ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿನ ದೋಷಗಳ ಸರಣಿಯನ್ನು ವಿವರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದು, ಜೊತೆಗೆ 2024 ರ ಲೋಕಸಭಾ ಚುನಾವಣೆ ಮತ್ತು ಐದು ತಿಂಗಳ ಅಂತರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿನ ರಾಜ್ಯದ ಮತದಾರರ ಪಟ್ಟಿಯನ್ನು ಪ್ರತಿಪಕ್ಷಗಳೊಂದಿಗೆ ