Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

- Advertisement -
- Advertisement -

ಬಿಹಾರದ ವಿರೋಧ ಪಕ್ಷಗಳ ‘ಮಹಾಘಟಬಂಧನ್’ ಮೈತ್ರಿಕೂಟವು ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳವಾರ (ಅ.28) ತನ್ನ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ ಸೇರಿದಂತೆ ಭರಪೂರ ಭರವಸೆಗಳನ್ನು ನೀಡಿದೆ.

ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ಪ್ರಣಾಳಿಕೆಯಲ್ಲಿ ಪ್ರಮುಖ ಅಂಶಗಳಾಗಿವೆ.

ಹಳೆಯ ಪಿಂಚಣಿ ಯೋಜನೆಯ (ಒಪಿಎಸ್‌) ಅನುಷ್ಠಾನದ ಭರವಸೆಯನ್ನು ಕೂಡ ಪ್ರಣಾಳಿಕೆ ನೀಡಿದೆ.

ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಅವರನ್ನು ಘೋಷಿಸಿದ ಬೆನ್ನಲ್ಲೇ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ವಿಕಾಸ್‌ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಮಹಾ ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೊಷಣೆ ಮಾಡಲಾಗಿದೆ.

ಬಿಹಾರದ ಆಡಳಿತಾರೂಢ ಎನ್‌ಡಿಎ ಅಕ್ಟೋಬರ್ 30 ರಂದು ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಮಹಾಘಟಬಂಧನ್ (ಮಹಾ ಮೈತ್ರಿಕೂಟ) ಅಥವಾ ಇಂಡಿಯಾ ಒಕ್ಕೂಟದ ಪ್ರಣಾಳಿಕೆಯ ಮುಖ್ಯಾಂಶಗಳು ಹೀಗಿವೆ.

  • ಸರ್ಕಾರ ರಚನೆಯಾದ 20 ದಿನಗಳಲ್ಲಿ, ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಸಿಗುವಂತೆ ಕಾನೂನು ರೂಪಿಸುವುದು, ಮುಂದಿನ 20 ತಿಂಗಳೊಳಗೆ ಉದ್ಯೋಗ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದು.
  • ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ 5 ವರ್ಷಗಳಲ್ಲಿ 3 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸುವುದು. ಇದರಲ್ಲಿ 1 ವರ್ಷದೊಳಗೆ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದೆ.
  • ರಾಜ್ಯದ ನಗರ ಪ್ರದೇಶದ ಯುವಕರಿಗೆ ಉದ್ಯೋಗಾವಕಾಶಗಳಿಗಾಗಿ ‘ಬಿಹಾರ ಉದ್ಯೋಗ ಖಾತರಿ ಮಿಷನ್’ ಮತ್ತು ಪದವೀಧರರು ಮತ್ತು ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ.
  • ‘ಮಾಯಿ-ಬಹಿನಿ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ 2,500 ರೂಪಾಯಿ ಮಾಸಿಕ ಆರ್ಥಿಕ ಸಹಾಯ
  • ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ
  • ಗ್ರಾಮೀಣ ಮಹಿಳಾ ಉತ್ಪಾದಕರನ್ನು ಬೆಂಬಲಿಸಲು ರಾಜ್ಯದ ಮದ್ಯ ನಿಷೇಧ ಕಾನೂನಿನಿಂದ ‘ಟೋಡಿ’ಗೆ (ತಾರಿ, ಸಾಂಪ್ರದಾಯಿಕ ತಾಳೆ ಮದ್ಯ) ವಿನಾಯಿತಿ
  • ಬಡ ಮತ್ತು ಮಧ್ಯಮ ವರ್ಗದ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್
  • ಸಂಪೂರ್ಣ ಕೃಷಿ ಸಾಲ ಮನ್ನಾ
  • ಎಲ್ಲಾ ಬೆಳೆಗಳಿಗೆ ಇನ್ಪುಟ್ ವೆಚ್ಚಗಳು + 50 ಶೇಕಡ ಲಾಭವನ್ನು ಒಳಗೊಂಡ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗ್ಯಾರಂಟಿ
  • ಪ್ರತಿ ಭೂಹೀನ ಕುಟುಂಬಕ್ಕೆ 5 ದಶಮಾಂಶ ಭೂಮಿ (ಸುಮಾರು 1/20 ಎಕರೆ)
  • ಶಿಶುವಿಹಾರದಿಂದ ಪದವಿ ವರೆಗೆ ಉಚಿತ ಶಿಕ್ಷಣ.
  • ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಪುನಃಸ್ಥಾಪನೆ
  • ಜಾತಿ ಆಧಾರಿತ ಜನಗಣತಿ ಮತ್ತು ಹೊಸ ದತ್ತಾಂಶಗಳ ಆಧಾರದ ಮೇಲೆ ಮೀಸಲಾತಿ ಕೋಟಾಗಳ ಪರಿಶೀಲನೆ
  • ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ವರ್ಗಕ್ಕೆ ಇನ್ನು ಹೆಚ್ಚಿನ ಸಮುದಾಯಗಳನ್ನು ಸೇರಿಸಲು ಮೀಸಲಾತಿ ಮೇಲಿನ ಶೇಕಡ 50ರ ಮಿತಿಯನ್ನು ತೆಗೆದುಹಾಕುವುದು.
  • ಎಲ್ಲಾ ಕುಟುಂಬಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆ
  • ಹಸಿರು ಬಿಹಾರ ಮಿಷನ್ ಅಡಿ ಅರಣ್ಯೀಕರಣ, ವಿಸ್ತೃತ ನೀರಾವರಿ, ನವೀಕರಿಸಬಹುದಾದ ಇಂಧನ ಯೋಜನೆಗಳು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಹಾಗೂ ವಲಸೆಯನ್ನು ತಡೆಯಲು ಹೊಸ ಕೈಗಾರಿಕಾ ಕಾರಿಡಾರ್‌ಗಳು
  • ಬಿಹಾರವನ್ನು ‘ಅಪರಾಧ ಮುಕ್ತ’ ಗೊಳಿಸಲು ವರ್ಧಿತ ಪೊಲೀಸ್ ವ್ಯವಸ್ಥೆ ಮತ್ತು ಕೋಮು ವಿರೋಧಿ ಉಪಕ್ರಮಗಳು ಸೇರಿದಂತೆ ಕಠಿಣ ಅಪರಾಧ ವಿರೋಧಿ ಕ್ರಮಗಳ ಜಾರಿ
  • ವಕ್ಫ್ ತಿದ್ದುಪಡಿ ಕಾಯ್ದೆಯು ರಾಜ್ಯದ ಹಕ್ಕುಗಳನ್ನು ಅತಿಕ್ರಮಿಸಿದರೆ ಅದನ್ನು ರದ್ದುಗೊಳಿಸುವುದು
  • ಯುವಜನರ ವಲಸೆ ನಿಲ್ಲಿಸಲು ಮತ್ತು ‘ಬಿಹಾರದ ಸ್ವಾಭಿಮಾನ’ವನ್ನು ಪುನಃಸ್ಥಾಪಿಸಲು ಕೈಗಾರಿಕೆಗಳಿಗೆ ಪ್ರೋತ್ಸಾಹ.

ಎರಡು ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ: ಪ್ರಶಾಂತ್ ಕಿಶೋರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...