Homeಮುಖಪುಟಮಹಾಭಾರತ ಬರೆದಿದ್ದು ಅಸ್ಪೃಶ್ಯನಾದ ವಾಲ್ಮಿಕಿ: ಯತ್ನಾಳ್ ಮತ್ತೆ ಎಡವಟ್ಟು

ಮಹಾಭಾರತ ಬರೆದಿದ್ದು ಅಸ್ಪೃಶ್ಯನಾದ ವಾಲ್ಮಿಕಿ: ಯತ್ನಾಳ್ ಮತ್ತೆ ಎಡವಟ್ಟು

- Advertisement -
- Advertisement -

ಸದನದಲ್ಲಿ ಸಂವಿಧಾನದ ಕುರಿತಾದ ಚರ್ಚೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡುತ್ತಾ, ಮಹಾಭಾರತವನ್ನು ಬರೆದಿದ್ದು  ವಾಲ್ಮೀಕಿ ಎಂದು ತಪ್ಪಾಗಿ ಹೇಳಿದ್ದಾರೆ.

ಅಂಬೇಡ್ಕರ್‌ ಭಾಷಣವನ್ನು ಉಲ್ಲೇಖ ಮಾಡುತ್ತಾ ಸದನದಲ್ಲಿ ಮಾತನಾಡಿದ ಬಸನಗೌಡ ಪಾಟಿಲ ಯತ್ನಾಳ್ “ಹಿಂದೂಗಳಿಗೆ ವೇದಗಳು ಬೇಕಾಗಿದ್ದವು ಆಗ ಅವರು ಕೆಳಜಾತಿಯವನಾದ ವ್ಯಾಸನನ್ನು ಕರೆದರು. ಅವರಿಗೊಂದು ಮಹಾ ಕಾವ್ಯ ಮಹಾಭಾರತ ಬೇಕಾಗಿತ್ತು, ಆವಾಗ ಅಸ್ಪೃಶ್ಯನಾದ ವಾಲ್ಮಿಕಿ ಬೇಕಾದ. ಇದೀಗ ಅವರಿಗೆ ಸಂವಿಧಾನದ ಅಗತ್ಯವಿದೆ ಅದಕ್ಕಾಗಿ ನನ್ನನ್ನು ಕರೆದರು” ಎಂದು ಅಂಬೇಡ್ಕರ್‌ ಮಾತನ್ನು ತಪ್ಪಾಗಿ ಹೇಳಿದರು. ಕೂಡಲೇ ಮಧ್ಯಪ್ರವೇಶ ಮಾಡಿದ ಇತರ ಸದಸ್ಯರು ಯತ್ನಾಳ್ ತಪ್ಪಾಗಿ ಉಲ್ಲೇಖ ಮಾಡಿದ್ದನ್ನು ಗಮನಕ್ಕೆ ತಂದರು. ಮಹಾಭಾರತವನ್ನು ಬರೆದದ್ದು ವ್ಯಾಸ ಮಹರ್ಷಿ ಹಾಗೂ ರಾಮಾಯಣ ಬರೆದಿದ್ದು ವಾಲ್ಮೀಕಿ ಎಂದು ತಪ್ಪನ್ನು ತಿದ್ದಿದರು.

ಈ ಹಿಂದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿಯವರನ್ನು ‘ಪಾಕ್‌ ಏಜೆಂಟ್‌” ಎಂದು ಕರೆಯುವ ಮೂಲಕ ಸುದ್ದಿಯಾಗಿದ್ದರು. ಪ್ರತಿಪಕ್ಷಗಳು ಯತ್ನಾಳ್ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದವು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

0
ಮಧುಮೇಹಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಜಾಮೀನು ಪಡೆಯಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಪ್ರತಿದಿನ ಮಾವಿನಹಣ್ಣು, ಆಲೂ ಪುರಿ ಮತ್ತು ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುವಾರ...