Homeಮುಖಪುಟ‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

- Advertisement -
- Advertisement -

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು ದ್ವೇಷ ಭಾಷಣದ ಭಾಗವಾಗಿದೆ ಎಂಬ ತೀವ್ರ ಟೀಕೆಗಳು ಮತ್ತು ಆಕ್ರೋಶಗಳು ದೇಶಾದ್ಯಂತ ವ್ಯಕ್ತವಾಗುತ್ತಿವೆ.

ಇತ್ತೀಚೆಗೆ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಶವ್ ಪ್ರಸಾದ್ ಮೌರ್ಯ, “ಭಾರತ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದಲ್ಲಿ ಮದರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ” ಎಂದು ಹೇಳಿಕೆ ನೀಡಿದ್ದರು. ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಗಳ ಕುರಿತು ಈ ರೀತಿ ಸಗಟಾಗಿ ಮತ್ತು ಪ್ರಚೋದನಕಾರಿಯಾಗಿ ನೀಡಿದ ಹೇಳಿಕೆಯು ವ್ಯಾಪಕ ಖಂಡನೆಗೆ ಗುರಿಯಾಯಿತು.

ಆದರೆ, ತಮ್ಮ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತವಾದ ನಂತರವೂ ಮೌರ್ಯ ಅವರು ಕ್ಷಮೆ ಕೇಳುವ ಬದಲು, ತಮ್ಮ ನಿಲುವನ್ನು ಮತ್ತಷ್ಟು ಸಮರ್ಥಿಸಿಕೊಂಡರು. “ಇದು ಮೊದಲ ಬಾರಿಗೆನಾ? ಇದು ವಾಸ್ತವ; ಇದು ಸತ್ಯ. ಮದರಸಾ ಶಿಕ್ಷಣವು ಖಂಡಿತವಾಗಿಯೂ ಕಾರಣವಾಗಿದೆ, ಭಾರತದೊಳಗೆ ಅಥವಾ ಪ್ರಪಂಚದ ಬೇರೆಡೆ ದಾಳಿಗಳಲ್ಲಿ ಭಾಗಿಯಾಗಿರುವ ಅತಿದೊಡ್ಡ ಭಯೋತ್ಪಾದಕರು ಮದರಸಾ ಶಿಕ್ಷಣದ ಉತ್ಪನ್ನವಾಗಿದೆ” ಎಂದು ಹೇಳುವ ಮೂಲಕ ತಮ್ಮ ದ್ವೇಷದ ಭಾಷಣವನ್ನು ದ್ವಿಗುಣಗೊಳಿಸಿದರು. ಅಷ್ಟಕ್ಕೇ ನಿಲ್ಲದೆ, “ನಾನು ಇದನ್ನೇ ಮೊದಲೇ ಹೇಳಿದ್ದೇನೆ, ಮತ್ತು ಇಂದಿಗೂ ಅದನ್ನೇ ಪುನರಾವರ್ತಿಸುತ್ತೇನೆ. ಮದರಸಾ ಶಿಕ್ಷಣ ಪಡೆಯುವ ಯಾರಾದರೂ ‘ಭಾರತ್ ಮಾತಾ ಕಿ ಜೈ’ ಎಂದು ಹೇಳುವುದಿಲ್ಲ, ‘ವಂದೇ ಮಾತರಂ’ ಹಾಡುವುದಿಲ್ಲ, ಮತ್ತು ಅವರ ಮನಸ್ಥಿತಿ ಭಯೋತ್ಪಾದಕರ ಮನಸ್ಥಿತಿಯಂತೆ ಆಗುತ್ತದೆ” ಎಂದೂ ಜಾರಿಕೊಂಡರು.

