Homeಫ್ಯಾಕ್ಟ್‌ಚೆಕ್‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ...

‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಆಸ್ಪತ್ರೆ ಕಟ್ಟಡದ ಕಾಮಗಾರಿ ಇನ್ನೂ ಆರಂಭವೇ ಆಗಿಲ್ಲ ಎಂದು ಪ್ರತಿಪಕ್ಷಗಳು ವಿಡಿಯೊ ಹಾಗೂ ಚಿತ್ರ ಸಮೇತ ಬಹಿರಂಗಪಡಿಸಿದೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮಿಳುನಾಡಿನ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿಯ ಬಗ್ಗೆ ಇತ್ತೀಚೆಗೆ ಮಾಹಿತಿ ಹಂಚಿಕೊಂಡು, ಏಮ್ಸ್‌ನ 95% ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ಹೇಳಿಕೆ ನೀಡಿದ್ದರು.

ಅವರು ಸೆಪ್ಟೆಂಬರ್ 22ರ ಗುರುವಾರದಂದು ಮದುರೈ ಮತ್ತು ಶಿವಗಂಗಾಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ  ಮಧುರೈನಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಾ, “ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ 95% ರಷ್ಟು ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ಇದನ್ನು ಪ್ರಧಾನಿಯವರು ಜನರಿಗೆ ಅರ್ಪಿಸಲಿದ್ದಾರೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆ.ಪಿ ನಡ್ಡ ಅವರು ಹೇಳಿಕೆಯನ್ನು ಬಿಜೆಪಿ ನಾಯಕರು ಹಾಗೆಯೆ ವೈರಲ್ ಕೂಡಾ ಮಾಡಿದ್ದರು. AIIMS ನ ಈ ಕಾಮಗಾರಿಯು ಮದುರೈ ಬಳಿಯ ತೋಪ್ಪೂರ್‌ನಲ್ಲಿ ನಡೆಯಬೇಕಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿಯು ವೈರಲ್ ಆಗುತ್ತಿದ್ದಂತೆ ವಿರೋಧ ಪಕ್ಷಗಳು ಜೆಪಿ ನಡ್ಡಾ ಅವರು ಹೇಳಿರುವ ಪ್ರದೇಶಕ್ಕೆ ತೆರಳಿ ನಿಜಾಂಶವೇನು ಎಂಬುವುದನ್ನು ಹೊರಗೆಡವಿದ್ದಾರೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಜೆ.ಪಿ.ನಡ್ಡಾ ಹೇಳಿಕೆ ಎಷ್ಟು ಸತ್ಯ, ಎಷ್ಟು ಸುಳ್ಳು ಎಂದು ವಾಸ್ತವವನ್ನು ಪರಿಶೀಲಿಸೋಣ
ಫ್ಯಾಕ್ಟ್‌ಚೆಕ್ :

ಮದುರೈನ ಏಮ್ಸ್‌ನ 95% ಕಾಮಗಾರಿ ಪೂರ್ಣಗೊಂಡಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ  ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಸಂಸದ ಮಣಿಕ್ಕಂ ಠಾಗೋರ್ ಕಾಮಗಾರಿ ಸ್ಥಳಕ್ಕೆ ತೆರಳಿ ವಿವರಗಳನ್ನು ಸಂಗ್ರಹಿಸಿ, ವಿಡಿಯೋ ಚಿತ್ರಗಳನ್ನೂ ಟ್ವೀಟ್ ಮಾಡಿದ್ದಾರೆ. ಆದರೆ ಅಲ್ಲಿ ಆಸ್ಪತ್ರೆ ಕಟ್ಟಡ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ-ಎಂ ಮತ್ತು ಕಾಂಗ್ರೆಸ್‌ನ ನಾಯಕರು ಜೆಪಿ ನಡ್ಡಾ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದುರೈ ಕ್ಷೇತ್ರದ ಸಂಸದ ಸು ವೆಂಕಟೇಶನ್ ಮತ್ತು ವಿರುದುನಗರ ಸಂಸದ, ಕಾಂಗ್ರೆಸ್ ನಾಯಕ ಬಿ. ಮಾಣಿಕಂ ಟ್ಯಾಗೋರ್ ಅವರು ಏಮ್ಸ್ ನಿರ್ಮಾಣವಾಗಬೇಕಿರುವ ಜಾಗದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿಗೆ ಭೇಟಿ ನೀಡಿದ್ದ ನಡ್ಡಾ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸುತ್ತಾ,“ಏಮ್ಸ್ ಯೋಜನೆಗೆ 1,264 ಕೋಟಿ ರೂ.ಗಳು ಮಂಜೂರಾಗಿದೆ ಎಂದು ಹೇಳಲು ಹರ್ಷಪಡುತ್ತೇನೆ. ಇಂದು 95%ದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರವೇ ಪ್ರಧಾನಿ ಅದನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ”

