Homeಕರ್ನಾಟಕನಕಲಿ ಇತಿಹಾಸದ ಉರಿಗೌಡ, ನಂಜೇಗೌಡರ ಹೆಸರಲ್ಲಿ ಮಹಾದ್ವಾರ; ನಗೆಪಾಟಲಿಗೀಡಾದ ಸಂಘಪರಿವಾರ

ನಕಲಿ ಇತಿಹಾಸದ ಉರಿಗೌಡ, ನಂಜೇಗೌಡರ ಹೆಸರಲ್ಲಿ ಮಹಾದ್ವಾರ; ನಗೆಪಾಟಲಿಗೀಡಾದ ಸಂಘಪರಿವಾರ

ಒಕ್ಕಲಿಗರಿಗೆ ದೇಶದ್ರೋಹ ಪಟ್ಟ ಕಟ್ಟಲು ಸಂಘಪರಿವಾರ ಯತ್ನಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ಬೆಂಗಳೂರು ಮೈಸೂರು ನಡುವೆ ನಿರ್ಮಿಸಿರುವ 118 ಕಿಲೋ ಮೀಟರ್‌ ಉದ್ದದ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿರುವ ಸಂದರ್ಭದಲ್ಲಿ ನಕಲಿ ಇತಿಹಾಸದ ಉರಿಗೌಡ, ನಂಜೇಗೌಡ ಹೆಸರಿನಲ್ಲಿ ಮಹಾದ್ವಾರ ನಿರ್ಮಿಸಿರುವ ಸಂಘ ಪರಿವಾರ ನಗೆಪಾಟಲಿಗೀಡಾಗಿದೆ.

ಟಿಪ್ಪು ಹತ್ಯೆ ಮಾಡಿದ್ದು ಉರಿಗೌಡ, ನಂಜೇಗೌಡ ಎಂದು ವಾಟ್ಸ್‌ಅಪ್‌ನಲ್ಲಿ ಬಂದ ಸುಳ್ಳನ್ನೇ ಸತ್ಯವೆಂದು ನಂಬಿಸಲು ಹೊರಟಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಡ್ಯದ ಹೆದ್ದಾರಿಯಲ್ಲಿ ಹಾಕಲಾಗಿರುವ ‘ಉರಿಗೌಡ, ದೊಡ್ಡ ನಂಜೇಗೌಡ ಮಹಾದ್ವಾರ’ವನ್ನು ತೆರವುಗೊಳಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಕೈಯಲ್ಲಿ ಖಡ್ಗವಿಡಿದು ನಿಂತಿರುವ ತಮಿಳುನಾಡಿನ ವೀರರ ಚಿತ್ರವನ್ನೇ ಉರಿಗೌಡ, ನಂಜೇಗೌಡ ಎಂದು ಹರಿಬಿಟ್ಟಿರುವುದು ಈಗಾಗಲೇ ಬಯಲಾಗಿದೆ. ಆ ಚಿತ್ರಗಳನ್ನೇ ಇಲ್ಲಿನ ಮಹಾದ್ವಾರದಲ್ಲೂ ಹಾಕಿಕೊಳ್ಳಲಾಗಿದೆ.

ಮರುದು ಪಾಂಡ್ಯರು (ಪೆರಿಯ ಮರುದು ಮತ್ತು ಚಿನ್ನ ಮರುದು) 18ನೇ ಶತಮಾನದ ಅಂತ್ಯದಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯದಲ್ಲಿ ಪ್ರಸಿದ್ಧರಾಗಿದ್ದರು ಎಂದು ಲಭ್ಯವಿರುವ ಮಾಹಿತಿಗಳು ಹೇಳುತ್ತವೆ. ಈ ಇಬ್ಬರು ಸಹೋದರರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಸೆರೆಹಿಡಿದು ಗಲ್ಲಿಗೇರಿಸಲಾಯಿತು ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಅವರ ಚಿತ್ರವನ್ನೇ ‘ಉರಿಗೌಡ, ನಂಜಗೌಡ’ ಎಂಬ ಕಾಲ್ಪನಿಕ ಕತೆಗೆ ಬಳಸಿಕೊಳ್ಳಲಾಗಿದೆ.

