Homeಮುಖಪುಟಮಹಾರಾಷ್ಟ್ರ: ಸಿಎಂ ಉದ್ಧವ್ ಠಾಕ್ರೆ ಸಂಪರ್ಕದಲ್ಲಿ 20 ಬಂಡಾಯ ಶಾಸಕರು-ಮೂಲಗಳು

ಮಹಾರಾಷ್ಟ್ರ: ಸಿಎಂ ಉದ್ಧವ್ ಠಾಕ್ರೆ ಸಂಪರ್ಕದಲ್ಲಿ 20 ಬಂಡಾಯ ಶಾಸಕರು-ಮೂಲಗಳು

- Advertisement -
- Advertisement -

ಬಂಡಾಯ ನಾಯಕ ಏಕನಾಥ್ ಶಿಂಧೆ ಅವರೊಂದಿಗೆ ಬೀಡುಬಿಟ್ಟಿರುವ ಕನಿಷ್ಠ 20 ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ಬಂಡಾಯಗಾರರು ಬಿಜೆಪಿಯೊಂದಿಗೆ ವಿಲೀನವಾಗುವುದಕ್ಕೆ ವಿರುದ್ಧವಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಸಚಿವ ಏಕನಾಥ್ ಶಿಂಧೆ ಹಾಗೂ ಇತರ ಬಂಡಾಯ ಸಚಿವ ವಿರುದ್ಧ ಕ್ರಮ ಕೈಗೊಳ್ಳಲು ಶಿವಸೇನೆ ಮುಂದಾಗಿದೆ. ಮೂಲಗಳ ಪ್ರಕಾರ, ಸಚಿವರಾದ ಏಕನಾಥ್ ಶಿಂಧೆ, ಗುಲಾಬ್ರಾವ್ ಪಾಟೀಲ್, ದಾದಾ ಭೂಸೆ ಅವರು ತಮ್ಮ ಖಾತೆಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಅಬ್ದುಲ್ ಸತ್ತಾರ್ ಮತ್ತು ಶಂಬುರಾಜೇ ದೇಸಾಯಿ ಇಬ್ಬರೂ ರಾಜ್ಯ ಸಚಿವರ ವಿರುದ್ಧವೂ ಕ್ರಮ ಜರುಗಿಸುವ ಸಾಧ್ಯತೆಯಿದೆ.

ಬಂಡಾಯಗಾರರಿಗೆ ಬಹಿರಂಗ ಸವಾಲೆಸೆದಿರುವ ಆದಿತ್ಯ ಠಾಕ್ರೆ ಅವರು ಚುನಾವಣೆಯಲ್ಲಿ “ಪಕ್ಷಾಂತರ ಮಾಡಿ ಹೋರಾಡುವಂತೆ” ಹೇಳಿದ್ದಾರೆ. “ನಿಮಗೆ ಧೈರ್ಯವಿದ್ದರೆ ಶಿವಸೇನೆ ಬಿಟ್ಟು ಪಕ್ಷಾಂತರ ಮಾಡಿ ಹೋರಾಡಿ. ನಾವು ಮಾಡಿದ್ದು ತಪ್ಪು, ಉದ್ಧವ್ (ಠಾಕ್ರೆ) ನಾಯಕತ್ವ ತಪ್ಪು ಮತ್ತು ನಾವೆಲ್ಲರೂ ತಪ್ಪು ಎಂದು ನೀವು ಭಾವಿಸಿದರೆ, ರಾಜೀನಾಮೆ ನೀಡಿ ಚುನಾವಣೆ ಎದುರಿಸಿ. ನಾವು ಸಿದ್ಧರಿದ್ದೇವೆ,” ಎಂದು ಸವಾಲೆಸೆದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಯೋಜನೆಯ ಬಗ್ಗೆಯೂ ಭಿನ್ನಾಭಿಪ್ರಾಯ ಹೊರಹಾಕಿದ್ದಾರೆ. ಶಿಂಧೆ ಪ್ರಹಾರ್ ಜನಶಕ್ತಿ ಪಕ್ಷದೊಂದಿಗೆ ವಿಲೀನಗೊಳ್ಳುವ ಆಯ್ಕೆಯನ್ನು ಹೊಂದಿದ್ದು, ಅದರ ಮುಖ್ಯಸ್ಥ, ಬಚ್ಚು ಕಡು ಅವರು ಈಗಾಗಲೇ ಗುವಾಹಟಿಯಲ್ಲಿ ಬೀಡುಬಿಟ್ಟಿದ್ದಾರೆ.

