Homeಮುಖಪುಟರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

ರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

- Advertisement -
- Advertisement -

ಪಂಜಾಬ್, ಹರಿಯಾಣದ ರೈತರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದಾರೆ. ದೆಹಲಿಯನ್ನು ಸುತ್ತುವರೆದು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ರಾಜಸ್ಥಾನ, ಉತ್ತರಪ್ರದೇಶ ಮತ್ತು ಉತ್ತರಖಂಡ್‌ನ ರೈತರು ಅವರಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ದಕ್ಷಿಣ ಭಾರತದಲ್ಲಾಗಲಿ, ಕರ್ನಾಟಕದಲ್ಲಾಗಲಿ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟಿಸುತ್ತಿಲ್ಲ ಎಂಬ ಕೊರಗು ಪ್ರಶ್ನೆಯ ರೀತಿಯಲ್ಲಿ ಹಲವರಲ್ಲಿತ್ತು. ಮಾರ್ಚ್ 20,21,22 ರಂದು ನಡೆದ ಕರ್ನಾಟಕದ ಮೊದಲ ಮಹಾಪಂಚಾಯತ್‌ಗಳು ಮತ್ತು ಬೆಂಗಳೂರಿನ ವಿಧಾನಸೌಧ ಚಲೋ ಕಾರ್ಯಕ್ರಮ ಆ ಕೊರಗನ್ನು ನಿವಾರಿಸಿದೆ. ಮಾತ್ರವಲ್ಲದೇ ಈ ರೈತ ಮಹಾಪಂಚಾಯತ್‌ಗಳು ಕರ್ನಾಟಕದ ರೈತ ಚಳವಳಿಗೆ ಹೊಸ ಭರವಸೆ ನೀಡಿವೆ.

ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾಯಿತು. ಶಿವಮೊಗ್ಗದಲ್ಲಿ 2003ರಲ್ಲಿ ನಡೆದ ಬಾಬಾಬುಡನ್ ಗಿರಿ ಹೋರಾಟದ 17 ವರ್ಷಗಳ ನಂತರದ ಬೃಹತ್ ಹೋರಾಟ ಇದಾಗಿತ್ತು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನೂರಾರು ಸಂಘಟನೆಗಳು ಒಂದುಗೂಡಿ, ಹತ್ತಾರು ಸಾವಿರ ಜನರು ಭಾಗಿಯಾಗಿ ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಿದರು.

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಮಾವೇಶ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾದರೂ ಯಾರೂ ವಿಚಲಿತರಾಗಲಿಲ್ಲ. ಮೈಸೂರಿನ ಜನಾರ್ಧನ್ ಜೆನ್ನಿ ಮತ್ತು ಚಿಂತನ್ ವಿಕಾಸ್‌ರವರ ಹೋರಾಟದ ಹಾಡುಗಳು ಜನರನ್ನು ಆಕರ್ಷಿಸಿದವು. ದೆಹಲಿ ರೈತ ಹೋರಾಟದ ಮುಖಂಡರಾದ ಡಾ.ದರ್ಶನ್ ಪಾಲ್, ಯುದುವೀರ್ ಸಿಂಗ್, ರಾಕೇಶ್ ಟಿಕಾಯತ್ ಮತ್ತು ಕುಲಬೀರ್ ಸಿಂಗ್‌ರವರು ವೇದಿಕೆಯೇರಿದೊಡನೆ ರೈತರು ಹರ್ಷೋದ್ಘಾರ ಮುಗಿಲುಮುಟ್ಟಿತು. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಶಿವಮೊಗ್ಗ ಮಹಾ ಪಂಚಾಯತ್‌ನ ಸಂಚಾಲಕರಾದ ಎಂ ಶ್ರೀಕಾಂತ್, ’ಸೂಡ’ದ (ಶಿವಮೊಗ್ಗ ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ವರಾಜ್ ಇಂಡಿಯಾದ ವಕ್ತಾರರಾದ ಕೆ ಪಿ ಶ್ರೀಪಾಲ್, ದ.ಸ.ಸಂದ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ ಹೆಚ್ ಹಾಲೇಶಪ್ಪ, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ ಯೋಗೇಶ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಮಾತನಾಡಿದರು. ಪ್ರತಿಯೊಬ್ಬರ ಭಾಷಣವನ್ನು ಸಮಾಧಾನದಿಂದ ಆಲಿಸಿದ ರೈತರು ಮತ್ತು ಸಾಮಾನ್ಯ ಜನರು ಜೋರಾದ ಚಪ್ಪಾಳೆ, ಜೈಕಾರಗಳೊಂದಿಗೆ ಪ್ರತಿಕ್ರಿಯಿಸಿದರು. ಮಹಾಪಂಚಾಯತ್ ನಿರ್ಣಯ ಮಂಡಿಸುವುದು ರಾತ್ರಿ 8 ಗಂಟೆಯಾದರೂ ರೈತರ್‍ಯಾರು ತಮ್ಮ ಕುರ್ಚಿಗಳಿಂದ ಕದಲಿರಲಿಲ್ಲ. ಅಷ್ಟರಮಟ್ಟಿಗೆ ರೈತರು ಮತ್ತು ನೆರೆದಿದ್ದವರೆಲ್ಲಾ ಈ ಹೋರಾಟದಲ್ಲಿ ಮಿಳಿತಗೊಂಡಿದ್ದರು.

