Homeಮುಖಪುಟಮುಂಬೈ ಪಾಲಿಕೆ ಚುನಾವಣೆಯ ಕರಡು ಪಟ್ಟಿಯಲ್ಲಿ 11 ಲಕ್ಷ ನಕಲಿ ಮತದಾರರಿದ್ದಾರೆ : ಕಾಂಗ್ರೆಸ್ ಆರೋಪ

ಮುಂಬೈ ಪಾಲಿಕೆ ಚುನಾವಣೆಯ ಕರಡು ಪಟ್ಟಿಯಲ್ಲಿ 11 ಲಕ್ಷ ನಕಲಿ ಮತದಾರರಿದ್ದಾರೆ : ಕಾಂಗ್ರೆಸ್ ಆರೋಪ

- Advertisement -
- Advertisement -

ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಬಿಡುಗಡೆ ಮಾಡಲಾದ ಕರಡು ಮತದಾರರ ಪಟ್ಟಿಯಲ್ಲಿ 11 ಲಕ್ಷ ನಕಲಿ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ನ ಮುಂಬೈ ಘಟಕ ಶುಕ್ರವಾರ (ನ.28) ಆರೋಪಿಸಿದ್ದು, ಪಟ್ಟಿಯನ್ನು ಸಾರ್ವಜನಿಕಗೊಳಿಸಬೇಕೆಂದು ಒತ್ತಾಯಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಮುಂಬೈ ಉತ್ತರ ಕೇಂದ್ರವನ್ನು ಪ್ರತಿನಿಧಿಸುವ ಲೋಕಸಭಾ ಸಂಸದೆ ಮತ್ತು ಮುಂಬೈ ಕಾಂಗ್ರೆಸ್ ಮುಖ್ಯಸ್ಥೆ ವರ್ಷಾ ಗಾಯಕ್ವಾಡ್ ನೇತೃತ್ವದ ವಿರೋಧ ಪಕ್ಷದ ಸದಸ್ಯರ ನಿಯೋಗವು ರಾಜ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಈ ಕುರಿತು ತಕ್ಷಣದ ಸ್ಪಷ್ಟೀಕರಣವನ್ನು ಕೋರಿದೆ ಎಂದು ವರದಿ ಹೇಳಿದೆ.

ಮಹಾರಾಷ್ಟ್ರದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯ ಗಡುವನ್ನು ರಾಜ್ಯ ಚುನಾವಣಾ ಆಯೋಗವು ಬುಧವಾರ ಡಿಸೆಂಬರ್ 5ರಿಂದ ಡಿಸೆಂಬರ್ 10ರವರೆಗೆ ವಿಸ್ತರಿಸಿದೆ. ಆ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮುಂಬೈ ಮಹಾನಗರ ಪಾಲಿಕೆ ಮತ್ತು ಇತರ ನಾಗರಿಕ ಸಂಸ್ಥೆಗಳು ಮತದಾರರ ತಪ್ಪಾದ ಸ್ಥಳಾಂತರ ಮತ್ತು ನಕಲಿ ನಮೂದುಗಳ ಬಗ್ಗೆ ಹೆಚ್ಚಿನ ಸಂಖ್ಯೆಯ ದೂರುಗಳನ್ನು ಸ್ವೀಕರಿಸಿದ ನಂತರ ವಿಸ್ತರಣೆ ಮಾಡಲಾಗಿದೆ.

ಇದು ಎರಡನೇ ಅವಧಿ ವಿಸ್ತರಣೆಯಾಗಿದ್ದು, ಜಿಲ್ಲಾ ಪರಿಷತ್‌ಗಳು, ಪಂಚಾಯತ್‌ಗಳು ಮತ್ತು ಪುರಸಭೆ ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತ್ತಷ್ಟು ವಿಳಂಬಗೊಳಿಸುವ ಸಾಧ್ಯತೆಯಿದೆ.

ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದ್ದ ಪ್ರಕರಣದಿಂದಾಗಿ, ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ 27 ಮಹಾನಗರ ಪಾಲಿಕೆಗಳು, 243 ನಗರ ಪಂಚಾಯತ್‌ಗಳು ಮತ್ತು 289 ಪಂಚಾಯತ್‌ಗಳ ಚುನಾವಣೆಗಳು 2022 ರಿಂದ ಸ್ಥಗಿತಗೊಂಡಿವೆ.

ಇದರರ್ಥ ರಾಜ್ಯದ ಹೆಚ್ಚಿನ ನಗರ ಮತ್ತು ಗ್ರಾಮೀಣ ಸಂಸ್ಥೆಗಳು ಚುನಾಯಿತ ಪ್ರತಿನಿಧಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ, ಅವರ ಅವಧಿ 2020 ಮತ್ತು 2022 ರ ನಡುವೆ ಕೊನೆಗೊಂಡಿದೆ.

ಸೆಪ್ಟೆಂಬರ್‌ನಲ್ಲಿ, ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ನ್ಯಾಯಾಲಯ ನಿಗದಿಪಡಿಸಿದ ಹಿಂದಿನ ಸಮಯವನ್ನು ಪಾಲಿಸಲು ವಿಫಲವಾದ ರಾಜ್ಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ಟೀಕಿಸಿತ್ತು. ನ್ಯಾಯಾಲಯವು ಜನವರಿ 31, 2026 ಅನ್ನು ಅಂತಿಮ ಗಡುವು ಎಂದು ಮತ್ತೊಮ್ಮೆ ನಿಗದಿಪಡಿಸಿದೆ.

ಡಿಸೆಂಬರ್ 2ರಂದು ಸಣ್ಣ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 246 ಪುರಸಭೆಗಳು (ಮುನ್ಸಿಪಲ್ ಕೌನ್ಸಿಲ್‌ಗಳು) ಮತ್ತು 42 ನಗರ ಪಂಚಾಯತ್‌ಗಳು ಸೇರಿವೆ. ಈ ಚುನಾವಣೆಗಳ ಮತದಾನ ಡಿಸೆಂಬರ್ 2ರಂದು ಜರಗಲಿದ್ದು, ಫಲಿತಾಂಶಗಳು ಡಿಸೆಂಬರ್ 3 ರಂದು ಹೊರಬೀಳಲಿವೆ.
ಆದರೆ, ದೊಡ್ಡ ಮಹಾನಗರ ಪಾಲಿಕೆಗಳ ಚುನಾವಣೆ (ಇದರಲ್ಲಿ ಮುಂಬೈ ಮಹಾನಗರ ಪಾಲಿಕೆ -ಬಿಎಂಸಿ ಕೂಡ ಸೇರಿದೆ) ಜನವರಿ 2026ರಲ್ಲಿ ನಡೆಯುವ ನಿರೀಕ್ಷೆಯಿದೆ.

ಜನವರಿ 15ರಿಂದ 20ರ ನಡುವೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಯೋಜಿಸಿದೆ ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಬುಧವಾರ ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...