Homeಮುಖಪುಟಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

- Advertisement -
- Advertisement -

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮದುವೆ ಸಿದ್ಧತೆಯಲ್ಲಿದ್ದ ಯುವತಿ ತಾಯಿ ಮತ್ತು ಸಹೋದರನ ಜೊತೆ ಮದುವೆ ಶಾಪಿಂಗ್ ಗೆ ಹೋದಾಗ, ಸಹೋದರ ಮತ್ತು ತಾಯಿಯ ಕಣ್ಣಿಗೆ ಮೆಣಸಿನ ಪುಡಿ ಎರಚಿ ಹುಡುಗಿಯನ್ನು ಅಪಹರಿಸಿರುವುದಾಗಿ ಕುಟುಂಬ ಹೇಳಿಕೊಂಡಿದೆ. 

ಹಿಂದೂ ಧರ್ಮದವಳಾದ ಆ ಹುಡುಗಿಗೆ ಒಂದು ವಾರದಲ್ಲಿ ಮದುವೆ ಆಗಬೇಕಿತ್ತು ಮತ್ತು ಮದುವೆಗೆ ಮುಂಚಿತವಾಗಿ ಶಾಪಿಂಗ್ ಮಾಡುತ್ತಿದ್ದಳು.

ಘಟನೆಯಲ್ಲಿ ಸಂತ್ರಸ್ತೆಯ ತಾಯಿ ಮತ್ತು ಸಹೋದರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 

ಆರೋಪಿಗಳನ್ನು ಜಹೀರ್ ಹರೂನ್ ಶೇಖ್ ಮತ್ತು ಅಯಾನ್ ಹರೂನ್ ಶೇಖ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಭಿಗ್ವಾನ್ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.

ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಆರೋಪಿಗಳು 

ಆರೋಪಿಗಳು ಹುಡುಗಿಯ ಕುಟುಂಬವಿದ್ದ ಪ್ರದೇಶದಲ್ಲಿಯೇ ವಾಸಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಇನ್ನೂ ಮಂಗಳವಾರ ಸಂಜೆ ಕೋಪಗೊಂಡ ನಿವಾಸಿಗಳು ಮತ್ತು ಹಲವಾರು ಬಲಪಂಥೀಯ ಗುಂಪುಗಳು ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಸಮಯದವರೆಗೆ ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ತಡೆದರು, ವಾಹನ ಸಂಚಾರಕ್ಕೆ ಅಡ್ಡಿಯಾಯಿತು, ಇದರಿಂದಾಗಿ ಪೊಲೀಸ್ ತಂಡಗಳು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದವು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಣೇಶ್ ಬಿರಾದಾರ್ ಗ್ರಾಮಕ್ಕೆ ಧಾವಿಸಿ, “ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ” ಎಂದು ಹೇಳಿದರು.

ಭಿಗ್ವಾನ್ ಪಟ್ಟಣವು ಪುಣೆ, ಸೋಲಾಪುರ ಮತ್ತು ಅಹಲ್ಯಾನಗರ ಜಿಲ್ಲೆಗಳ ಗಡಿಯಲ್ಲಿದೆ – ಪಕ್ಷಿ ವೀಕ್ಷಣೆಗೆ ಹೆಸರುವಾಸಿಯಾದ ಉಜನಿ ಅಣೆಕಟ್ಟಿನ ಹಿನ್ನೀರಿನಲ್ಲಿದೆ.

ಪೊಲೀಸರ ಪ್ರಕಾರ, ಯುವತಿ ಮತ್ತು ಆರೋಪಿಗಳ ಮನೆಗಳು ಪರಸ್ಪರ ಅಕ್ಕ-ಪಕ್ಕದಲ್ಲಿದ್ದು, ಕಳೆದ ಒಂದು ತಿಂಗಳಿನಿಂದ ಅವರು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಫೆಬ್ರವರಿ 22 ರಂದು ಯುವತಿಯ ವಿವಾಹ ನಿಗದಿಯಾಗಿತ್ತು ಎಂದು ಆಕೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...