Homeಮುಖಪುಟಗುಜರಾತ್: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನ ಬಂಧನ

ಗುಜರಾತ್: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನ ಬಂಧನ

- Advertisement -
- Advertisement -

ಗುಜರಾತ್‌ನ ಜುನಾಗಢ್ ಜಿಲ್ಲೆಯ ಮದರಸಾವೊಂದರ 25 ವರ್ಷದ ಶಿಕ್ಷಕನು 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕನ ವಿರುದ್ಧ ವಿದ್ಯಾರ್ಥಿಗಳು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಆರೋಪದ ಮೇಲೆ ಮದರಸಾದ ಟ್ರಸ್ಟಿಯನ್ನು ಸಹ ಬಂಧಿಸಲಾಗಿದೆ ಎಂದು ಜುನಾಗಢ ಜಿಲ್ಲಾ ಪೊಲೀಸರು ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

”ಶಿಕ್ಷಕನನ್ನು ಸೂರತ್‌ನ ಅಡಗುತಾಣದಿಂದ ಬಂಧಿಸಲಾಗಿದ್ದರೆ, ಪರಾರಿಯಾಗಿದ್ದ ಮದರಸಾ ಟ್ರಸ್ಟಿಯನ್ನು ಭಾನುವಾರ ಜುನಾಗಢ್‌ನ ಸ್ಥಳದಿಂದ ಹಿಡಿಯಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

17 ವರ್ಷದ ಬಾಲಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಸಂಭೋಗ), 323 (ಹಲ್ಲೆ), 506-2 (ಅಪರಾಧ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಮಾಂಗೋಲ್-ವೆರಾವಲ್ ಬೈಪಾಸ್‌ನಲ್ಲಿರುವ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ತನ್ನ ತಾಯಿಗೆ ಕರೆ ಮಾಡಿ
ವಿದ್ಯಾರ್ಥಿಗಳೊಂದಿಗೆ ಶಿಕ್ಷಕ ಲೈಂಗಿಕ ಕ್ರಿಯೆ ನಡೆಸಿರುವ ಬಗ್ಗೆ ಹೇಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು
ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಮಾಹಿತಿಯ ಮೇರೆಗೆ ಆತನ ತಾಯಿ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.
ಅಕ್ಟೋಬರ್ 21 ರಂದು ಮದರಸಾಕ್ಕೆ ಭೇಟಿ ನೀಡಿದ ಪೊಲೀಸರು ಕೆಲವು ಮುಸ್ಲಿಂ ಮುಖಂಡರ ಸಹಾಯದಿಂದ
ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು.

”ಶಿಕ್ಷಕರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವಿದ್ಯಾರ್ಥಿಗಳು ಮದರಸಾದ ಟ್ರಸ್ಟಿಯನ್ನು ಸಂಪರ್ಕಿಸಿದಾಗ ಅವರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪೊಲೀಸರಿಗೆ ತಿಳಿದುಬಂದಿದೆ.

”ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಟ್ರಸ್ಟಿ ಅರಿತುಕೊಂಡಾಗ, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ ಜುನಾಗಢ್ ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಮೆಹ್ತಾ ಅವರು ಮದರಸಾಕ್ಕೆ ಭೇಟಿ ನೀಡಿದ್ದು, ಪೊಲೀಸರು ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುತ್ತಾರೆ ಎಂದು ವಿದ್ಯಾರ್ಥಿಗಳ ಪೋಷಕರಿಗೆ ಭರವಸೆ ನೀಡಿದರು.

ಇದನ್ನೂ ಓದಿ: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ನಾಯಕನಿಗೆ ಹೃದಯಾಘಾತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...