ಇಸ್ಲಾಂ ಮತ್ತು ಮುಸ್ಲಿಮರ ವಿರುದ್ಧ ಪದೇ ಪದೇ ಆಕ್ರೋಶ ಹೊರಹಾಕುವ ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರಿನ್ ಅವರು ಮದರಸಾಗಳನ್ನು ರದ್ದುಗೊಳಿಸಬೇಕೆಂದು ಕರೆ ನೀಡಿದ ಕೆಲವೇ ದಿನಗಳಲ್ಲಿ ಕೇಶವ್ ಪ್ರಸಾದ್ ಮೌರ್ಯ ಅವರಿಂದ ಈ ಹೇಳಿಕೆ ಬಂದಿದೆ. ಕೋಲ್ಕತ್ತಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ್ದ ತಸ್ಲಿಮಾ ನಸ್ರಿನ್, ಮದರಸಾಗಳು “ಅಸ್ತಿತ್ವದಲ್ಲೇ ಇರಬಾರದು” ಎಂದು ಪ್ರತಿಪಾದಿಸಿದ್ದರು. ಅಲ್ಲದೆ, ಕೆಲವು ಮದರಸಾಗಳು “ಜಿಹಾದಿಗಳನ್ನು ಉತ್ಪಾದಿಸುವ ಕಾರ್ಖಾನೆಗಳು” ಎಂದು ಆರೋಪಿಸಿದ್ದ ಅವರು, ಅವುಗಳನ್ನು ಜಾತ್ಯತೀತ ಶಾಲೆಗಳಾಗಿ ಪರಿವರ್ತಿಸಬೇಕು ಎಂದು ವಾದಿಸಿದ್ದರು.

ಮೌರ್ಯ ಅವರ ಈ ಕೋಮುವಾದಿ ಹೇಳಿಕೆ ವಿರುದ್ಧ ಉತ್ತರ ಪ್ರದೇಶದ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಸಮಾಜವಾದಿ ಪಕ್ಷದ ಶಾಸಕ ಬ್ರಿಜೇಶ್ ಯಾದವ್ ಮಾತನಾಡಿ, “ಚುನಾವಣಾ ಲಾಭಕ್ಕಾಗಿ ಬಿಜೆಪಿ ಕೋಮುವಾದಿ ವಾಕ್ಚಾತುರ್ಯವನ್ನು ಆಶ್ರಯಿಸುತ್ತಿದೆ. ಅವರು ಹಿಂದೂಗಳು ಮತ್ತು ಮುಸ್ಲಿಮರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದರೆ, ಅವರಿಗೆ ನಾಲ್ಕು ಸ್ಥಾನಗಳನ್ನು ಕೂಡ ಗೆಲ್ಲಲು ಸಾಧ್ಯವಿಲ್ಲ. ಧರ್ಮ ದ್ವೇಷವನ್ನು ಹರಡುವುದು, ಜನರಿಗೆ ಧರ್ಮದ ಅಫೀಮನ್ನು ಕುಡಿಸುವುದು, ಜನರಿಗೆ ಸುಳ್ಳು ಹೇಳುವುದು ಮತ್ತು ದೇಶವನ್ನು ಲೂಟಿ ಮಾಡುವುದೇ ಬಿಜೆಪಿಯ ಮುಖ್ಯ ಕಾರ್ಯಸೂಚಿಯಾಗಿದೆ” ಎಂದು ಆರೋಪಿಸಿದ್ದಾರೆ. 

ಸಮಾಜವಾದಿ ಪಕ್ಷದ ಮತ್ತೊಬ್ಬ ಶಾಸಕ ಮೊಹಮ್ಮದ್ ಹಸನ್ ರೂಮಿ ಅವರು, ಈ ಹೇಳಿಕೆಗಳು ಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತದಾರರನ್ನು ಧ್ರುವೀಕರಿಸಲು ನಡೆಸುತ್ತಿರುವ ಸಂಚು ಎಂದಿದ್ದಾರೆ. “ಉಪಮುಖ್ಯಮಂತ್ರಿ ಜನರನ್ನು ದಾರಿ ತಪ್ಪಿಸಬಾರದು. ಚುನಾವಣೆಗಳು ಸಮೀಪಿಸುತ್ತಿವೆ, ಹೀಗಿರುವಾಗ ಅವರು ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ಉಲ್ಲೇಖಿಸದಿದ್ದರೆ ತಮ್ಮ ರಾಜಕೀಯ ಕಾರ್ಯಸೂಚಿಯನ್ನು ಹೇಗೆ ಮುಂದುವರಿಸಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಕೇಶವ್ ಪ್ರಸಾದ್ ಮೌರ್ಯ ಅವರು ಮುಸ್ಲಿಂ ವಿರೋಧಿ ಎಂದು ವ್ಯಾಪಕವಾಗಿ ಟೀಕಿಸಲ್ಪಟ್ಟ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೆ ಸಿಲುಕಿರುವುದು ಇದೇ ಮೊದಲೇನಲ್ಲ. 

