7 ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾಗ್ಪುರ ಜಿಲ್ಲೆಯ ಕೊಂಢಸಾವಲಿ ಗ್ರಾಮದಲ್ಲಿ ಶನಿವಾರ ಸಂಜೆಯ ವೇಳೆಗೆ ಆರೋಪಿಯು ಬಾಲಕಿಯಯನ್ನು ಶಾಲೆಯ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಘಟನೆ ತಿಳಿದ ಸ್ಥಳಿಯರು ಸ್ಥಳಕ್ಕೆ ಆಗಮಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.
ಅತ್ಯಾಚಾರ ಆರೋಪಿ ಅಂಕುಶ್ ಭೋಸ್ಕರ್ (25) ಸ್ಥಳೀಯ ನಿವಾಸಿಯಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿ ಶಾಲೆಯ ಮೈದಾನದಲ್ಲಿ ಆಟವಾಡುತ್ತಿದ್ದಳು. ಆರೋಪಿಯು ಬಲವಂತವಾಗಿ ಬಾಲಕಿಯನ್ನು ಶೌಚಾಲಯಕ್ಕೆ ಎಳೆದೊಯ್ದಿದ್ದಾನೆ. ಆನಂತರ ಶೌಚಾಲಯದಲ್ಲಿ ಬಾಲಕಿಯ ಮೇಲೆ ಆರೋಪಿ ಅಂಕುಶ್ ಭೋಸ್ಕರ್ ಅತ್ಯಾಚಾರವೆಸಗಿದ್ದಾನೆ. ಆರೋಪಿಯು ಬಾಲಕಿಗೆ ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆಯನ್ನು ಸಹ ಹಾಕಿದ್ದಾನೆ.
ಶಾಲೆಯ ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ವ್ಯಕ್ತಿ ಬಾಲಕಿಯ ಕಿರುಚಾಟವನ್ನು ಕೇಳಿ ಸ್ಥಳಕ್ಕೆ ಹೋಗಿ ಬಾಲಕಿಯನ್ನು ರಕ್ಷಿಸಿದ್ದಾರೆ. ಈ ವೇಳೆ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಹಳ್ಳಿಗರಿಂದ ಮಾಹಿತಿಯನ್ನು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
IPC ಸೆಕ್ಷನ್ 376(a) (b) (12 ವರ್ಷದ ಒಳಗಿನ ಮಹಿಳೆಯ ಮೇಲೆ ಅತ್ಯಾಚಾರ) ಮತ್ತು ಸೆಕ್ಷನ್ 506 ( ಅಪರಾಧಿಕ ಕೃತ್ಯಕ್ಕೆ ಕುಮ್ಮಕ್ಕು) ಅಡಿಯಲ್ಲಿ ಆರೋಪಿಯ ವಿರುದ್ಧ FIR ದಾಖಲಿಸಲಾಗಿದೆ. ಹಾಗೇ POCSO ಕಾಯ್ದೆಯ ಅಡಿಯಲ್ಲಿಯೂ ಆರೋಪಿಯ ವಿರುದ್ಧ ಕಟೋಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಪೊಲೀಸರು ಸ್ಥಳೀಯ ಮಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು 3 ದಿನಗಳ ಅವಧಿಯವರೆಗೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಇದನ್ನೂ ಓದಿ : ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ


