Homeಮುಖಪುಟಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

- Advertisement -
- Advertisement -

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಇತ್ತೀಚೆಗೆ ವಜಾಗೊಳಿಸಿದೆ. 

ಅರ್ಜಿದಾರರಾದ ಸಿ. ಸೆಲ್ವಕುಮಾರ್ ತಮ್ಮ ಅರ್ಜಿಯಲ್ಲಿ, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಶಾಲಾ ಮತ್ತು ಹಾಸ್ಟೆಲ್ ಕಟ್ಟಡಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಯೋಜನೆ ಇದೆ. ಆದ್ದರಿಂದ, ರಾಜ್ಯ ಸರ್ಕಾರವು ಅದೇ ಉದ್ದೇಶಕ್ಕಾಗಿ 50 ಕೋಟಿ ರೂ.ಗಳನ್ನು ನಿಗದಿಪಡಿಸುವುದು ಅನಗತ್ಯವಾಗಿದ್ದು, ಇದು ನಿಧಿಯ ದುರುಪಯೋಗಕ್ಕೆ ಕಾರಣವಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು. ಇದನ್ನು ಗಮನಿಸಿದ ನ್ಯಾಮೂರ್ತಿಗಳಾದ ಜಿ. ಜಯಚಂದ್ರನ್ ಮತ್ತು ಕೆ.ಕೆ ರಾಮಕೃಷ್ಣನ್ ಅವರ ಪೀಠವು ಅರ್ಜಿದಾರರ ವಾದಗಳನ್ನು ತಿರಸ್ಕರಿಸಿತು. 

ಸರ್ಕಾರ ಗುರುತಿಸಿರುವ ಮೇಲಿನ 170 ಕಟ್ಟಡಗಳಿಗೆ ನವೀಕರಣ, ಶೌಚಾಲಯ ಸೌಲಭ್ಯಗಳು ಮತ್ತು ಕಾಂಪೌಂಡ್ ಗೋಡೆಗಳ ಅಗತ್ಯವಿದೆ ಎಂದು ಅವರು ಗಮನಿಸಿದ್ದು, ಇದಕ್ಕಾಗಿ ಸರ್ಕಾರ ಹಣವನ್ನು ಹಂಚಿಕೆ ಮಾಡಿದೆ. “ಅಂತಿಮವಾಗಿ, ಇದು ದೀನದಲಿತ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡಲಿದೆ ಮತ್ತು ಸಾರ್ವಜನಿಕ ನಿಧಿಯಿಂದ ಈಗಾಗಲೇ ನಿರ್ಮಿಸಲಾದ ಕಟ್ಟಡಗಳರಕ್ಷತೆಯನ್ನು ಬಲಪಡಿಸುತ್ತದೆ” ಎಂದು ತೀರ್ಪು ನೀಡಿದ್ದು, ಅರ್ಜಿಯನ್ನು ತಿರಸ್ಕರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...