Homeಮುಖಪುಟಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

ಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಉದಯನಿಧಿ ಸ್ಟಾಲಿನ್, ಸಚಿವ ಸೇಕರ್ ಬಾಬು ಮತ್ತು ಸಂಸದ ಎ ರಾಜಾ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ ಅರ್ಜಿಗಳ ತೀರ್ಪಿನ ವೇಳೆ  ಮದ್ರಾಸ್ ಹೈಕೋರ್ಟ್ ಇದೀಗ ಜಾತಿ ವ್ಯವಸ್ಥೆಯ ಮೂಲದ ಬಗ್ಗೆ ಮಾಡಿದ ಟೀಕೆಗಳನ್ನು ತೆಗೆದು ಹಾಕಿದೆ.

ಮಾರ್ಚ್ 6ರಂದು ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ಪ್ರಕಟಿಸಿದ ತೀರ್ಪಿನಲ್ಲಿ, ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಮಗೆ ತಿಳಿದಿರುವಂತೆ ಜಾತಿ ವ್ಯವಸ್ಥೆಯ ಮೂಲವು ಒಂದು ಶತಮಾನಕ್ಕಿಂತ ಕಡಿಮೆ ಹಳೆಯದು ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.

ಆದರೆ, ಪ್ರಸ್ತುತ ಮದ್ರಾಸ್ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ತೀರ್ಪಿನ ಪ್ರತಿಯಲ್ಲಿ ಮೇಲಿನ ಅವಲೋಕನಗಳನ್ನು ತೆಗೆದುಹಾಕಲಾಗಿದೆ. ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಾವು ತಿಳಿದಿರುವಂತೆ ಜಾತಿಗಳ ವರ್ಗೀಕರಣವು ತೀರಾ ಇತ್ತೀಚಿನ ಮತ್ತು ಆಧುನಿಕ ವಿದ್ಯಮಾನವಾಗಿದೆ ಎಂದು ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸನಾತನ ಧರ್ಮವು ಉನ್ನತಿ, ಉದಾತ್ತ ಮತ್ತು ಸದ್ಗುಣಶೀಲ ನೀತಿ ಸಂಹಿತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಹೀಗಾಗಿ ಸಚಿವರು, ಸಂಸದರು ಸನಾತನ ಧರ್ಮದ ಕುರಿತು ನೀಡಿದ  ತೀರ್ಪು ತಪ್ಪಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳಾದ ಟಿ ಮನೋಹರ್, ಕಿಶೋರ್ ಕುಮಾರ್ ಮತ್ತು ವಿಪಿ ಜಯಕುಮಾರ್ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಅವಲೋಕನಗಳನ್ನು ಮಾಡಲಾಗಿದೆ. ನ್ಯಾಯಾಲಯವು, ಹೇಳಿಕೆಗಳನ್ನು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತದೆ ಎಂದು ಹೇಳಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅನರ್ಹತೆಗಳ ಪಟ್ಟಿಯು ಲಕ್ಷ್ಮಣ ರೇಖೆ ಇದ್ದಂತೆ ಮತ್ತು ಅದನ್ನು ಅನುಸರಿಸಲು ನ್ಯಾಯಾಲಯ ಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸಚಿವರು, ಸಂಸದರಿಗೆ ಶಿಕ್ಷೆಯಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯವು ಶಾಸಕತ್ವ ರದ್ಧತಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ್ದರೂ, ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿತ್ತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಇದನ್ನು ಓದಿ: ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...