Homeಮುಖಪುಟ'ಮಹಾ' ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ...

‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿದರೂ, ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

‘ಮಹಾಯುತಿ’ ಮೈತ್ರಿಕೂಟದ ಪ್ರಮುಖ ಪಕ್ಷ ಶಿವಸೇನೆಯ ಮುಖ್ಯಸ್ಥ ಹಾಗೂ ನಿರ್ಗಮಿತ ಸಿಎಂ ಏಕನಾಥ್ ಶಿಂದೆ, ಆರಂಭದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಗೇರುವ ಉತ್ಸಾಹದಲ್ಲಿದ್ದರು. ಆದರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ, “ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿ ನಿರ್ಧಾರಕ್ಕೆ ಬದ್ದ” ಎಂದು ನಿನ್ನೆ (ನ.27) ಹೇಳಿದ್ದಾರೆ. ಈ ಮೂಲಕ ಶಿಂದೆ ಶಸ್ತ್ರ ತ್ಯಜಿಸಿದ್ದಾರೆ. ಏಕನಾಥ್ ಶಿಂದೆಯ ಎನ್‌ಸಿಪಿ 288 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದಿದೆ.

ಸಿಎಂ ಸ್ಥಾನದ ರೇಸ್‌ನಲ್ಲಿರುವ ಮತ್ತೊಬ್ಬ ನಾಯಕ ಬಿಜೆಪಿಯ ದೇವೇಂದ್ರ ಫಡ್ನವಿಸ್. ಈ ಹಿಂದೆ ಸಿಎಂ, ಪ್ರತಿಪಕ್ಷ ನಾಯಕರಾಗಿದ್ದ ಫಡ್ನವಿಸ್, ಕಳೆದ ಅವಧಿಯ ಶಿಂದೆ ಸರ್ಕಾರದಲ್ಲಿ ಅಜಿತ್ ಪವಾರ್ ಜೊತೆ ಉಪ ಮುಖ್ಯಮಂತ್ರಿಯಾಗಿದ್ದರು.

ಏಕನಾಥ್ ಶಿಂದೆ ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಲು ಮುಂದಾದಾಗ ಫಡ್ನವಿಸ್ ಸಿಎಂ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಸರ್ಕಾರ ರಚನೆಗೆ ಕಾರಣರಾದ ಏಕನಾಥ್ ಶಿಂದೆಗೆ ಸಿಎಂ ಹುದ್ದೆ ಕೊಡುವ ಸಲುವಾಗಿ ಬಿಜೆಪಿ ಹೈಕಮಾಂಡ್ ಫಡ್ನವಿಸ್‌ ಅನ್ನು ಡಿಸಿಎಂ ಹುದ್ದೆಗೆ ಒಪ್ಪಿಸಿತ್ತು. ಒಲ್ಲದ ಮನಸ್ಸಿನಿಂದ ಆ ಹುದ್ದೆಯಲ್ಲಿ ಮುಂದುವರೆದ ಫಡ್ನವಿಸ್, ಈ ಬಾರಿ ಸಿಎಂ ರೇಸ್‌ನ ಮುಂಚೂಣಿಯಲ್ಲಿದ್ದಾರೆ. ಅದಕ್ಕೆ ಬೆಂಬಲವಾಗಿ ಬಿಜೆಪಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನೂ ಪಡೆದಿದೆ.

ಏಕನಾಥ್ ಶಿಂದೆ ಸಿಎಂ ಆಯ್ಕೆ ಬಿಜೆಪಿಗೆ ಬಿಟ್ಟ ಮೇಲೆ ಫಡ್ನವಿಸ್ ಹಾದಿ ಸುಗಮವಾಗಿದೆ. ಇನ್ನೇನು ಸಿಎಂ ಹುದ್ದೆ ಫಿಕ್ಸ್ ಎಂಬ ಹಂತದಲ್ಲಿ ಫಡ್ನವಿಸ್ ಇದ್ದಾರೆ. ಆದರೆ, ಈ ನಡುವೆ ಅವರಿಗೊಂದು ತಡೆ ಎದುರಾಗಿದೆ.

