Homeಮುಖಪುಟಮತ ಎಣಿಕೆ ವಿಳಂಬವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮತ ಎಣಿಕೆ ವಿಳಂಬವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನಲ್ಲಿ ಚುನಾವಣಾ ಅಧಿಸೂಚನೆಯನ್ನು ರದ್ದುಪಡಿಸಲು ಕೋರಿದ್ದ ರಿಟ್ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದ್ದು, ಮತ ಎಣಿಕೆ ವಿಳಂಬವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ತಮಿಳುನಾಡಿನಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ದೇಶದಾದ್ಯಂತ ಒಟ್ಟಾಗಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಎಜಿಲನ್ ಎಂಬವರು ಮದ್ರಾಸ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿಯನ್ನು ಸಲ್ಲಿಸಿದ್ದು, ಮತದಾನದ ದಿನಾಂಕ ಮತ್ತು ಮತ ಎಣಿಕೆಯ ದಿನಾಂಕದ ನಡುವೆ 45 ದಿನಗಳ ಸುದೀರ್ಘ ಅಂತರ ಇರುವ ಕಾರಣ ಮತ ಎಣಿಕೆಯನ್ನು ಮುಂಗಡವಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ಆದರೆ ಮುಖ್ಯ ನ್ಯಾಯಮೂರ್ತಿ ಸಂಜಯ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರನ್ನೊಳಗೊಂಡ ಮದ್ರಾಸ್ ಹೈಕೋರ್ಟ್‌ನ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ. ಎಜಿಲನ್ ಪರ ವಕೀಲ ಎ ರಜಿನಿ, 45 ದಿನಗಳ ಸುದೀರ್ಘ ಅಂತರ ‘ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲು ಒದಗಿಸುವ ಪ್ರಜಾಪ್ರತಿನಿಧಿ ಕಾಯ್ದೆ-1951ರ ಆಶಯಕ್ಕೆ ವಿರುದ್ಧವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ಮತ ಎಣಿಕೆಯನ್ನು ವಿಳಂಬ ಮಾಡುವುದು ಕಾನೂನುಬಾಹಿರ ಎಂದು ಹೇಳಿದ್ದಾರೆ.

ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು ನಿರ್ದಿಷ್ಟ ಅವಧಿಯೊಳಗೆ ಮತಗಳನ್ನು ಎಣಿಕೆ ಮಾಡಬೇಕು ಎಂಬ ಬಗ್ಗೆ ಯಾವುದೇ ನಿಬಂಧನೆಯು ಸದರಿ ಕಾಯ್ದೆಯಲ್ಲಿ ಇದೆಯೇ ಎಂದು ಕೇಳಿದರು. ಅರ್ಜಿದಾರರ ಪರ ವಕೀಲರು ಕಾಯ್ದೆಯಲ್ಲಿ ಅಂತಹ ಅವಕಾಶವಿಲ್ಲ ಎಂದು ಒಪ್ಪಿಕೊಂಡರು. ಈ ವೇಳೆ ನ್ಯಾಯಾಧೀಶರು, ಪ್ರಸ್ತುತ ಅರ್ಜಿಯು ಯಾವುದೇ ಸಾರ್ವಜನಿಕ ಕಾರಣವನ್ನು ಸಮರ್ಥಿಸುತ್ತದೆ ಎಂದು ನಾವು ಕಂಡುಕೊಂಡಿಲ್ಲ. ಇದು ಹೆಚ್ಚು ಪ್ರಚಾರದ ಹಿತಾಸಕ್ತಿ ಮೊಕದ್ದಮೆಯ ಸ್ವರೂಪದಲ್ಲಿದೆ. ಮತದಾನ ಮತ್ತು ಎಣಿಕೆಯ ದಿನಾಂಕವನ್ನು ಚುನಾವಣಾ ಆಯೋಗ ಮಾತ್ರ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ಚುನಾವಣಾ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸಲು ಸಂವಿಧಾನದಲ್ಲಿ ನಮಗೆ ಅವಕಾಶವನ್ನು ನೀಡಿಲ್ಲ. ಸಂವಿಧಾನದ 329ನೇ ವಿಧಿ (ಚುನಾವಣಾ ವಿಷಯಗಳಲ್ಲಿ ನ್ಯಾಯಾಲಯಗಳ ಮಧ್ಯಪ್ರವೇಶಕ್ಕೆ ತಡೆ) ಪ್ರಕಾರ ಚುನಾವಣಾ ಕಾರ್ಯಕ್ರಮದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಕೋರ್ಟ್‌ ಈ ವೇಳೆ ಹೇಳಿದೆ.

ಇದನ್ನು ಓದಿ: ಎಎಪಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...