ಕವಿ ರಾಜೇಂದ್ರ ಪ್ರಸಾದ್ ಈ ಕುರಿತು ಪೋಸ್ಟ್ ಮಾಡಿದ್ದು, “ಪ್ರಧಾನಿಯವರು ಜಿಲ್ಲೆಗೆ ಆಗಮಿಸುತ್ತಿರುವ ಹೊತ್ತಿನಲ್ಲಿ ಬಿಜೆಪಿ ಪಕ್ಷವು ಕಪೋಲಕಲ್ಪಿತವಾದ ‘ ಉರಿಗೌಡ & ನಂಜೇಗೌಡ’ ಹೆಸರುಗಳಲ್ಲಿ ಹಾಕಿರುವ ಫ್ಲೆಕ್ಸ್ ಗಳನ್ನು ಕೂಡಲೇ ತೆರೆವು ಗೊಳಿಸಿ ಎಲ್ಲವೂ ಶಾಂತಿಯುತವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಸದರಿ ಫ್ಲೆಕ್ಸ್ ಬೋರ್ಡ್‌ನಲ್ಲಿ ಕೋಮು ಪ್ರಚೋದಿತ ಸುಳ್ಳು ಮತ್ತು ಅಶಾಂತಿ ಹರಡುವ ಉದ್ದೇಶಗಳು ಇರುವ ಕಾರಣ ಅದನ್ನ ಹಾಕಲು ಜಿಲ್ಲಾಡಳಿತವು ಅವಕಾಶ ನೀಡಬಾರದಿತ್ತು. ಸರ್ಕಾರದ ಸಾರ್ವಜನಿಕ ಕಾರ್ಯಕ್ರಮಗಳಲ್ಲೇ ಇಂತಹ ಕೋಮುವಾದಿ ಮತ್ತು ಸುಳ್ಳಿನ ಪೋಸ್ಟರ್ ಗಳನ್ನು ಬಳಸುವುದು, ಪ್ರಚಾರ ಮಾಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

“ತಾವು ಸಂಜೆಯೊಳಗೆ ಈ ವಿವಾದಾತ್ಮಕ ಫ್ಲೆಕ್ಸ್ ಬೋರ್ಡ್‌ಗಳನ್ನು ತೆರೆವುಗೊಳಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್, ಜೆಡಿಎಸ್, ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ರಾಜಕೀಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಇಂತಹ ಕೇಡಿನ ಕೆಲಸಗಳ ವಿರುದ್ದ ತೀವ್ರವಾದ ಪ್ರತಿಭಟನೆಯನ್ನ ನಾಳೆ ಹಮ್ಮಿಕೊಳ್ಳಲು ಕಾರಣವಾಗುತ್ತದೆ. ತಾವು ಇದಕ್ಕೆ ಅವಕಾಶ ಕೊಡದೇ ಯಾವುದೇ ಮುಲಾಜುಗಳಿಗೆ ಒಳಗಾಗದೇ ಸಕ್ಕರೆ ಕಾರ್ಖಾನೆ ವೃತ್ತದಲ್ಲಿರುವ (ಬಿ.ಜಿ ದಾಸೇಗೌಡ ವೃತ್ತ) ಫ್ಲೆಕ್ಸ್ ಬೋರ್ಡ್‌‌ಗಳನ್ನು ತೆರೆವು ಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಪ್ರತಿಕ್ರಿಯಿಸಿದ್ದು, “ಹಾಕಿರುವ ಫ್ಲೆಕ್ಸ್‌ಗಳನ್ನು ಕೂಡಲೇ ತೆರೆವುಗೊಳಿಸಿ ಜಿಲ್ಲೆಯನ್ನು ಕೋಮು ದಳ್ಳುರಿಗೆ ತಳ್ಳುವ ಬಿಜೆಪಿಯ ಪ್ರಯತ್ನಗಳನ್ನು ವಿಫಲಗೊಳಿಸಬೇಕು ಎಂದು ಮಂಡ್ಯ ಜಿಲ್ಲಾಡಳಿತವನ್ನು CPIM ಮಂಡ್ಯ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ” ಎಂದಿದ್ದಾರೆ.

