Homeಕರ್ನಾಟಕಪ್ರತ್ಯೇಕ ಉತ್ತರ ಕರ್ನಾಟಕ: ಮತ್ತೆ ಕತ್ತಿ ಬೀಸಿದ ಬಿಜೆಪಿ ಶಾಸಕ ಉಮೇಶ್ ಕತ್ತಿ...

ಪ್ರತ್ಯೇಕ ಉತ್ತರ ಕರ್ನಾಟಕ: ಮತ್ತೆ ಕತ್ತಿ ಬೀಸಿದ ಬಿಜೆಪಿ ಶಾಸಕ ಉಮೇಶ್ ಕತ್ತಿ…

ಮಹದಾಯಿ ಬಿಕ್ಕಟ್ಟು ಬಗೆಹರಿಸದಿದ್ದರೆ ಉತ್ತರ ಕರ್ನಾಟಕ ಹೋರಾಟ ಅನಿವಾರ್ಯ ಎಂದು ಉಮೇಶ್ ಕತ್ತಿ ಮತ್ತೆ ಗುಡುಗಿದ್ದಾರೆ.

- Advertisement -
- Advertisement -

ಮಹದಾಯಿ ಬಿಕ್ಕಟ್ಟು ಬಗೆಹರಿಸದಿದ್ದರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ  ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಗುಡುಗಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಮಾತುಗಳು ಮುನ್ನೆಲೆಗೆ ಬಂದಿದೆ. ಮಹದಾಯಿಗಾಗಿ ಸುದೀರ್ಘ ಹೋರಾಟ ನಡೆಸಿರುವ ರೈತರಿಗೆ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವುದಾಗಿ ತಮ್ಮ ಪಕ್ಷದ ವಿರುದ್ಧವೇ ಕತ್ತಿ ಮಸೆದಿದ್ದಾರೆ.

ಬೆಳಗಾವಿಯ ಸಂಕೇಶ್ವರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕದ 13 ಜಿಲ್ಲೆಗಳು ಹಾಗೂ ದಕ್ಷಿಣ ಮಹಾರಾಷ್ಟ್ರದ ಮೂರು ಜಿಲ್ಲೆಗಳನ್ನು ಸೇರಿಸಿ, ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿದ್ದಾರೆ. ಕೊಲ್ಹಾಪುರ, ಸೊಲ್ಲಾಪುರ, ಸಾಂಗ್ಲಿ ಜಿಲ್ಲೆಗಳನ್ನು ಸೇರಿಸಿಕೊಂಡು ಪ್ರತ್ಯೇಕ ರಾಜ್ಯ ರಚಿಸಿದರೆ ಮಾತ್ರ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯಾಗಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಲ್ಲಿ ಮಹದಾಯಿ ನದಿ ಹರಿಯುತ್ತದೆ. ಈಗ ಮೂರು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ಜತೆಗೆ ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಆಡಳಿತ ನಡೆಸುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡು ಮಹದಾಯಿ ಬಿಕ್ಕಟ್ಟು ಬಗೆಹರಿಸುವತ್ತ ಚಿಂತನೆ ನಡೆಸಬೇಕು. ಸಮಸ್ಯೆ ಬಗೆಹರಿಸಿ ನ್ಯಾಯ ಒದಗಿಸುವಂತೆ ಕೋರಿದರು.

ಇತ್ತ ಚಿಕ್ಕೋಡಿಯಲ್ಲಿ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ ಕತ್ತಿ, ನಾನು ಸಾಯುವುದರೊಳಗೆ ಅಖಂಡ ಕರ್ನಾಟಕದ ಮುಖ್ಯಮಂತ್ರಿಯಾಗದಿದ್ದರೂ, ಉತ್ತರ ಕರ್ನಾಟಕದ ಮುಖ್ಯಮಂತ್ರಿಯಾಗುತ್ತೇನೆ ಎಂದು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದರು. ನಮ್ಮ ಭಾಗದ ಜನರಿಗೆ ನೀರು ಕೊಡದಿದ್ದರೆ ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯವಾಗಲಿದೆ. ಯಾವುದೇ ಪಕ್ಷ ಆಡಳಿತದಲ್ಲಿದ್ದರೂ ಸರಿ ಅನ್ಯಾಯವಾದರೆ ಪ್ರತಿಭಟನೆ ಮಾಡಲೇಬೇಕಾಗುತ್ತದೆ. ಮುಂದಿನ ಮಾರ್ಚ್ ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದೊಳಗೆ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಕಾಲಾವಕಾಶ ನೀಡಿ, ಪರೋಕ್ಷವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...