2021ರ ಚುನಾವಣಾ ಭಾಷಣ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ಅವರು ಆರೋಪಿತ ಅಪರಾಧಿಗಳನ್ನು “ಲುಂಗಿ-ಚಾಪ್” ಮತ್ತು “ಜಾಲಿದಾರ್ ಟೋಪಿ” (ನೆಟ್-ಕ್ಯಾಪ್) ಗೂಂಡಾಗಳು ಎಂದು ಸಂಬೋಧಿಸಿದ್ದರು. ವಿಮರ್ಶಕರು ಮತ್ತು ಹಕ್ಕುಗಳ ಹೋರಾಟಗಾರರು ಇದನ್ನು ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿಯಾಗಿಸಲು ಬಳಸಿದ ಸಂಕೇತ ಪದಗಳು ಎಂದು ವಿಶ್ಲೇಷಿಸಿದ್ದರು.

ಮಥುರಾ ವಿವಾದ: ಅದೇ ವರ್ಷ, ಅಯೋಧ್ಯೆ ಮತ್ತು ಕಾಶಿಯ ನಂತರ, ಮಥುರಾಗೆ “ಸಿದ್ಧತೆಗಳು” ನಡೆಯುತ್ತಿವೆ ಎಂದು ಟ್ವೀಟ್ ಮಾಡುವ ಮೂಲಕ ಹೊಸ ವಿವಾದಕ್ಕೆ ಬೆಂಕಿ ಹಚ್ಚಿದ್ದರು. ಈ ಹೇಳಿಕೆಯು ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದವನ್ನು ಉಲ್ಲೇಖಿಸುವ ಉದ್ದೇಶಪೂರ್ವಕ ಶ್ರಮವಾಗಿತ್ತು.

ಸಿಎಎ ಪ್ರತಿಭಟನೆ ಮತ್ತು ಧರ್ಮ ಸಂಸದ್ ಸಮರ್ಥನೆ: 2019 ರಲ್ಲಿ, ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ “ಪಾಕಿಸ್ತಾನಕ್ಕೆ ಹೋಗಿ” ಎಂದು ಹೇಳಿದ್ದ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಹಾಗೆಯೇ 2022 ರಲ್ಲಿ ಹರಿದ್ವಾರ ಧರ್ಮ ಸಂಸದ್‌ನಲ್ಲಿ ಧಾರ್ಮಿಕ ನಾಯಕರು ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿದಾಗ, ಅದನ್ನು ಧಾರ್ಮಿಕ ನಾಯಕರ ಹಕ್ಕು ಎಂದು ಸಮರ್ಥಿಸಿಕೊಂಡಿದ್ದರು.

ಮದರಸಾ ಶಿಕ್ಷಣವನ್ನು ಭಯೋತ್ಪಾದನೆಗೆ ಜೋಡಿಸುವ ಮೌರ್ಯ ಅವರ ಇತ್ತೀಚಿನ ಹೇಳಿಕೆಗಳು, ಹಲವಾರು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ನಡೆಸುತ್ತಿರುವ ವ್ಯಾಪಕ ಅಭಿಯಾನದ ಭಾಗವಾಗಿಯೇ ಬಂದಿವೆ. ಬಿಜೆಪಿ ಸರ್ಕಾರಗಳು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳನ್ನು ಅಸಮಾನವಾಗಿ ಗುರಿಯಾಗಿಸುತ್ತಿವೆ ಎಂಬ ದೂರುಗಳು ವ್ಯಾಪಕವಾಗಿವೆ.