“ಉರೀಗೌಡ ಮತ್ತು ದೊಡ್ಡ ನಂಜೇಗೌಡ ಎಂಬ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಅವರು ಟಿಪ್ಪುವನ್ನು ಕೊಂದ ಸೈನಿಕರು ಎಂದು ಸುಳ್ಳು ಕತೆ ಕಟ್ಟಿ ಒಕ್ಕಲಿಗರನ್ನು ಟಿಪ್ಪು ವಿರುದ್ಧ ಹೋರಾಡಿ ಬ್ರಿಟೀಷರಿಗೆ ಸಹಾಯ ಮಾಡಿದರು ಎಂದು ಬಿಂಬಿಸಲಾಗುತ್ತಿದೆ. ಆ ಮೂಲಕ ಒಕ್ಕಲಿಗರನ್ನು ಬ್ರಿಟೀಷರ ಏಜೆಂಟರು ಎಂದು ಅವಮಾನಿಸುವ ಕೆಲಸವನ್ನು ಬಿಜೆಪಿ ಮತ್ತು ಸಂಘ ಪರಿವಾರ ಮಾಡುತ್ತಿದೆ. ಇದರ ಮುಂದವರಿಕೆಯಾಗಿ ಪ್ರಧಾನಿಯೊಬ್ಬರ ಬೇಟಿಯ ಘನತೆಯನ್ನೂ ಮಣ್ಣು ಪಾಲು ಮಾಡಿ ತನ್ನ ಸುಳ್ಳಿನ, ವಿಕೃತಿಯ ಪ್ರಚಾರದಲ್ಲಿ ಬಿಜೆಪಿ ನಿರತವಾಗಿದೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ‘ಉರಿಗೌಡ, ನಂಜೇಗೌಡ’ರು ಜೀವಿಸಿದ್ದ ಯಾವುದೇ ಕುರುಹು ಇಲ್ಲ: ಆದರೂ ಸುಳ್ಳು ಹೇಳುತ್ತಿರುವ ಬಿಜೆಪಿ

ಲೇಖಕ ಚಂದ್ರಪ್ರಭ ಕಟಾರಿ ಪ್ರತಿಕ್ರಿಯಿಸಿದ್ದು, “ವಾಟ್ಸಪ್ ಯೂನಿವರ್ಸಿಟಿ ಹುಟ್ಟಿ(ಸಿ)ದ ಉರಿಗೌಡ ಮತ್ತು ನಂಜೇಗೌಡರು ಬ್ರಿಟಿಷರ ಪರವಾಗಿ ಯುದ್ಧ ಮಾಡಿದರು ಎಂಬ ಕಟ್ಟುಕತೆ ಈಗ ಅಕ್ಷರಶಃ ಬೀದಿಯಲ್ಲಿ ರಾರಾಜಿಸುತ್ತಿದೆ. ಸಂಘಿಗಳು ವ್ಯವಸ್ಥಿತವಾಗಿ ತಮ್ಮ ರಾಜಕೀಯ ಲಾಭಕ್ಕಾಗಿ ಇಂಥ ದೇಶದ್ರೋಹದ ಅಪವಾದವನ್ನು ಒಕ್ಕಲಿಗ ಸಮುದಾಯದ ಹಣೆಗೆ ಕಟ್ಟಲು ಪಣ ತೊಟ್ಟಂತಿದೆ. ಅಪಾರ ಕನ್ನಡಾಭಿಮಾನದ ಒಕ್ಕಲಿಗರು ಇದನ್ನು ಪ್ರತಿಭಟಿಸಿ, ಈ ಕಟ್ಟುಕತೆ ಮುಂದುವರೆಯದಂತೆ ನೋಡಿಕೊಳ್ಳುವ ಅನಿವಾರ್ಯತೆ ಈಗ ಅವರ ಹೆಗಲಿಗೇರಿದೆ. ಪಕ್ಷಾತೀತವಾಗಿ ಇದನ್ನು ಈಗಲೇ ಚಿವುಟಿ ಹಾಕದಿದ್ದರೆ, ಒಕ್ಕಲಿಗ ಸಮುದಾಯವು ಬ್ರಿಟಿಷರ ಪರವಾಗಿತ್ತು ಎಂಬ ಕಪೋಲಕಲ್ಪಿತ ಕತೆಯು ಮುಂದಿನ ಪೀಳಿಗೆಯ ಜನಮಾನಸದಲ್ಲಿ ಶಾಶ್ವತವಾಗಿ ಉಳಿದು, ದೇಶದ್ರೋಹದ ಪಟ್ಟದ ಅಪಾಯವಂತೂ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಸಿದ್ದಾರೆ.