ಇನ್ನೂ ಠಾಕ್ರೆಗಳಿಗೆ ನಿಷ್ಠರಾಗಿರುವ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಕೆಲವು ಬಂಡಾಯ ಶಾಸಕರ ಕಚೇರಿಗಳನ್ನು ಧ್ವಂಸಗೊಳಿಸಿ ಪ್ರತಿಭಟನೆಯನ್ನು ನಡೆಸಿದ ನಂತರ ಕೇಂದ್ರ ಸರ್ಕಾರವು 15 ಬಂಡಾಯ ಶಿವಸೇನೆ ಶಾಸಕರಿಗೆ ವೈ ಪ್ಲಸ್ ಭದ್ರತೆಯನ್ನು ಹೆಚ್ಚಿಸಿದೆ.

ಇಂದು ಬೆಳಗ್ಗೆ ಸಂಸದ ಸಂಜಯ್ ರಾವತ್ “ನೀವು ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ? ನೀವು ಹಿಂತಿರುಗಲೇಬೇಕು” ಎಂದು ಮಹಾರಾಷ್ಟ್ರ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ. ನರಹರಿ ಝಿರ್ವಾಲ್, ಶಿವಸೇನೆ ಸಲ್ಲಿಸಿರುವ ಅನರ್ಹತೆಯ ಮನವಿಯ ಮೇಲೆ 16 ಬಂಡಾಯ ಶಾಸಕರಿಗೆ ನೋಟಿಸ್ ನೀಡಿದ್ದಾರೆ.

ಇತ್ತ, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಕಳೆದ ರಾತ್ರಿ ಗುಜರಾತ್‌ನಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಸಾಧ್ಯತೆಯ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಂದೂ ವಿರೋಧಿ ಠಾಕ್ರೆ ಬಟ್ಟೆ ಚಿಂದಿ ಆಗಿದೆ ,ಇನ್ನೇನಿದ್ದರೂ ಚಿಂದಿ ಆಯೋ ಕೆಲಸ ಮಾಡಬೇಕಿದೆ ಠಾಕ್ರೇ ,ಹಿಂದೂ ವಿರೋಧಿ ಯಾವೋನೆ ಆದರೂ ಅವರಿಗೆಲ್ಲಾ ಇದೆ ಗತಿ ,20 MLA ಗಳಿರಲಿ ,ಇರೋ ಬರೋ MLA ಗಳೆಲ್ಲಾರೂ ಸಿಗದೆ ಹಿಂದೆ ಹೋಗ್ತಿದ್ದಾರೆ,ಕಮ್ಯೂನಿಸ್ಟ್ ಚೇಲಾಗಳು ಮಾತ್ರ ಇನ್ನೂ ಭ್ರಮೆಯಿಂದ ಹೊರಬಂದಿಲ್ಲಾ

  2. ಬಿಜೆಪಿಯ ನಾಲಾಯಕ್ ಗಳು ಹಿಂದೂ‌ ಹಿಂದೂ ಎಂದು‌ ಬೊಗಳಿಕೊಂಡರೂ ಚುನಾವಣೆಯಲ್ಲಿ ಬಹುಮತ ಪಡೆಯದೇ ಶಾಸಕರ ಖರೀದಿಯಂತಹ ಅನಾಚಾರ ಮಾಡಿ ಅಧಿಕಾರ ಹಿಡಿಯುತ್ತಿರುವುದು ನಾಚಿಕೆಗೇಡು‌.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....