Homeಮುಖಪುಟದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ 'ಮಹಾಪಂಚಾಯತ್'

ದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ‘ಮಹಾಪಂಚಾಯತ್’

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ರಾಮಲೀಲಾ ಮೈದಾನದಲ್ಲಿ ರೈತರು ಇಂದು (ಮಾ.14) ‘ಮಹಾಪಂಚಾಯತ್’ ಹಮ್ಮಿಕೊಂಡಿದ್ದಾರೆ.

ದೆಹಲಿ ಚಲೋ ಹಮ್ಮಿಕೊಂಡಿರುವ ರೈತರನ್ನು ಪಂಜಾಬ್-ಹರಿಯಾಣದ ಖಾನೌರಿ ಮತ್ತು ಶಂಭು ಗಡಿಗಳಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಫೆ.13ರಂದು ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿರುವ ರೈತರು, ಇನ್ನೂ ಕೂಡ ಗಡಿಗಳಲ್ಲೇ ಇದ್ದಾರೆ.

ಈ ನಡುವೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ‘ಕಿಸಾನ್ ಮಝ್ದೂರ್ ಮಹಾಪಂಚಾಯತ್’ ಎಂಬ ಹೆಸರಿನಲ್ಲಿ ದೆಹಲಿಯಲ್ಲಿ ಸಭೆ ಆಯೋಜಿಸಿದೆ. ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇವಲ 5,000 ಮಂದಿ ಮಾತ್ರ ಪಾಲ್ಗೊಳ್ಳಬೇಕು, ಕೋಲು, ಬಡಿಗೆಯ ಅಥವಾ ಯಾವುದೇ ಹರಿತವಾದ ಆಯುಧಗಳು, ಮತ್ತು ಟ್ರ್ಯಾಕ್ಟರ್‌ಗಳನ್ನು ತರಬಾರದು ಎಂದು ಮಹಾ ಪಂಚಾಯತ್‌ಗೆ ಅನುಮತಿ ನೀಡುವಾಗ ದೆಹಲಿ ಪೊಲೀಸರು ಸೂಚಿಸಿದ್ದಾರೆ. ಮತ್ತೊಂದೆಡೆ ರೈತರ ಮಹಾಪಂಚಾಯತ್ ಹಿನ್ನೆಲೆ ದೆಹಲಿ ಸಂಚಾರಿ ಪೊಲೀಸರು ಕೆಲವೆಡೆ ಸಂಚಾರ ಮಾರ್ಗ ಬದಲಾಯಿಸಿದ್ದಾರೆ.

ನಾವು 5000 ಜನರು ಮಾತ್ರ ಪಾಲ್ಗೊಳ್ಳುವಂತೆ ಸೂಚಿಸಿದ್ದೇವೆ. ಆದರೆ, 15 ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 30 ಸಾವಿರ ರೈತರು ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಎಸ್‌ಕೆಎಂ ತಿಳಿಸಿದೆ.

ಫೆಬ್ರವರಿ 22ರಂದು ಚಂಢೀಗಡದಲ್ಲಿ ಸಭೆ ನಡೆಸಿದ್ದ ಎಸ್‌ಕೆಎಂ, ಇಂದು ಮಹಾಪಂಚಾಯತ್ ನಡೆಸುವ ಬಗ್ಗೆ ಘೋಷಿಸಿತ್ತು. ಪೊಲೀಸರು ಮಾರ್ಚ್‌ 11ರಂದು ಅನುಮತಿ ನೀಡಿದ್ದರು. ಎಸ್‌ಕೆಎಂ 37 ರೈತ ಸಂಘಟನೆಗಳ ಮಹಾ ಒಕ್ಕೂಟವಾಗಿದೆ.

ವರದಿಗಳ ಪ್ರಕಾರ, ಮೋದಿ ಸರ್ಕಾರದ ಕಾರ್ಪೊರೇಟ್ ಪರ, ಕೋಮುವಾದಿ, ಸರ್ವಾಧಿಕಾರಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು, ಕೃಷಿ, ಆಹಾರ ಭದ್ರತೆಯನ್ನು ಉಳಿಸಲು ಹೋರಾಡಲು, ಜೀವನೋಪಾಯ ಮತ್ತು ಕಾರ್ಪೊರೇಟ್ ಲೂಟಿಯಿಂದ ಜನರನ್ನು ರಕ್ಷಿಸಲು ಮಹಾಪಂಚಾಯತ್‌ನಲ್ಲಿ ರೈತರು ಸಂಕಲ್ಪ ಪತ್ರ’ ಅಥವಾ ‘ನಿರ್ಣಯದ ಪತ್ರ’ವನ್ನು ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ : ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...