ಪತ್ರಕರ್ತ ನವೀನ್ ಸೂರಿಂಜೆ ಅವರ ಪೋಸ್ಟ್‌ಅನ್ನು ಲೇಖಕ ನಾಗೇಗೌಡ ಕೀಲಾರ ಹಂಚಿಕೊಂಡಿದ್ದಾರೆ. “ಮಂಡ್ಯ ಎನ್ನುವುದು ಸ್ವಾತಂತ್ರ್ಯ ಚಳವಳಿಯಲ್ಲಿ ದೊಡ್ಡ ಹೆಸರು. ಬ್ರಿಟೀಷರ ಎದೆ ನಡುಗಿಸಿದ ಸ್ವಾತಂತ್ರ್ಯ ಚಳವಳಿ ಈ ನೆಲದಲ್ಲಿ ನಡೆದಿತ್ತು. ಇಂತಹ ಮಂಡ್ಯಕ್ಕೆ ಈ ದೇಶದ ಪ್ರಧಾನಿ ಆಗಮಿಸುವಾಗ ಸ್ವಾಗತ ದ್ವಾರ ನಿರ್ಮಿಸಲು ಒಬ್ಬ ಅಸಲೀ ಸ್ವಾತಂತ್ರ್ಯ ಹೋರಾಟಗಾರನ ಹೆಸರು ನೆನಪಿಗೆ ಬರಲಿಲ್ಲವೇ ? ಪ್ರಧಾನಿ ಬಿಜೆಪಿಯೇ ಆಗಲಿ, ಸುಳ್ಳುಕೋರನೇ ಆಗಲೀ. ಅವರು ಜಿಲ್ಲೆಗೆ ಬಂದಿದ್ದರು ಎಂಬುದು ಇತಿಹಾಸದ ಪುಟದಲ್ಲಿ ಉಳಿಯುತ್ತದೆ. ಅಂತಹ ಇತಿಹಾಸದ ಪುಟದಲ್ಲಿ ಒಕ್ಕಲಿಗರ ಅವಹೇಳನ ಸೇರ್ಪಡೆಗೊಳ್ಳುವುದು ಸರಿಯೇ?” ಎಂದು ಸೂರಿಂಜೆ ಪ್ರಶ್ನಿಸಿದ್ದಾರೆ.

