Homeಮುಖಪುಟಮಹಾರಾಷ್ಟ್ರ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 26 ಆರೋಪಿಗಳ ಬಂಧನ

ಮಹಾರಾಷ್ಟ್ರ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 26 ಆರೋಪಿಗಳ ಬಂಧನ

- Advertisement -
- Advertisement -

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು  ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದಾನೆ. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ದೂರಿನ ನಂತರ, 24 ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ದತ್ತಾತ್ರಯ್ ಕರಾಳೆ ಹೇಳಿದ್ದಾರೆ. ಬಂಧಿತ ಆರೋಪಿಗಳು ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

“ಜನವರಿಯಲ್ಲಿ ಬಾಲಕಿಯ ಪ್ರೇಮಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಘಟನೆಯನ್ನು ವಿಡಿಯೊ ಮಾಡಿಕೊಂಡ ಬಳಿಕ ಇದೆಲ್ಲಾ ಆರಂಭವಾಗಿದೆ. ಆ ವಿಡಿಯೊ ಬಳಸಿಕೊಂಡು ಆತ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ. ನಂತರ, ಆತನ ಸ್ನೇಹಿತರು ಮತ್ತು ಪರಿಚಯಸ್ಥರು ಜಿಲ್ಲೆಯ ಡೊಂಬಿವಿಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕನಿಷ್ಠ ನಾಲ್ಕರಿಂದ ಐದು ಬಾರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು (ಪೂರ್ವ ವಿಭಾ‌ಗ) ದತ್ತಾತ್ರಯ್ ಕರಾಳೆ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಅತ್ಯಾಚಾರ, ಪುನರಾವರ್ತಿತ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಮತ್ತು “ಹದಿನಾರು ವರ್ಷದೊಳಗಿನ ಮಹಿಳೆಯ ಮೇಲೆ ಅತ್ಯಾಚಾರ” ವಿಬಾಗಗಳ ಅಡಿಯಲ್ಲಿ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೊ ಮಾಡಿ ಹರಿಬಿಟ್ಟ ಆರೋಪಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...