ಇತ್ತೀಚಿನ ವರ್ಷಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳು ಮದರಸಾಗಳ ಸಮೀಕ್ಷೆ ಮತ್ತು ತಪಾಸಣೆಗೆ ಆದೇಶಿಸಿವೆ. ನಿಯಮಗಳನ್ನು ಕಟ್ಟುನಿಟ್ಟುಗೊಳಿಸುವುದು, ವಿದೇಶಿ ನಿಧಿಯ ತನಿಖೆ ನಡೆಸುವುದು, ಸರ್ಕಾರಿ ಹಣಕಾಸಿನ ನೆರವನ್ನು ಕಡಿಮೆ ಮಾಡುವುದು ಅಥವಾ ಹಿಂಪಡೆಯುವುದು ಮತ್ತು ಕೆಲವು ಸಂದರ್ಭಗಳಲ್ಲಿ ಸರ್ಕಾರಿ ಸ್ವಾಮ್ಯದ ಮದರಸಾಗಳನ್ನು ಸಂಪೂರ್ಣವಾಗಿ ಮುಚ್ಚುವುದು ಅಥವಾ ಪರಿವರ್ತಿಸುವುದನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರವು ಮದರಸಾಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿದೆ. ಆದರೆ, ಹಾಡಿನ ಕೆಲವು ಭಾಗಗಳು ಇಸ್ಲಾಮಿಕ್ ಏಕದೇವತಾವಾದಿ (ತೌಹೀದ್) ನಂಬಿಕೆಗಳಿಗೆ ವಿರುದ್ಧವಾಗಿವೆ ಎಂದು ವಾದಿಸಿ ಹಲವಾರು ಮುಸ್ಲಿಂ ಸಂಘಟನೆಗಳು ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿವೆ.

ವಿರೋಧ ಪಕ್ಷಗಳು, ಮುಸ್ಲಿಂ ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಒಕ್ಕೂಟಗಳು, ಬಿಜೆಪಿ ಸರ್ಕಾರಗಳು ವಿಶಾಲವಾದ ಹಿಂದುತ್ವ ಕಾರ್ಯಸೂಚಿಯ ಭಾಗವಾಗಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸುತ್ತಿವೆ ಹಾಗೂ ಭಾರತೀಯ ಸಂವಿಧಾನವು ಅಲ್ಪಸಂಖ್ಯಾತರಿಗೆ ನೀಡಿರುವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಹಕ್ಕುಗಳನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿವೆ ಎಂದು ಆರೋಪಿಸಿವೆ.

ಈ ನಡುವೆ ನ್ಯಾಯಾಂಗವು ಸರ್ಕಾರದ ಇಂತಹ ಕ್ರಮಗಳನ್ನು ತಡೆದಿರುವ ಪ್ರಸಂಗಗಳೂ ಇವೆ. ಜನವರಿ 2026 ರಲ್ಲಿ, ಅಲಹಾಬಾದ್ ಹೈಕೋರ್ಟ್ ಮಾನ್ಯತೆ ಪಡೆಯದ ಮದರಸಾವನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿತ್ತು. ಅಧಿಕೃತ ಮಾನ್ಯತೆ ಇಲ್ಲದಿರುವುದು ಮಾತ್ರಕ್ಕೇ ಸಂಸ್ಥೆಯನ್ನು ಮುಚ್ಚುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು. 

2016 ರ ಮದರಸಾ ನಿಯಮಗಳ ಅಡಿಯಲ್ಲಿ, ಮಾನ್ಯತೆ ಪಡೆಯದಿರುವುದು ಸಂಸ್ಥೆಯು ಸರ್ಕಾರಿ ಅನುದಾನಗಳನ್ನು ಪಡೆಯುವುದಕ್ಕೆ ತಡೆಯೊಡ್ಡುತ್ತದೆಯೇ ಹೊರತು, ಅದನ್ನು ಸಂಪೂರ್ಣವಾಗಿ ಮುಚ್ಚಲು ಆದೇಶಿಸಲು ಅಧಿಕಾರಿಗಳಿಗೆ ಯಾವುದೇ ಸಾಂವಿಧಾನಿಕ ಅಥವಾ ಕಾನೂನುಬದ್ಧ ಅಧಿಕಾರವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಒಟ್ಟಾರೆಯಾಗಿ, ಸಾಂವಿಧಾನಿಕ ಹುದ್ದೆಯಲ್ಲಿರುವ ಉಪಮುಖ್ಯಮಂತ್ರಿಯೊಬ್ಬರು ಸಾಕ್ಷ್ಯಾಧಾರಗಳಿಲ್ಲದೆ ಇಡೀ ಶಿಕ್ಷಣ ಸಮುದಾಯವನ್ನು ‘ಭಯೋತ್ಪಾದನೆಯ ಉತ್ಪಾದನೆ’ ಎಂದು ಕರೆಯುವುದು ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಿಗೆ ಎಸಗಿದ ದ್ರೋಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...