Homeಮುಖಪುಟಮಹಾರಾಷ್ಟ್ರ: 80 ಲಕ್ಷ ಮಹಿಳೆಯರು 'ಲಡ್ಕಿ ಬಹಿನ್' ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

- Advertisement -
- Advertisement -

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ‘ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್’ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು ಎದುರಿಸುತ್ತಿರುವ “ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ” ತಪ್ಪಿಸಿಕೊಳ್ಳಲು ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳನ್ನು ಉದ್ದೇಶಪೂರ್ವಕವಾಗಿಯೇ ಪಟ್ಟಿಯಿಂದ ಕೈಬಿಡುತ್ತಿದೆ ಎಂದು ವಿರೋಧ ಪಕ್ಷಗಳು ತೀವ್ರ ಆರೋಪ ಮಾಡಿವೆ.

ಏಪ್ರಿಲ್ 30ರ ಇ-ಕೆವೈಸಿ ಅಂತಿಮ ಗಡುವಿನ ನಂತರ ಯೋಜನೆಯ ಫಲಾನುಭವಿಗಳ ಸಂಖ್ಯೆಯು 2.4 ಕೋಟಿಯಿಂದ ಸುಮಾರು 1.7 ಕೋಟಿಗೆ ಕುಸಿದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಆದರೆ, ಈ ಅನರ್ಹತೆಗಳು ಕೇವಲ ಇ-ಕೆವೈಸಿ ಕಾರಣಕ್ಕೆ ಮಾತ್ರವಲ್ಲದೆ, ಯೋಜನೆಯ ನಿಯಮ ಮತ್ತು ಅರ್ಹತಾ ಮಾನದಂಡಗಳನ್ನು ಪಾಲಿಸದ ಕಾರಣಕ್ಕೂ ನಡೆದಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪಿಟಿಐ ಮಾಹಿತಿ ಆಧರಿಸಿ ಡೆಕನ್ ಹೆರಾಲ್ಡ್ ವರದಿ ಪ್ರಕಟಿಸಿದೆ. 

ತಾಂತ್ರಿಕ ಕಾರಣ ಮತ್ತು ಮಾನದಂಡಗಳ ವಿವರ:

ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಎಂಟು ತಿಂಗಳ ಸುದೀರ್ಘ ಕಾಲಾವಕಾಶ ನೀಡಿತ್ತು ಎಂದು ತಿಳಿಸಿದ ಅಧಿಕಾರಿಗಳು ಮಾಧ್ಯಮಗಳ ಎದುರು ಮಹಿಳೆಯರನ್ನು ಯೋಜನೆಯಿಂದ ಕೈಬಿಡಲು ಕಾರಣಗಳನ್ನು ತಿಳಿಸಿದ್ದಾರೆ. 

  • ಪ್ರಕ್ರಿಯೆ ಪೂರ್ಣಗೊಳಿಸದವರು: ಸುಮಾರು 50 ರಿಂದ 55 ಲಕ್ಷ ಮಹಿಳೆಯರು ಇ-ಕೆವೈಸಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ವಿಫಲರಾಗಿದ್ದಾರೆ. ಆದಾಗ್ಯೂ, ಈ ಅವಧಿಯಲ್ಲಿ ಕಂಡುಬಂದಿದ್ದ 2 ರಿಂದ 3 ಲಕ್ಷ ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. 
  • ಆದಾಯ ಮಿತಿ ಮೀರಿದವರು: ಸುಮಾರು 12 ಲಕ್ಷ ಮಹಿಳೆಯರು ವಾರ್ಷಿಕ 2.5 ಲಕ್ಷ ರೂ. ಆದಾಯ ಮಿತಿಗಿಂತ ಹೆಚ್ಚು ಗಳಿಸುವ ಆದಾಯ ತೆರಿಗೆ ಪಾವತಿದಾರರು (IT Payers) ಎಂದು ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ
  • ವಯೋಮಿತಿ ಮೀರಿದವರು: 4.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಯೋಜನೆಯ ಗರಿಷ್ಠ ವಯೋಮಿತಿಯಾದ 65 ವರ್ಷಗಳನ್ನು ದಾಟಿದ್ದಾರೆ ಎಂಬ ಕಾರಣ ನೀಡಿದ್ದಾರೆ. 
  • ಇತರ ಯೋಜನೆಗಳ ಫಲಾನುಭವಿಗಳು: ಸುಮಾರು 5 ಲಕ್ಷ ಮಹಿಳೆಯರು ಈಗಾಗಲೇ ‘ನಮೋ ಶೇತ್ಕರಿ ಯೋಜನೆ’ಯಡಿ ಆರ್ಥಿಕ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಕಾರಣ ಮುಂದಿಟ್ಟಿದ್ದಾರೆ. 

