Homeಕರ್ನಾಟಕಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ...

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

- Advertisement -
- Advertisement -

ಮಂಗಳೂರಿನ ಬಂಟ್ವಾಳ ಬಳಿಯ ಕೊಲ್ತಮಜಲುನಲ್ಲಿ ಅಮಾಯಕ ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಕೊಲೆಯಿಂದ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಮೀರ್ ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ಘೋಷಿಸಿದ್ದಾರೆ. ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ

ಶರಣ್ ಪಂಪ್‌ವೆಲ್‌ನಂತಹ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲಾದರೂ, ಎರಡೇ ನಿಮಿಷಗಳಲ್ಲಿ ಮ್ಯಾಗಿ ತಯಾರು ಮಾಡುವಂತೆ ಜಾಮೀನು ದೊರೆಯುವ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಶಮೀರ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಅವರು ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ, “ಕಾಂಗ್ರೆಸ್ ಸರ್ಕಾರದ ವಿಫಲತೆಯಿಂದಾಗಿ ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳನ್ನು ನಿಯಂತ್ರಿಸಲು ಯಾವುದೇ ತೀವ್ರ ಕ್ರಮ ಕೈಗೊಳ್ಳಲಾಗಿಲ್ಲ. ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಸರ್ಕಾರವು ಕೋಮುವಾದಿಗಳ ಹೆಡೆಮುರಿಯನ್ನು ಕಟ್ಟಿಹಾಕಲು ಯಾವುದೇ ಪರಿಣಾಮಕಾರಿ ಕೆಲಸ ಮಾಡಿಲ್ಲ, ಇದರಿಂದ ಜನರಲ್ಲಿ ತೀವ್ರ ಅಸಮಾಧಾನ ಮೂಡಿದೆ” ಎಂದು ಹೇಳಿದ್ದಾರೆ.

“ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿಷ್ಕ್ರಿಯ ಆಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ಇದರಿಂದ ಆರೆಸ್ಸೆಸ್‌ನಂತಹ ಸಂಘಟನೆಗಳ ಗೂಂಡಾಗಳಿಗೆ ಮುಕ್ತ ಚಲನೆಯ ಸ್ವಾತಂತ್ರ್ಯ ದೊರೆತಂತಾಗಿದೆ. ಇದು ಸರ್ಕಾರದ ದೌರ್ಬಲ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನಿರ್ಲಕ್ಷ್ಯದ ಧೋರಣೆಯೂ ಜನರಲ್ಲಿ ಅಸಮಾಧಾನವನ್ನು ತಂದಿದೆ.” ಎಂದು ಅವರು ಹೇಳಿದ್ದಾರೆ.

“ಕರಾವಳಿಯಲ್ಲಿ ಕೋಮು ಗಲಭೆಗಳನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಪಕ್ಷದ ಶಕ್ತಿಹೀನತೆಯನ್ನು ಎತ್ತಿ ತೋರಿಸುತ್ತದೆ. ಪೊಲೀಸ್ ಇಲಾಖೆಯು ಸರ್ಕಾರದ ಹಿಡಿತದಲ್ಲಿಲ್ಲದಿರುವುದು ಗಂಭೀರ ಕಳವಳದ ವಿಷಯವಾಗಿದೆ. ಶರಣ್ ಪಂಪ್‌ವೆಲ್ ಮತ್ತು ಶ್ರೀಕಾಂತ್ ಶೆಟ್ಟಿಯಂತಹ ದುಷ್ಕರ್ಮಿಗಳು ಗಲಭೆಗೆ ಪ್ರಚೋದನೆ ನೀಡುತ್ತಿದ್ದರೂ, ಅವರು ಸ್ವಚ್ಛಂದವಾಗಿ ತಿರುಗಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಸರ್ಕಾರದ ವಿಫಲತೆಯನ್ನು ಸೂಚಿಸುತ್ತದೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳ ಹಾವಳಿಯಿಂದ ದಿನಗೂಲಿ ಕಾರ್ಮಿಕರು ಮತ್ತು ಅಮಾಯಕ ನಾಗರಿಕರು ಭಯದಿಂದ ಬದುಕುವಂತಾಗಿದೆ. ಸಂಘಪರಿವಾರದ ರೌಡಿಗಳನ್ನು ಎದುರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ರಾಜಕೀಯ ಇಚ್ಛಾಶಕ್ತಿ ಇಲ್ಲವೆಂದು ತೋರುತ್ತಿದೆ. ಇದರಿಂದ ಜನರು ಸರ್ಕಾರದ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಜನರ ಮುಂದೆ ತಲೆ ಎತ್ತಿಕೊಂಡು ನಿಲ್ಲಲು ಕಷ್ಟವಾಗಿದೆ.” ಎಂದು ಅವರು ಹೇಳಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ, ಕಾಂಗ್ರೆಸ್ ಸರ್ಕಾರದ ಈಗಿನ ಆಡಳಿತದ ನೀತಿಗಳೊಂದಿಗೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಶಮೀರ್‌ ಅವರು, ಪ್ರಸ್ತುತ ಸ್ಥಿತಿಯಲ್ಲಿ, ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ, ತನ್ನೊಂದಿಗೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರೂ ರಾಜೀನಾಮೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...