅವರು ಶಿಂಧೆ ಹೆಸರನ್ನು ನೇರವಾಗಿ ಉಲ್ಲೇಖಿಸಿರಲಿಲ್ಲ.

ಪ್ರದರ್ಶನದ ತುಣುಕು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲಾಗದ ನಂತರ, ಮಾರ್ಚ್ 23 ರ ರಾತ್ರಿ ಶಿಂಧೆ ನೇತೃತ್ವದ ಶಿವಸೇನೆಯ ಕಾರ್ಯಕರ್ತರು ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಯಾಕೆಂದರೆ ಈ ಕಾರ್ಯಕ್ರಮ ಅಲ್ಲಿ ಅದು ರೆಕಾರ್ಡ್ ಆಗಿತ್ತು.

ಮರುದಿನ, ಮುಂಬೈ ಪೊಲೀಸರು ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಂಡು ಪೊಲೀಸರು ಅವರಿಗೆ ಎರಡು ಸಮನ್ಸ್‌ಗಳನ್ನು ಕಳುಹಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಂಬೈಗೆ ಪ್ರಯಾಣಿಸಲು ಕುನಾಲ್ ಏಳು ದಿನಗಳನ್ನು ಕೋರಿದ್ದರು, ಆದರೆ ನಗರ ಪೊಲೀಸರು ಅವರ ವಿನಂತಿಯನ್ನು ನಿರಾಕರಿಸಿದ್ದರು.

ಈ ನಡುವೆ, ಶಿಂಧೆ ಅವರ ಕಾರ್ಟೂನ್ ಹೊಂದಿರುವ ಪೋಸ್ಟರ್‌ಗಳ ವಿರುದ್ಧ ಪುಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಪೋಸ್ಟರ್‌ನಲ್ಲಿ ಕುನಾಲ್ ಅವರ ಪ್ರದರ್ಶನವನ್ನು ಉಲ್ಲೇಖಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಶಿಂಧೆ ಅವರ ವ್ಯಂಗ್ಯಚಿತ್ರದ ಜೊತೆಗೆ, “ಥಾಣೆ, ರಿಕ್ಷಾ, ಚಶ್ಮಾ, ದಧಿ, ಗುವಾಹಟಿ ಮತ್ತು ಗದ್ದರ್ [ದೇಶದ್ರೋಹಿ]” ಎಂಬ ಪದಗಳನ್ನು ಮಹಾರಾಷ್ಟ್ರದಲ್ಲಿ ನಿಷೇಧಿಸಲಾಗಿದೆಯೇ ಎಂದು ಪೋಸ್ಟರ್‌ಗಳು ಪ್ರಶ್ನಿಸಿದ್ದವು. ಪುಣೆಯ ಅಲ್ಕಾ ಟಾಕೀಸ್ ಬಳಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷದಯ ಸದಸ್ಯರು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಅಧಿಕಾರಿ ರಾಜೇಂದ್ರ ಕೆವಾಟೆ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಮಹಾರಾಷ್ಟ್ರ ಆಸ್ತಿ ವಿರೂಪಗೊಳಿಸುವಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...