ಇ-ಕೆವೈಸಿ ಪೂರ್ಣಗೊಳಿಸಿದರೂ ಮಾಸಿಕ ಕಂತುಗಳ ಹಣ ಜಮೆಯಾಗದ ಕುರಿತು ಬರುತ್ತಿರುವ ದೂರುಗಳಿಗೆ ಪ್ರತಿಕ್ರಿಯಿಸಿದ ಅಧಿಕಾರಿ, “ನಿಜವಾದ ಫಲಾನುಭವಿಗಳ ಅಂತಿಮ ಅಂಕಿ-ಅಂಶಗಳು ಇನ್ನು ಒಂದು ವಾರದಲ್ಲಿ ಸ್ಪಷ್ಟವಾಗಲಿವೆ ಮತ್ತು ಸಲ್ಲಿಕೆಯಾಗಿರುವ ದೂರುಗಳನ್ನು ಪರಿಶೀಲಿಸಲಾಗುತ್ತಿದೆ. ಕೇವಲ ಇ-ಕೆವೈಸಿ ನೆಪದಲ್ಲಿ 80 ಲಕ್ಷ ಮಹಿಳೆಯರನ್ನು ಕೈಬಿಡಲಾಗಿದೆ ಎಂಬ ಆರೋಪ ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

‘ಲಡ್ಕಿ ಬಹಿನ್‌’ಗಳಿಗೆ ಬಿದ್ದ ಮೊದಲ ಹೊಡೆತ: ಜಯಂತ್ ಪಾಟೀಲ್ ಆಕ್ರೋಶ

ಮತ್ತೊಂದೆಡೆ, ಸರ್ಕಾರದ ಈ ಕ್ರಮದ ವಿರುದ್ಧ ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕ ಜಯಂತ್ ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯೋಜನೆಯಿಂದ ಇಷ್ಟೊಂದು ದೊಡ್ಡ ಸಂಖ್ಯೆಯ ಫಲಾನುಭವಿಗಳನ್ನು ಕೈಬಿಡುತ್ತಿರುವುದು ರಾಜ್ಯ ಸರ್ಕಾರ ಎದುರಿಸುತ್ತಿರುವ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ಕಳೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಕಳಪೆ ಪ್ರದರ್ಶನದ ನಂತರ, 2024ರ ರಾಜ್ಯ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂ. ನೀಡುವ ಈ ಯೋಜನೆಯನ್ನು ತರಾತುರಿಯಲ್ಲಿ ಜಾರಿಗೆ ತರಲಾಗಿತ್ತು. ಈಗ ಚುನಾವಣೆ ಮುಗಿಯುತ್ತಿದ್ದಂತೆ 80 ಲಕ್ಷ ಮಹಿಳೆಯರನ್ನು ಅನರ್ಹರೆಂದು ಘೋಷಿಸಲಾಗಿದೆ. ಇದು ನಂಬಿ ಮತಹಾಕಿದ ಜನರಿಗೆ ಮಾಡಿದ ದ್ರೋಹ. ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರವೂ ದೊಡ್ಡ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಇದರ ಮೊದಲ ಹೊಡೆತ ನಮ್ಮ ‘ಲಡ್ಕಿ ಬಹಿನ್’ (ಆತ್ಮೀಯ ಸಹೋದರಿಯರ) ಮೇಲೆ ಬಿದ್ದಿದೆ. ಹಣಕಾಸಿನ ಕೊರತೆ ಮತ್ತು ಜಾಗತಿಕ ಆರ್ಥಿಕ ಕುಸಿತದ ಪರಿಸ್ಥಿತಿಯನ್ನು ಸರಿಯಾದ ಯೋಜನೆ ಮತ್ತು ಮುನ್ನೆಚ್ಚರಿಕೆಯ ಕ್ರಮಗಳ ಮೂಲಕ ನಿಭಾಯಿಸಬಹುದಿತ್ತು” ಎಂದು ಮಾಜಿ ಸಚಿವರೂ ಆದ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಯೋಜನೆ ನಿಲ್ಲಿಸುವುದೇ ಸರ್ಕಾರದ ಅಂತಿಮ ಗುರಿ: ಶಾಸಕ ರೋಹಿತ್ ಪವಾರ್ ಆರೋಪ

