Homeಚಳವಳಿಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸವಾಲು ಹಾಕುತ್ತಾ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕ ಯಶಸ್ಸು ಕಂಡಿದೆ.

ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಅವರಿಗೆ ಸೆಡ್ಡು ಹೊಡೆದಿರುವ ರೈತರು, ಮುಜಾಫರ್‌ನಗರದಲ್ಲಿ  ಸೆಪ್ಟೆಂಬರ್‌ 5ರ ಭಾನುವಾರ ಹಿಂದೂ-ಮುಸ್ಲಿಂ ರೈತರು ಒಗ್ಗೂಡಿ ಅತಿ ದೊಡ್ಡ ಕಿಸಾನ್ ಮಹಾಪಂಚಾಯತ್ ನಡೆಸಿ ಯಶಸ್ವಿಯಾಗಿದ್ದಾರೆ. ಕಳೆದ ಹತ್ತು ತಿಂಗಳುಗಳಿಂದ ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತ ಸಂಘಗಳ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಈ ಮಹಾಪಂಚಾಯತ್ ಯೋಜಿಸಿತ್ತು.

2013 ರಲ್ಲಿ ಕೋಮು ಗಲಭೆಗಳಿಂದ ಕಂಗೆಟ್ಟಿದ್ದ ಪಶ್ಚಿಮ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯು, ಬಿಜೆಪಿ ಬರುವವರೆಗೂ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ಯ ಭದ್ರಕೋಟೆಯಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

ಭಾನುವಾರ, ಭಾರತೀಯ ಕಿಸಾನ್ ಯೂನಿಯನ್‌ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯುಪಿ ಜನರು ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಸಹಿಸುವುದಿಲ್ಲ. ನಾವು ಈ ರೀತಿಯ ಸರ್ಕಾರಗಳನ್ನು ಆಯ್ಕೆ ಮಾಡಿದರೆ, ಗಲಭೆಗಳು ಉಂಟಾಗುತ್ತವೆ. ಈ ಸ್ಥಳ ಈ ಹಿಂದೆ “ಅಲ್ಲಾಹು ಅಕ್ಬರ್, ಹರ್ ಹರ್ ಮಹದೇವ್” ಎಂಬ ಘೋಷಣೆಗಳಿಗೆ ಸಾಕ್ಷಿಯಾಗಿತ್ತು. ಇವರೆಲ್ಲಾ ವಿಭಜನೆಯ ಬಗ್ಗೆ ಮಾತನಾಡುತ್ತಾರೆ, ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಹೇಳಿದ್ದಾರೆ.

“ಕಾಯ್ದೆಗಳನ್ನು ಹಿಂಪಡೆಯುವವರೆಗೂ ಮನೆಗೆ ಮರುಳುವ ಮಾತೇ ಇಲ್ಲ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಬೇಕು. ರೈತರ ಮೇಲಿರುವ ಪ್ರಕರಣಗಳನ್ನು ಕೈಬಿಡಬೇಕು” ಎಂದು ರಾಕೇಶ್‌ ಟಿಕಾಯತ್‌ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ಗೌರಿ’ ಕಿರುಚಿತ್ರ ಬಿಡುಗಡೆ: ವಾರ್ತಾಭಾರತಿಯಿಂದ ದಿಟ್ಟ ಪತ್ರಕರ್ತೆಗೆ ಗೌರವ ಸಮರ್ಪಣೆ

“ದೇಶವನ್ನು ಉಳಿಸುವುದಕ್ಕಾಗಿ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಹೇಳಿದ ಟಿಕಾಯತ್‌ ಅವರು, ಈ ರೀತಿಯ ಪಂಚಾಯತ್‌ಗಳನ್ನು ದೇಶದೆಲ್ಲೆಡೆ ಆಯೋಜಿಸಲಾಗುವುದು. ರೈತರನ್ನು ಉಳಿಸಬೇಕಾಗಿದೆ. ದೇಶವನ್ನು ಉಳಿಸಬೇಕಿದೆ. ಉದ್ಯಮ, ಉದ್ಯೋಗ, ನೌಕರರು ಎಲ್ಲರನ್ನೂ ಉಳಿಸಬೇಕಾಗಿದೆ. ಇದೇ ನಮ್ಮ ಈ ಹೋರಾಟದ ಗುರಿ” ಎಂದಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ ರೈತ ಸಂಘಟನೆಗಳು, ಉತ್ತರ ಪ್ರದೇಶದಲ್ಲೂ ಬಿಜೆಪಿ ವಿರುದ್ಧ ಅಭಿಯಾನ ನಡೆಸಲಿವೆ. ಇದಕ್ಕೆ ಮುಜಾಫರ್‌ನಗರ ಮಹಾಪಂಚಾಯತ್‌ನಿಂದ ಚಾಲನೆ ನೀಡಲಾಗಿದೆ. ರಾಕೇಶ್ ಟಿಕಾಯತ್ ವಿರುದ್ಧ ಕಿಡಿಕಾರಿದ್ದ ರಾಜ್ಯ ಬಿಜೆಪಿ ಘಟಕ ಈಗ ಪರದೆಯ ಹಿಂದೆ ಸರಿಯುತ್ತಿದೆ.

ಮುಜಾಫರ್‌ನಗರದ ಸರ್ಕಾರಿ ಇಂಟರ್‌ ಕಾಲೇಜ್‌ ಮೈದಾನದಲ್ಲಿ ಹಿಂದು-ಮುಸ್ಲಿಂ ಸಮುದಾಯ, ರೈತರು, ರೈತ ಮಹಿಳೆಯರು ಯುವಕರು ನೆರೆದು, ಒಕ್ಕೂಟ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಮೈದಾನವಷ್ಟೇ ಅಲ್ಲದೆ, ನಗರದ ರಸ್ತೆ, ಫ್ಲೈಓವರ್‌ಗಳು ರೈತರಿಂದ ತುಂಬಿದ್ದವು.

ಮಹಾಪಂಚಾಯತ್‌ಗೆ ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಲಾಗಿತ್ತು. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...