“ದೆಹಲಿ ರೈತ ಹೋರಾಟ ಮತ್ತು ನಂತರದ ಕಿಸಾನ್ ಮಹಾಪಂಚಾಯತ್‌ಗಳಿಂದ ಸ್ಫೂರ್ತಿ ಪಡೆದು, ಸಮಾಜವಾದಿ ಹೋರಾಟದ ನೆಲವೆಂಬ ಹೆಗ್ಗಳಿಕೆಯ ಶಿವಮೊಗ್ಗದಲ್ಲಿ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ನಡೆಸಬೇಕೆಂದುಕೊಂಡಾಗಲೇ ಇದು ಯಶಸ್ವಿಯಾಗುತ್ತದೆ ಎಂಬ ಖಾತ್ರಿ ನಮಗಿತ್ತು. ಈ ಕುರಿತು ಕರೆದ ಪೂರ್ವಭಾವಿ ಸಭೆಗೆ 200ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿ ಅಚ್ಚರಿ ಮೂಡಿಸಿದ್ದರು. ತದನಂತರ ಶಿವಮೊಗ್ಗದ 8 ಜನರ ತಂಡ ದೆಹಲಿ ಗಡಿಗಳಿಗೆ ಭೇಟಿ ನೀಡಿ ಅಲ್ಲಿನ ರೈತ ಮುಖಂಡರೊಂದಿಗೆ ಚರ್ಚಿಸಿ ಮಹಾಪಂಚಾಯತ್‌ಗಳಿಗೆ ಆಹ್ವಾನ ನೀಡಿದಾಗ ಅವರು ಭಾಗವಹಿಸಲು ಪ್ರೀತಿಯಿಂದಲೇ ಒಪ್ಪಿಕೊಂಡರು. 1980-90ರ ದಶಕದ ಕರ್ನಾಟಕದ ರೈತ ಚಳವಳಿಯ ನೇತಾರ ಪ್ರೊ.ನಂಜುಂಡಸ್ವಾಮಿ ಮತ್ತು ಉತ್ತರ ಪ್ರದೇಶದ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್‌ರವರ ಹೋರಾಟದ ಕಿಚ್ಚು ಹಾಗೂ ಅವರಿಬ್ಬರ ನಡುವಿನ ಗಳೆತನ ಅವರನ್ನು ಕರ್ನಾಟಕದೆಡೆಗೆ ತುಡಿಯವಂತೆ ಮಾಡಿದ್ದವು. ನಂತರ ಒಂದು ತಿಂಗಳ ಕಾಲ ಮಹಾಪಂಚಾಯತ್ ತಯಾರಿಯಲ್ಲಿ ಶಿವಮೊಗ್ಗದ ಎಲ್ಲಾ ಸಂಘಟನೆಗಳು ತಮ್ಮೊಳಗಿನ ಭಿನ್ನತೆ ಬದಿಗೊತ್ತಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಕೆಲಸ ಮಾಡಿದ್ದೇ ದೊಡ್ಡ ಯಶಸ್ಸು ಪಡೆಯಲು ಕಾರಣ” ಎನ್ನುತ್ತಾರೆ ಸಂಘಟಕರಲ್ಲೊಬ್ಬರಾದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್.

