Homeಮುಖಪುಟಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

- Advertisement -
- Advertisement -

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನಿಸಿದ್ದು, ಪ್ರಸ್ತುತ ನಡೆಯುತ್ತಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಭಾಗವಾಗಿ ಈ ಕುರಿತು ತನಿಖೆ ನಡೆಸುವಂತೆ ಕೋರಿದೆ.

ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ (AICC) ಕಾರ್ಯದರ್ಶಿಯೂ ಆಗಿರುವ ಮನ್ಸೂರ್ ಅಲಿ ಖಾನ್, ಮೇ 21 ರಂದು ಈ ದೂರು ಸಲ್ಲಿಸಿದ್ದರು. ಆಗಸ್ಟ್ 10 ರಂದು ಅದಕ್ಕೆ ಉತ್ತರಿಸಿದ್ದ ರಾಜ್ಯ ಆಯೋಗವು ದೂರಿನ ಅರ್ಜಿಯನ್ನು ಕೇಂದ್ರ ಆಯೋಗಕ್ಕೆ ಕಳುಹಿಸಿರುವುದಾಗಿ ತಿಳಿಸಿತ್ತು. ತಕ್ಷಣವೇ ಮನ್ಸೂರ್ ಅಲಿ ಖಾನ್ ದೆಹಲಿಯ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು, ಎಸ್‌ಐಆರ್ ಪರಿಷ್ಕರಣೆಯ ವೇಳೆಯಲ್ಲೇ ಈ ಎಲ್ಲಾ ಅಕ್ರಮಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕೆಂದು ಮನವಿ ಮಾಡಿದ್ದರು.

ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯನ್ನು ಕಾಂಗ್ರೆಸ್ ಪಕ್ಷವು ಆಂತರಿಕವಾಗಿ ವಿಶ್ಲೇಷಿಸಿದಾಗ 1 ಲಕ್ಷಕ್ಕೂ ಹೆಚ್ಚು ಶಂಕಾಸ್ಪದ ಮತ್ತು ನಕಲಿ ಹೆಸರುಗಳು ಪತ್ತೆಯಾಗಿದ್ದವು. ಇದರ ಆಧಾರದ ಮೇಲೆಯೇ ಗಾಂಧಿನಗರ ಮತ್ತು ಮಹದೇವಪುರ ಕ್ಷೇತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ದೂರಿದೆ. ಈ ವಿಚಾರವನ್ನು ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2024ರ ಲೋಕಸಭಾ ಚುನಾವಣೆಯ ಬಳಿಕ ಆಗಸ್ಟ್ 2025 ರಲ್ಲಿ ಸಾರ್ವಜನಿಕವಾಗಿ ಪ್ರಸ್ತಾಪಿಸಿದ್ದರು.

ಮುದ್ರಿತ ಪಟ್ಟಿಗಳನ್ನು ಭೌತಿಕವಾಗಿ ಪರಿಶೀಲಿಸಿದಾಗ, ಮಹದೇವಪುರ ಒಂದರಲ್ಲೇ ಒಟ್ಟು 1,00,250 ಅಕ್ರಮ ಹೆಸರುಗಳು ಕಂಡುಬಂದಿದ್ದವು. ಇದರಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸ ಹೊಂದಿರುವವರು, ಒಂದೇ ವಿಳಾಸದಲ್ಲಿ 10,452 ಮತದಾರರನ್ನು ನೋಂದಾಯಿಸಿರುವುದು, 4,132 ಅಸ್ಪಷ್ಟ ಛಾಯಾಚಿತ್ರಗಳು ಹಾಗೂ ಫಾರ್ಮ್ 6ರ ದುರ್ಬಳಕೆಯ 33,692 ಪ್ರಕರಣಗಳು ಸೇರಿದ್ದವು.

ಈ ಅಕ್ರಮಗಳು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಫಲಿತಾಂಶದ ಮೇಲೆ ತೀವ್ರ ಪರಿಣಾಮ ಬೀರಿವೆ ಎಂದು ಕಾಂಗ್ರೆಸ್ ವಾದಿಸಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್ ಅವರು ಬಿಜೆಪಿಯ ಪಿ.ಸಿ. ಮೋಹನ್ ವಿರುದ್ಧ 32,707 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೆ ಬಿಜೆಪಿ ಈ ಲೋಕಸಭಾ ಕ್ಷೇತ್ರದ ಮಹದೇವಪುರ ಅಸೆಂಬ್ಲಿ ಭಾಗವೊಂದರಲ್ಲೇ ಬರೋಬ್ಬರಿ 1.14 ಲಕ್ಷ ಮತಗಳ ಭಾರಿ ಮುನ್ನಡೆ ಸಾಧಿಸಿತ್ತು. ಈ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪ್ರಕರಣವೂ ದಾಖಲಾಗಿತ್ತು.

ಈ ಹಿಂದೆ ಆಯೋಗವು ಆಕ್ಷೇಪಣೆ ಸಲ್ಲಿಕೆಯ ಅವಧಿಯಲ್ಲೇ ದೂರು ನೀಡಬೇಕೆಂದು ತಿಳಿಸಿತ್ತು. ಇದೀಗ ಕರ್ನಾಟಕದಲ್ಲಿ ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಂಡು ಎಸ್‌ಐಆರ್ ಪರಿಷ್ಕರಣೆ ಚಾಲ್ತಿಯಲ್ಲಿರುವುದರಿಂದ, ಒಟ್ಟು 4.46 ಕೋಟಿ ಮತದಾರರ ಪೈಕಿ ಸಂಶಯಾಸ್ಪದವಾಗಿರುವ 43.81 ಲಕ್ಷ ಜನರಿಗೆ ನೋಟಿಸ್ ನೀಡಲಾಗುತ್ತಿದೆ. ರಾಜ್ಯ ಆಯೋಗವು ದೂರು ರವಾನಿಸಿರುವುದರಿಂದ, ಕಾಂಗ್ರೆಸ್ ತನ್ನ ಹಳೆಯ ಆರೋಪಗಳನ್ನು ಈ ಎಸ್‌ಐಆರ್ ಪ್ರಕ್ರಿಯೆಯಲ್ಲೇ ಪೂರ್ಣಪ್ರಮಾಣದಲ್ಲಿ ತನಿಖೆ ಮಾಡುವಂತೆ ಒತ್ತಾಯಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...