ಇದೇ ಧಾಟಿಯಲ್ಲಿ ಮಾತನಾಡಿದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, “ರಾಜ್ಯ ಸರ್ಕಾರವು ಯೋಜನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಅಂತಿಮ ಗುರಿಯನ್ನು ಹೊಂದಿದ್ದು, ಅದಕ್ಕಾಗಿ ಹಂತಹಂತವಾಗಿ ಫಲಾನುಭವಿಗಳನ್ನು ಪಟ್ಟಿಯಿಂದ ಹೊರಹಾಕುತ್ತಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ವಿಧಾನಸಭಾ ಚುನಾವಣೆಗೆ ಮುನ್ನ ಈ ಯೋಜನೆಯಡಿ 2.47 ಕೋಟಿ ಫಲಾನುಭವಿಗಳಿದ್ದರು. ಆದರೆ ಈಗ ಸುಮಾರು 81 ಲಕ್ಷ ಮಹಿಳೆಯರ ಹೆಸರುಗಳನ್ನು ಕೈಬಿಡಲಾಗಿದೆ. ಕೆವೈಸಿ (KYC) ಎಂಬುದು ಕೇವಲ ನೆಪವಷ್ಟೇ. ಫಲಾನುಭವಿಗಳನ್ನು ಕಡಿಮೆ ಮಾಡಿ ಕೊನೆಗೆ ಯೋಜನೆಯನ್ನೇ ನಿಲ್ಲಿಸುವುದು ಸರ್ಕಾರದ ಅಸಲಿ ಉದ್ದೇಶ” ಎಂದು ಪವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆಗೆ ಮುನ್ನ ಸರಿಯಾದ ಪರಿಶೀಲನೆ ನಡೆಸದ ಸರ್ಕಾರದ ನಡೆಯನ್ನು ಪ್ರಶ್ನಿಸಿದ ಅವರು, “ಈಗ ಕೈಬಿಡಲಾದ ಮಹಿಳೆಯರನ್ನು ಸರ್ಕಾರ ನಕಲಿ ಫಲಾನುಭವಿಗಳು ಎನ್ನುವುದಾದರೆ, ಚುನಾವಣೆಗೆ ಮುನ್ನ ಸೂಕ್ತ ಕೆವೈಸಿ ಪರಿಶೀಲನೆ ನಡೆಸದೆ ಯೋಜನೆಯನ್ನು ಜಾರಿಗೆ ತಂದಿದ್ದು ಸರ್ಕಾರದ ವೈಫಲ್ಯವಲ್ಲವೇ?” ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಮಹಿಳಾ ಫಲಾನುಭವಿಗಳಿಂದ ಈಗಾಗಲೇ ನೀಡಿರುವ ಹಣವನ್ನು ವಸೂಲಿ ಮಾಡಲು ಪ್ರಯತ್ನಿಸಿದರೆ ಅಥವಾ ಅವರಿಗೆ ಅನಾನುಕೂಲ ಉಂಟುಮಾಡಿದರೆ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...