Homeಮುಖಪುಟತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಮತ್ತು ನ್ಯಾಯಮೂರ್ತಿ ಕೆ. ಕೆ ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಆದೇಶವನ್ನು ಪ್ರಕಟಿಸುತ್ತಾ, ಹಿಂದಿನ ಮೊಕದ್ದಮೆಗಳಲ್ಲಿ ಈ ವಿಷಯವು ಇತ್ಯರ್ಥವಾಗದ ಕಾರಣ ಏಕ ನ್ಯಾಯಾಧೀಶರ ಆದೇಶವು ರೆಸ್ ಜುಡಿಕಾಟಾದಿಂದ ಪ್ರಭಾವಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ

ರೆಸ್ ಜುಡಿಕಾಟಾ ಎಂದರೆ ಒಂದೇ ವಿಷಯದಲ್ಲಿ ಒಮ್ಮೆ ತೀರ್ಪು ಬಂದ ನಂತರ ಮತ್ತೆ ಅದೇ ಪಕ್ಷಗಳ ನಡುವೆ ಅದೇ ವಿಷಯವನ್ನು ಮರುವಿಚಾರಣೆಗೆ ತೆಗೆದುಕೊಳ್ಳುವಂತಿಲ್ಲ ಎಂಬ ನ್ಯಾಯ ಸಿದ್ಧಾಂತ. ಆದರೆ, ಇಲ್ಲಿ ಏಕಸದಸ್ಯ ಪೀಠದ ಆದೇಶದಲ್ಲಿರುವ ವಿಷಯವು ಹಿಂದಿನ ದಾವೆಗಳಲ್ಲಿ ನಿರ್ಧಾರಕ್ಕೆ ಬಂದಿರಲಿಲ್ಲ, ಆದ್ದರಿಂದ ರೆಸ್ ಜುಡಿಕಾಟಾ ಅನ್ವಯಿಸುವುದಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು, ಹಜರತ್ ಸುಲ್ತಾನ್ ಸಿಕಂರ್ ಬಾದುಷಾ ಅವುಲಿಯಾ ದರ್ಗಾ ಸೇರಿದಂತೆ ಮೇಲ್ಮನವಿದಾರರು, ಆಗಮ ಶಾಸ್ತ್ರವು ಸ್ಥಳದಲ್ಲಿ ದೀಪ ಬೆಳಗುವುದನ್ನು ತಡೆಯುತ್ತದೆ ಎಂದು ತೋರಿಸಲು ಪ್ರಬಲ ಪುರಾವೆಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪೀಠ ತಿಳಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ‘ಕಾಲ್ಪನಿಕ ಭೂತ’

“ದೇವಸ್ಥಾನದ ಪ್ರತಿನಿಧಿಗಳು ವರ್ಷದಲ್ಲಿ ಒಂದು ನಿರ್ದಿಷ್ಟ ದಿನದಂದು ಕಲ್ಲಿನ ಕಂಬದ ಬಳಿ ದೀಪ ಹಚ್ಚಲು ಅವಕಾಶ ನೀಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತದೆ ಎಂಬ ರಾಜ್ಯ ಸರ್ಕಾರದ ಆತಂಕವು ಹಾಸ್ಯಾಸ್ಪದ ಮತ್ತು ನಂಬಲು ಕಷ್ಟ. ಅಂತಹ ಅಡಚಣೆಯನ್ನು ರಾಜ್ಯವೇ ಪ್ರಾಯೋಜಿಸಿದರೆ ಮಾತ್ರ ಅದು ಸಂಭವಿಸಬಹುದು. ಯಾವುದೇ ರಾಜ್ಯವು ತಮ್ಮ ರಾಜಕೀಯ ಕಾರ್ಯಸೂಚಿಯನ್ನು ಸಾಧಿಸಲು ಈ ಮಟ್ಟಕ್ಕೆ ಇಳಿಯಬಾರದು ಎಂದು ನಾವು ಪ್ರಾರ್ಥಿಸುತ್ತೇವೆ ಎಂಬುವುದಾಗಿ ನ್ಯಾಯಾಲಯ ಹೇಳಿದೆ. ಹಾಗೆಯೇ, ದರ್ಗಾ ಪಕ್ಷವು ದೀಪ ಸ್ತಂಭವು ತಮಗೆ ಸೇರಿದೆ ಎಂದು ವಾದಿಸಿದ್ದನ್ನು ‘ದುಷ್ಟತನದ ವಾದ’ ಎಂದು ಕರೆದು, ಅದು ಸಮುದಾಯಗಳ ನಡುವೆ ಅನುಮಾನವನ್ನು ಹೆಚ್ಚಿಸುತ್ತದೆ ಎಂದು ಟೀಕಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಇರುವ ಗ್ರಹಿಕೆಯು, ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಮುಂದೆ ಅನುಮಾನಕ್ಕೆ ಒಳಪಡಿಸಲು ರಾಜ್ಯ ಅಧಿಕಾರಿಗಳು ಸೃಷ್ಟಿಸಿದ ಕಾಲ್ಪನಿಕ ಭೂತವಾಗಿದೆ” ಎಂದು ಪೀಠ ಹೇಳಿದೆ.

ಜಿಲ್ಲಾಡಳಿತವು ಈ ಸಮಸ್ಯೆಯನ್ನು ಮಧ್ಯಸ್ಥಿಕೆಯ ಮೂಲಕ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಒಂದು ಅವಕಾಶವಾಗಿ ತೆಗೆದುಕೊಳ್ಳಬೇಕಾಗಿತ್ತು ಎಂದಿದೆ.

ತಿರುಪರನ್‌ಕುಂದ್ರಂ ಬೆಟ್ಟವು ಸಂರಕ್ಷಿತ ತಾಣವಾಗಿರುವುದರಿಂದ ಯಾವುದೇ ಚಟುವಟಿಕೆಯು ಎಎಸ್‌ಐ ಕಾಯ್ದೆಯ ಪ್ರಕಾರ ಇರಬೇಕು ಎಂದು ಪೀಠ ಹೇಳಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಸಮಾಲೋಚಿಸಿದ ನಂತರ ದೀಪವನ್ನು ಬೆಳಗಿಸಬಹುದು ಮತ್ತು ವ್ಯಕ್ತಿಗಳ ಸಂಖ್ಯೆಯನ್ನು ನಿಗದಿಪಡಿಸಬಹುದು ಎಂದು ತಿಳಿಸಿದೆ.

ಮಧುರೈನ ತಿರುಪರನ್‌ಕುಂದ್ರಂನಲ್ಲಿರುವ ಅರುಲ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯು ತಿರುಪರನ್‌ಕುಂದ್ರಂ ಬೆಟ್ಟಗಳ ಮೇಲಿರುವ ದೀಪಥೂನ್ (ಪ್ರಾಚೀನ ಕಲ್ಲಿನ ದೀಪ ಸ್ತಂಭ) ನಲ್ಲಿ ಕಾರ್ತಿಗೈ ದೀಪವನ್ನು ಬೆಳಗಿಸಬೇಕೆಂದು ಡಿಸೆಂಬರ್ 1ರಂದು ಏಕ ಸದಸ್ಯ ನ್ಯಾಯಾಧೀಶರು ನೀಡಿದ ತೀರ್ಪಿನಿಂದ ಉದ್ಭವಿಸಿದ ಮೇಲ್ಮನವಿಗಳ ಗುಂಪಿನ ಮೇಲೆ ಈ ಆದೇಶಗಳನ್ನು ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...