ಹೋರಾಟಗಾರರು ಹಾಗೂ ವೈದ್ಯರೂ ಆದ ಎಚ್.ವಿ.ವಾಸು ಅವರು ಪ್ರತಿಕ್ರಿಯಿಸಿ, “ಇದು ಮಂಡ್ಯ ಜಿಲ್ಲೆಗೆ ಮಾಡುತ್ತಿರುವ ಅವಮಾನವೆಂಬುದರಲ್ಲಿ ಸಂದೇಹವಿಲ್ಲ. ಮಂಡ್ಯದ ಕುರಿತು ಹೊರಗೆ ಹಲವು ಪೂರ್ವಗ್ರಹಗಳಿವೆ. ಅವರು ತೀರಾ ‘Mandya centred’, ಜಾತಿ ಕೇಂದ್ರಿತ ಮನೋಭಾವ ಇರುವವರು, ಮಂಡ್ಯ ಕುರಿತಂತೆ ದುರಭಿಮಾನ ಹೊಂದಿರುವವರು ಇತ್ಯಾದಿ. ಮಂಡ್ಯದ ಜೊತೆ ಕಳೆದ 23 ವರ್ಷಗಳ ಒಡನಾಟ, 12 ವರ್ಷಗಳ ಕಾಲ ಅಲ್ಲಿಯೇ ವಾಸ ಮಾಡಿದ್ದುದರ ಆಧಾರದ ಮೇಲೆ ಹೇಳುವುದಾದರೆ ಅವೆಲ್ಲವೂ ಸುಳ್ಳು… ಒಂದು ಸಹಜ ವಿಶಾಲ ಮನೋಭಾವ, ನೆಲಮೂಲದ ವಿವೇಕವನ್ನು ಹೊಂದಿರುವ ಸಮುದಾಯ ಅಲ್ಲಿದೆ. (ಎಲ್ಲಾ ಕಡೆ ಇರುವ ಸಮಸ್ಯೆಗಳು, ಕೆಡುಕು ಅಲ್ಲೂ ಇದೆ; ಇರುತ್ತದೆ)” ಎಂದು ವಿವರಿಸಿದ್ದಾರೆ.

“ಯಾವ ಸಂದೇಹವೂ ಇಲ್ಲದೇ ಹೇಳಬಹುದಾದ ಸಂಗತಿಯೆಂದರೆ – ಇಂದು ಮಂಡ್ಯದಲ್ಲಿ ದ್ವಾರದಲ್ಲಿ ಹೆಸರಿಸಲಾಗಿರುವ ಎರಡು ಫೇಕ್ ಪಾತ್ರಗಳು ಒಕ್ಕಲಿಗ ಸಮುದಾಯಕ್ಕೂ, ಮಂಡ್ಯಕ್ಕೂ ದೊಡ್ಡ ಅವಮಾನವಲ್ಲದೇ ಬೇರೇನೂ ಅಲ್ಲ. ಇಂದಿಗೂ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಡಾ.ಸಿ.ಬಂದೀಗೌಡರು, ನಮ್ಮೆಲ್ಲರನ್ನು ಪೊರೆದ ಹಿರಿಯ ಜೀವ ಪ್ರೊ.ಎಚ್.ಎಲ್.ಕೇಶವಮೂರ್ತಿ, ದಸಂಸದ ಹಿರಿಯ ನಾಯಕ ನಾರಾಯಣ್ ಇಂಥವರನ್ನು ನೆನೆದರೇನೇ ಮನಸ್ಸಿನಲ್ಲಿ ಗೌರವ, ಪ್ರೀತಿ ಉಕ್ಕುತ್ತದೆ. ಹಾಗೆಯೇ ನಾವು ದಾರಿ ತಪ್ಪಬಾರದು ಎಂಬ ಎಚ್ಚರ ಮೂಡುತ್ತದೆ. ಅವರಂಥವರ ಸಹವಾಸದಲ್ಲಿ ಒಂದೆರಡು ದಶಕಗಳ ಕಾಲ ಇದ್ದ ನಾವುಗಳು ಮಂಡ್ಯಕ್ಕೆ ಈ ಅವಮಾನ ಆಗದಂತೆ ನೋಡಿಕೊಳ್ಳಬೇಕು. ಇದು ನಮ್ಮ ಕರ್ತವ್ಯ” ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...