Homeದಲಿತ್ ಫೈಲ್ಸ್ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

ಮಹಾರಾಷ್ಟ್ರ | 17 ಆದಿವಾಸಿಗಳನ್ನು ಕೂಡಿ ಹಾಕಿ ಜೀತದಾಳುಗಳಂತೆ ಕಬ್ಬಿನ ಗದ್ದೆಯಲ್ಲಿ ದುಡಿಯುವಂತೆ ಒತ್ತಾಯ

- Advertisement -
- Advertisement -

ಕಬ್ಬು ಕಟಾವು ಸಂಬಂಧಿತ ಕೆಲಸಗಳಿಗಾಗಿ ಸ್ಥಳೀಯ ಗುತ್ತಿಗೆದಾರರು ಕರೆದೊಯ್ದಿದ್ದ ನೈಋತ್ಯ ಮಧ್ಯಪ್ರದೇಶದ ಬುಡಕಟ್ಟು ಜನಾಂಗದ 17 ಜನರನ್ನು ಮಹಾರಾಷ್ಟ್ರದ ಧರಾಶಿವ್ (ಉಸ್ಮಾನಾಬಾದ್) ಜಿಲ್ಲೆಯಲ್ಲಿ ಅವರಿಗೆ ಕೂಲಿಯೂ ಕೊಡದೆ, ಕೂಡಿ ಹಾಕಿ ಜೀತದಾಳುಗಳನ್ನಾಗಿ ಮಾಡಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಪೊಲೀಸ್ ದೂರಿನ ನಂತರ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಯಿತು ಎಂದು ವರದಿಯಾಗಿದೆ. ಮಹಾರಾಷ್ಟ್ರ

ಕೂಡಿ ಹಾಕಲ್ಪಟ್ಟ 17 ಜನರಲ್ಲಿ ಐವರು ಮಹಿಳೆಯರು ಮತ್ತು ಏಳು ಮಕ್ಕಳು ಇದ್ದರು ಎಂದು TNI ವರದಿ ಮಾಡಿದೆ. ಬುಡಕಟ್ಟು ಸಮುದಾಯದ ಈ ಕಾರ್ಮಿಕರು ನಾಲ್ಕು ತಿಂಗಳ ಹಿಂದೆ ಜಲಗಾಂವ್ (ಮಹಾರಾಷ್ಟ್ರ) ಮೂಲದ ಗುತ್ತಿಗೆದಾರ ದೇವಸಿಂಗ್ ಎಂಬುವವರ ಮೂಲಕ ಮಹಾರಾಷ್ಟ್ರದ ಧಾರಾಶಿವ್ (ಉಸ್ಮಾನಾಬಾದ್) ಜಿಲ್ಲೆಯ ಕಲಾಂಬ್ ತಹಸಿಲ್‌ನ ಗಂಭೀರ್ವಾಡಿ ಗ್ರಾಮದ ಶ್ರೀಮಂತ ರೈತನ ಕಬ್ಬಿನ ಹೊಲಗಳಲ್ಲಿ ಕಬ್ಬು ಕಟಾವು ಸಂಬಂಧಿತ ಕೆಲಸಗಳಿಗಾಗಿ ತೆರಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಗುತ್ತಿಗೆದಾರ ದೇವಸಿಂಗ್ ಕಾರ್ಮಿಕರನ್ನು ಧರಾಶಿವ್ ಜಿಲ್ಲೆಯಲ್ಲಿ ಬಿಟ್ಟು ಪರಾರಿಯಾಗಿದ್ದನು. ಗುತ್ತಿಗೆದಾರ ಪರಾರಿಯಾದ ಕಾರಣಕ್ಕೆ ಬುಡಕಟ್ಟು ಕಾರ್ಮಿಕರು ಅಲ್ಲಿಯೇ ಸಿಲುಕಿಕೊಂಡಿದ್ದು, ಅವರಿಗೆ ಸರಿಯಾದ ಆಹಾರ ಕೂಡಾ ಲಭ್ಯವಾಗಿಲ್ಲ ಎಂದು ಆರೋಪಿಸಲಾಗಿದೆ.

ಆಹಾರದ ಕೊರತೆ ಮತ್ತು ಇತರ ಸಮಸ್ಯೆಗಳಿಂದಾಗಿ ಬುಡಕಟ್ಟು ಕಾರ್ಮಿಕರು ಕಬ್ಬಿನ ತೋಟದ ಮಾಲೀಕರ ಬಳಿ ತಮ್ಮ ವೇತನವನ್ನು ಪಾವತಿಸುವಂತೆ ಕೇಳಿಕೊಂಡಿದ್ದರು. ಆದರೆ ಈ ವೇಳೆ ಕಬ್ಬಿನ ತೋಟದ ಮಾಲಿಕ ಅವರಿಗೆ ಭರವಸೆ ನೀಡಿದ್ದ ವೇತನ ನೀಡುವ ಬದಲು, ಅವರ ಮೇಲೆಯೆ ಹಲ್ಲೆ ನಡೆಸಿದ್ದರು. ಮಹಾರಾಷ್ಟ್ರ

ಹಲ್ಲೆ ನಡೆಸಿದ್ದಲ್ಲದೆ, ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಹೊರಗಿನ ಪ್ರಪಂಚದೊಂದಿಗಿನ ಸಂಪರ್ಕವನ್ನು ಕಡಿತಗೊಳಿಸಲು ಅವರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಒಪ್ಪಿದ ವೇತನವನ್ನು ಪಾವತಿಸದೆ ಅವರನ್ನು ಬಂಧಿಸಿ ಜಮೀನಿನಲ್ಲಿ ಕೆಲಸ ಮಾಡಲು ಒತ್ತಾಯಿಸಲಾಯಿತು ಎಂದು ಎಂದು ಹೇಳಲಾಗಿದೆ.

ಕಳೆದ ವಾರ ಜನವರಿಯಲ್ಲಿ ಬಂಬಾಡಾ ಗ್ರಾಮದ (ಬುಡಕಟ್ಟು ಕಾರ್ಮಿಕರು ಮಧ್ಯಪ್ರದೇಶದಲ್ಲಿ ವಾಸಿಸುತ್ತಿದ್ದ ಗ್ರಾಮ) ನಿವಾಸಿಯೊಬ್ಬರು ಬುರ್ಹಾನ್‌ಪುರ ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಈ ದೂರಿನ ಮೇರೆಗೆ, ಬುರ್ಹಾನ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಾಟಿದಾರ್ ಅವರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಗೆ ಮೀಸಲಾದ ಪೊಲೀಸ್ ತಂಡವನ್ನು ಕಾರ್ಮಿಕರಿದ್ದ ತೋಟಕ್ಕೆ ಕಳುಹಿಸಿದ್ದರು. ಹಾಗಾಗಿ ಮಂಗಳವಾರ ಅಲ್ಲಿ ಬಂಧಿತರಾಗಿದ್ದ 17 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ:  ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...