ಹೊಸ ಮುಖ ಹುಡುಕಾಟದಲ್ಲಿ ಬಿಜೆಪಿ

ವರದಿಗಳ ಪ್ರಕಾರ, ಮಹಾರಾಷ್ಟ್ರದ ಸಿಎಂ ಹುದ್ದೆಗೆ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈಗಾಗಲೇ ಬಿಜೆಪಿ ಈ ಪ್ರಯೋಗ ಮಾಡಿದೆ. ಈ ವಿಷಯ ನಿಜವಾದರೆ ಫಡ್ನವಿಸ್ ಸಿಎಂ ಕನಸು ಭಗ್ನವಾಗಲಿದೆ. ಅನಿವಾರ್ಯವಾಗಿ ಹೈಕಮಾಂಡ್ ಮುಂದೆ ತಲೆಬಾಗಬೇಕಿದೆ.

ಸಿಎಂ ಹುದ್ದೆಗೆ ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ನಾಯಕರನ್ನೇ ಹೆಕ್ಕಿ ತರುವ ಸಂಪ್ರದಾಯ ಕೊನೆಗೊಳಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಮಹಾಯುತಿಗೆ ದೊಡ್ಡ ಮಟ್ಟದ ಬೆಂಬಲ ನೀಡಿದ ಉತ್ತರ ಮಹಾರಾಷ್ಟ್ರಕ್ಕೆ ಪ್ರಾಶಸ್ತ್ಯ ನೀಡುವ ಯೋಚನೆಯಲ್ಲಿದೆ. ಉತ್ತರ ಮಹಾರಾಷ್ಟ್ರದ 47 ಸ್ಥಾನಗಳ ಪೈಕಿ ಮಹಾಯುತಿ 44 ಅನ್ನು ಗೆದ್ದುಕೊಂಡಿದೆ. ಈ ಲೆಕ್ಕಾಚಾರಗಳ ಪ್ರಕಾರ ನೋಡುವುದಾದರೆ ಮಹಾರಾಷ್ಟ್ರ ಸಿಎಂ ಕುರ್ಚಿಯಲ್ಲಿ ಹೊಸ ಮುಖವನ್ನು ಕಾಣುವ ಸಾಧ್ಯತೆ ಇದೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತ ಮಾಜಿ ಸಚಿವ ಗಿರೀಶ್ ಮಹಾಜನ್, ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ನಾಯಕರಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿ, ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಕೆಲ ಮಹಿಳಾ ನಾಯಕರು ಹೊಸ ಮುಖಗಳ ಆಯ್ಕೆ ಪಟ್ಟಿಯಲ್ಲಿ ಇದ್ದಾರೆ ಎಂದೂ ವರದಿಯಾಗಿದೆ.

ಪ್ರಸ್ತುತ ಶಿವಸೇನೆ (ಶಿಂದೆ ಬಣ) ಏಕನಾಥ್ ಶಿಂದೆ ಅವರನ್ನು ಮತ್ತು ಎನ್‌ಸಿಪಿ (ಅಜಿತ್ ಬಣ) ಅಜಿತ್ ಪವಾರ್ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ತಮ್ಮ ನಾಯಕ ಯಾರೆಂದು ಅಂತಿಮಗೊಳಿಸಿಲ್ಲ. ಎಲ್ಲಾ ಸರಿಯಾದರೆ ಹೊಸ ಸಿಎಂ ನವೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಬಹುದು.

ಇದನ್ನೂ ಓದಿ : ಅಜ್ಮೀರ್ ದರ್ಗಾ ಶಿವ ದೇವಾಲಯವೆಂದು ಅರ್ಜಿ : ವಿಚಾರಣೆಗೆ ಒಪ್ಪಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...