“ನಾವು ರೈತರಿಗೆ, ದಲಿತರಿಗೆ, ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪರಿಗಳಿಗೆ, ಆಟೋ ಚಾಲಕರಿಗೆ, ಮಹಿಳಾ ಸಂಘಗಳಿಗೆ ಮಹಾಪಂಚಾಯತ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದೆವು. ಶಿವಮೊಗ್ಗದ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಚಾರ ಸಭೆ ನಡೆಸಿದೆವು. ಆದರೆ ಅಲ್ಲಿ ಸ್ಥಳೀಯ ರೈತ ಮುಖಂಡರಲ್ಲಿ ಈ ಕಾಯ್ದೆಗಳ ಬಗ್ಗೆ ಸಿಟ್ಟು ಎಷ್ಟಿತ್ತೆಂದರೆ ಅವರು ತಮ್ಮ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಹೋರಾಟದ ವಿಚಾರ ಒಯ್ದರು. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ರೈತರು ಮತ್ತು ಜನಸಾಮಾನ್ಯರು ಹೋರಾಟಕ್ಕೆ ಅಣಿನೆರೆದರು ಮಾತ್ರವಲ್ಲ ಇಡೀ ರೈತ ಮಹಾಪಂಚಾಯತ್ ಮುಗಿಯುವವರೆಗೂ ತದೇಕಚಿತ್ತದಿಂದ ಭಾಗವಹಿಸಿದರು. ಮಹಾಪಂಚಾಯತ್ ನಂತರ ಎಲ್ಲಾ ರೈತ-ದಲಿತ-ಕಾರ್ಮಿಕ ಮುಖಂಡರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ನಾವು ರೈತ ವಿಚಾರ ಇಟ್ಟುಕೊಂಡು ಗ್ರಾಮಗಳಿಗೆ ಹೋದರೆ ರೈತರು ಹೋರಾಟಕ್ಕೆ ಬರುತ್ತಾರೆ ಎಂಬುದನ್ನು ಈ ಅಭೂತಪೂರ್ವ ಪ್ರತಿಕ್ರಿಯೆಯಿಂದ ಸಾಬೀತಾಗಿದೆ” ಎನ್ನುತ್ತಾರೆ ಕೆ.ಎಲ್ ಅಶೋಕ್.

ಒಟ್ಟಾರೆಯಾಗಿ ದೆಹಲಿ ರೈತ ಹೋರಾಟದ ಸ್ಫೂರ್ತಿ ಮತ್ತು ಅದಕ್ಕೆ ಸ್ಪಂದಿಸಿ ಹೋರಾಟವನ್ನು ದಕ್ಷಿಣಭಾರತಕ್ಕೆ ಕರೆತಂದಿರುವ ಶಿವಮೊಗ್ಗ ರೈತ ಮಹಾಪಂಚಾಯತ್ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರತಿ ಸಂಘಟನೆಗಳು ಹೊಸ ಹುಮ್ಮಸ್ಸಿನಿಂದ ಮುಂದಿನ ಹೋರಾಟಕ್ಕೆ ಸಜ್ಜಾಗುತ್ತಿವೆ. ಈ ಒಗ್ಗಟ್ಟು ಕಾಪಾಡಿಕೊಂಡು ರೈತ ಚಳವಳಿ ವಿಸ್ತರಿಸುವುದು ಹೇಗೆ ಎಂದು ಎಲ್ಲಾ ಸಂಘಟನೆಗಳು ನಾಯಕರು ಆಲೋಚನೆಯಲ್ಲಿದ್ದಾರೆ. ಇದರ ಬೆನ್ನಿಗೆ ಹಾವೇರಿ ರೈತ ಮಹಾಪಂಚಾಯತ್ ನಡೆದಿದೆ. ಮಾರ್ಚ್ 30 ರಂದು ಬೆಳಗಾವಿಯಲ್ಲಿ ಮಹಾಪಂಚಾಯತ್ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಹೋರಾಟದ ಕಿಡಿ ಎಲ್ಲೆಡೆ ಹರಡುತ್ತಿದೆ.