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

“ಸಾಂಕ್ರಾಮಿಕ ರೋಗಗಳ ವಿಭಾಗಕ್ಕೆ ಹೆಚ್ಚುವರಿ 164 ಕೋಟಿ ರೂ.ಗಳನ್ನು ಮಂಜೂರುಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 750 ಹಾಸಿಗೆಗಳು ಹಾಗೂ ಇವುಗಳ ಪೈಕಿ 250 ಐಸಿಯು ಬೆಡ್‍ಗಳು ಇರುತ್ತವೆ” ಎಂದೂ ನಡ್ಡಾ ಹೇಳಿದ್ದರು. ಆದರೆ ನಡ್ಡಾ ಮಾತುಗಳನ್ನು ಒಪ್ಪದ ಕಾಂಗ್ರೆಸ್ ಸಂಸದ ಠಾಗೋರ್ ಶುಕ್ರವಾರ ಸರಣಿ ಟ್ವೀಟ್ ಮಾಡಿದ್ದಾರೆ.

‘‘ನಡ್ಡಾ, ಅವರು ‘ತಮಿಳುನಾಡಿನ ಮದುರೆಯ AIIMS ನ ಕೆಲಸ 95% ಮುಗಿದಿದೆ, ಸದ್ಯವೇ ಪ್ರಧಾನಿಯವರು ಅದನ್ನು ಉದ್ಘಾಟಿಸಲಿದ್ದಾರೆ’ ಎಂದು ಘೋಷಿಸಿದರು. ಹೊಸ ಏಮ್ಸ್ ನೋಡಲು ಜನ ಓಡಿದರು. ನೋಡುವುದೇನು 2019 ರಲ್ಲಿ ಮೋದಿ ಸಾಹೇಬರು ಹಾಕಿದ ಅಡಿಗಲ್ಲು ಚಿಗುರಿ ಹೆಮ್ಮರವಾಗಿಯೇ ಇಲ್ಲ. ಅಲ್ಲಿರುವುದು ಅಡಿಗಲ್ಲು ಮಾತ್ರ” ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

“ಪ್ರೀತಿಯ ನಡ್ಡಾಜೀ, ಮದುರೈ ಏಮ್ಸ್ 95% ಕಾಮಗಾರಿ ಪೂರ್ಣಗೊಂಡಿದ್ದಕ್ಕಾಗಿ ಧನ್ಯವಾದಗಳು. ನಾನು ತೊಪ್ಪೂರು ಸೈಟ್‍ನಲ್ಲಿ ಒಂದು ಗಂಟೆ ಹುಡುಕಿದೆ, ಆದರೆ ಏನೂ ದೊರೆಯಲಿಲ್ಲ, ಯಾರೋ ಕಟ್ಟಡವನ್ನು ಕದ್ದಿರಬೇಕು” ಎಂದು ಮಾಣಿಕಂ ಟ್ಯಾಗೋರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ನಡ್ಡಾ ಅವರು ಮಧುರೈನಲ್ಲಿ ಮಾತನಾಡಿದ್ದಾರೆ ಹಾಗೂ 95% ದಷ್ಟು ಕಾಮಗಾರಿ ಮುಗಿದಿದೆ ಎಂದಿದ್ದಾರೆ. ಈ ರೀತಿ ಕಾಮಗಾರಿ ಪೂರ್ಣದ ಬಗ್ಗೆ ಸುಳ್ಳು ಹೇಳಿರುವುದು ಅಚ್ಚರಿ ಮೂಡಿಸಿದೆ. ಇದು ಅವರು ತಮಿಳುನಾಡಿನ ಜನರಿಗೆ ವಂಚಿಸುವ ವಿಧಾನವಾಗಿದೆ” ಎಂದು ವೀಡಿಯೋವೊಂದರಲ್ಲಿ ಠಾಗೋರ್ ಹೇಳಿದ್ದಾರೆ.

ಗೂಗಲ್ ಸಹಾಯದಿಂದ ಗೂಗಲ್ ಮ್ಯಾಪ್‌ ಮೂಲಕ ಸ್ಥಳ ಪರಿಶೀಲನೆಯನ್ನು ಮಾಡಿದಾಗ, ನಡ್ಡಾ ಪ್ರಸ್ತಾಪಿಸಿದ ನಿವೇಶನದಲ್ಲಿ ಯಾವುದೇ ಕಟ್ಟಡ ಕಾಮಗಾರಿಗಳು ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿಗೆ ಭೇಟಿ ನೀಡಿದ್ದ ವೇಳೆ ನಡ್ಡಾ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿ 95% ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...