Homeಮುಖಪುಟಗಾಯಕ ಟಿಎಂ ಕೃಷ್ಣಗೆ 'ಎಂಎಸ್ ಸುಬ್ಬುಲಕ್ಷ್ಮಿ' ಹೆಸರಿನಲ್ಲಿ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಹೆಸರಿನಲ್ಲಿ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

- Advertisement -
- Advertisement -

ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ‘ಸಂಗೀತ ಕಲಾನಿಧಿ ಪ್ರಶಸ್ತಿ’ ನೀಡುವುದಕ್ಕೆ ಮದ್ರಾಸ್ ಹೈಕೋರ್ಟ್ ದಿ ಹಿಂದೂ ಪತ್ರಿಕೆಗೆ ಇಂದು (ನ.19) ನಿರ್ಬಂಧ ವಿಧಿಸಿದೆ.

ಸಂಗೀತ ಕಲಾನಿಧಿ ಪ್ರಶಸ್ತಿ ಮತ್ತು ನಗದು ಬಹುಮಾನವನ್ನು ಟಿಎಂ ಕೃಷ್ಣ ಅವರಿಗೆ ನೀಡಬಹುದು. ಆದರೆ, ಎಂ.ಎಸ್ ಸುಬ್ಬುಲಕ್ಷ್ಮಿ ಹೆಸರಿನಲ್ಲಿ ನೀಡಬಾರದು ಎಂದು ಕೋರ್ಟ್ ಹೇಳಿದೆ.

ಟಿಎಂ ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಸುಬ್ಬುಲಕ್ಷ್ಮಿ ಅವರ ಆಶಯಕ್ಕೆ ವಿರುದ್ದವಾಗಿದೆ. ಹಾಗಾಗಿ, ಪ್ರಶಸ್ತಿ ನೀಡಲು ಅವಕಾಶ ಕೊಡಬಾರದು ಎಂದು ಸುಬ್ಬುಲಕ್ಷ್ಮಿ ಅವರ ಮೊಮ್ಮಗ ಶ್ರೀನಿವಾಸನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ಜಯಚಂದ್ರನ್ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಶ್ರೀನಿವಾಸನ್ ಅವರ ಅರ್ಜಿಯನ್ನು ಪ್ರಶ್ನಿಸಿ ಮ್ಯೂಸಿಕ್ ಅಕಾಡೆಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಶ್ರೀನಿವಾಸನ್ ಅವರು ಸುಬ್ಬುಲಕ್ಷ್ಮಿ ಅವರ ಉಯಿಲಿನ ಫಲಾನುಭವಿಯಾಗಿರುವುದರಿಂದ ಅವರು ಅರ್ಜಿ ಸಲ್ಲಿಸಲು ಅರ್ಹರು ಎಂದಿದೆ.

ಟಿಎಂ ಕೃಷ್ಣ ಸುಬ್ಬುಲಕ್ಷ್ಮಿ ಅವರ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದ್ದಾಗಿ ಬರೆದುಕೊಂಡಿದ್ದರು. ಅವರು ಸುಬ್ಬುಲಕ್ಷ್ಮಿಅವರ ಗೌರವ ಹಾಳು ಮಾಡಿದ್ದಾರೆ. ಸುಬ್ಬುಲಕ್ಷ್ಮಿ ಮಾಡಿರುವ ಸಾಧನೆಗಳನ್ನು ‘ಬ್ರಾಹ್ಮಣತ್ವ’ ಅಳವಡಿಸಿಕೊಂಡದಕ್ಕೆ ದೊರೆತ ಪ್ರತಿಫಲ ಎಂದು ಲೇವಡಿ ಮಾಡಿದ್ದಾರೆ ಎಂದು ಶ್ರೀನಿವಾಸನ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದರು.

ಅಲ್ಲದೆ, ಅಕ್ಟೋಬರ್ 30, 1997ರಂದು ಸುಬ್ಬುಲಕ್ಷ್ಮಿ ಅವರು ಬರೆದ ಕೊನೆಯ ಉಯಿಲಿನಲ್ಲಿ ತನ್ನ ಹೆಸರಿನಲ್ಲಿ ಯಾವುದೇ ಟ್ರಸ್ಟ್‌, ಪ್ರತಿಷ್ಠಾನ, ಸ್ಮಾರಕ ಸ್ಥಾಪಿಸಬಾರದು. ತನ್ನ ಹೆಸರಿನಲ್ಲಿ ನಿಧಿ/ದೇಣಿಗೆ ಪಡೆಯಬಾರದು ಎಂದು ಹೇಳಿದ್ದಾರೆ. ಹಾಗಾಗಿ, ಅವರ ಹೆಸರಿನಲ್ಲಿ ಪ್ರಶಸ್ತಿ ಕೊಡುವುದು ಅವರ ಆದೇಶಕ್ಕೆ ವಿರುದ್ದವಾಗಿದೆ ಎಂದು ಶ್ರೀನಿವಾಸನ್ ಹೇಳಿದ್ದರು.

ಇದನ್ನೂ ಓದಿ : ನರ್ಸಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...