ಹಾವೇರಿ ರೈತ ಮಹಾಪಂಚಾಯತ್

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 8 ದಿನಗಳಲ್ಲಿಯೆ ರಸಗೊಬ್ಬರಕ್ಕಾಗಿ ಪ್ರತಿಭಟಿಸಿದ ರೈತರ ಮೇಲೆ ಗೋಲಿಬಾರ್‌ಗೆ ಆದೇಶ ನೀಡಿತ್ತು. ಈ ಘಟನೆಯಲ್ಲಿ ಇಬ್ಬರನ್ನು ಕೊಂದು ಹಾಕಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪನವರೆ ಇಂದು ಸಹ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ರೈತರು ಆ ಕರಾಳ ದಿನವನ್ನು ಮಾತ್ರ ಮರೆತಿಲ್ಲ. ಆ ಆಕ್ರೋಶ ಮಾರ್ಚ್ 21ರಂದು ಜರುಗಿದ ಹಾವೇರಿ ರೈತ ಮಹಾಪಂಚಾಯತ್‌ನಲ್ಲಿ ವ್ಯಕ್ತವಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ಜನ ಒಟ್ಟುಗೂಡಿ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೃಹತ್ ಮೆರವಣಿಗೆ ನಡೆಸಿ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ರೈತ ಮುಖಂಡರಾದ ರಾಮಣ್ಣ ಕೆಂಚಳ್ಳಿ, ಮಲ್ಲಿಕಾರ್ಜುನ್ ಬಳ್ಳಾರಿ, ಬಾಬಾಗೌಡ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ನಂದಿನಿ ಜಯರಾಂ, ಕೋಡಿಹಳ್ಳಿ ಚಂದ್ರಶೇಖರ್, ಕೆ.ಟಿ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ರಾಕೇಶ್ ಟಿಕಾಯತ್ ಮತ್ತು ಯುದುವೀರ್ ಸಿಂಗ್ ಮಾತನಾಡಿದರು.

ಬೆಂಗಳೂರು ವಿಧಾನಸೌಧ ಚಲೋ

ಈ ಎರಡು ರೈತ ಮಹಾಪಂಚಾಯತ್‌ಗಳ ಸಮಾರೋಪದ ರೀತಿಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 22ರಂದು ವಿಧಾನಸೌಧ ಚಲೋಗೆ ಕರೆ ನೀಡಲಾಗಿತ್ತು. ರಾಜ್ಯ ಬಿಜೆಪಿ ಸರ್ಕಾರವು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕೃಷಿ ಭೂಮಿ ಕೊಳ್ಳುವ ಮಿತಿ ಹೆಚ್ಚಳಕ್ಕೆ ಸಣ್ಣ ರೈತರು ಮತ್ತು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಆದರೆ ಸಿಎಂ ಯಡಿಯೂರಪ್ಪ ರೈತರನ್ನು ಕರೆದು ಸಭೆ ನಡೆಸುವ ಕನಿಷ್ಠ ಸೌಜನ್ಯ ಕೂಡ ತೋರಿಲ್ಲ. ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿಯೂ ಕೂಡ ರೈತರ ಹಕ್ಕೊತ್ತಾಯ ಪತ್ರ ಸ್ವೀಕರಿಸಲು ಸಿಎಂ ಬಾರದೆ, ರೈತರ ಬಗ್ಗೆ ಹಲವು ಬಾರಿ ಅನುಚಿತ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್‌ರನ್ನು ಕಳಿಸಿದ್ದಕ್ಕೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...