Homeಮುಖಪುಟಮುಂಬೈ : 5 ತಿಂಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಅಟಲ್ ಸೇತು ರಸ್ತೆಯಲ್ಲಿ ಬಿರುಕು

ಮುಂಬೈ : 5 ತಿಂಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಅಟಲ್ ಸೇತು ರಸ್ತೆಯಲ್ಲಿ ಬಿರುಕು

- Advertisement -
- Advertisement -

ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೆವ್ರಿ-ನವ ಸೇವಾ ಅಟಲ್ ಸೇತು ಅಥವಾ ಮುಂಬೈ ಟ್ರಾನ್ಸ್‌ ಹಾರ್ಬರ್ ಲಿಂಕ್‌ (ಹೆಚ್‌ಟಿಹೆಚ್‌ಎಲ್‌) ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಂಗಳುಗಳ ಹಿಂದೆಯಷ್ಟೇ ಉದ್ಘಾಟಿಸಿದ್ದ”ಅಟಲ್ ಸೇತುವೆಯ ರಸ್ತೆ ಬಿರುಕು ಬಿಟ್ಟಿರುವುದು ಅತ್ಯಂತ ಕಳವಳಕಾರಿಯಾಗಿದೆ. ಹೆಚ್ಚಿನ ಸಂಖ್ಯೆಯ ಬಿರುಕುಗಳು ಪ್ರಯಾಣಿಕರಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿವೆ” ಎಂದಿದ್ದಾರೆ.

“ಬಿಹಾರದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದಿರುವ ಘಟನೆ ತಾಜಾ ಆಗಿರುವಾಗಲೇ ಮುಂಬೈನಲ್ಲೂ ಅಂತಹ ಆಘಾತಕಾರಿ ಘಟನೆ ಬೆಳಕಿಗೆ ಬಂದಿರುವುದರಿಂದ ಸರ್ಕಾರದ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಸರ್ಕಾರದ ಭ್ರಷ್ಟಾಚಾರಗಳನ್ನು ಬಹಿರಂಗಪಡಿಸುವ ಕಾಂಗ್ರೆಸ್ ಪಕ್ಷದ ಆಂದೋಲನದ ಭಾಗವಾಗಿ ನಾನು ಸಹೋದ್ಯೋಗಿಗಳೊಂದಿಗೆ ಸೇತುವೆ ಪರಿಶೀಲಿಸಿದೆ. ಈ ವಿಷಯವು ತುಂಬಾ ಗಂಭೀರವಾಗಿದೆ. ಮಾನ್ಯ ಹೈಕೋರ್ಟ್ ಈ ಬಗ್ಗೆ ತಕ್ಷಣ ಗಮನಹರಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಮುಂಬೈ ಟ್ರಾನ್ಸ್‌ ಹಾರ್ಬರ್ ಲಿಂಕ್‌ ಅಟಲ್ ಸೇತು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದ್ದು, 21.8 ಕಿಮೀ ಉದ್ದವಿದೆ. ಈ ಪೈಕಿ 16.5 ಕಿಮೀ ರಸ್ತೆ ಸಮುದ್ರದ ಮೇಲಿದೆ. ದಿ ಹಿಂದೂ ವರದಿಯ ಪ್ರಕಾರ, ಈ ಸೇತುವೆ ಮೇಲೆ ಪ್ರತಿದಿನ 70,000 ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ.

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಸೇತುವೆಯೊಂದು ಕುಸಿದುಬಿದ್ದ ಬೆನ್ನಲ್ಲೇ, ಅಟಲ್ ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಚುನಾವಣೆಗೂ ಮುನ್ನ ನಟಿ ರಶ್ಮಿಕಾ ಮಂದಣ್ಣ ಇದೇ ಅಟಲ್ ಸೇತುವೆಯನ್ನು ತೋರಿಸಿ ಬಿಜೆಪಿಯ ಅಭಿವೃದ್ದಿಯನ್ನು ಕೊಂಡಾಡಿದ್ದರು.

ಸಂಚಾರಿ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ಗಲ್ಫ್‌ರೋಝ್ ಮುಜಾವರ್ ಅವರು “ನಾವು ರಸ್ತೆ ಬಿರುಕು ಬಿಟ್ಟಿರುವುದನ್ನು ಶುಕ್ರವಾರ ಬೆಳಿಗ್ಗೆ ಗಮನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚುವರಿ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...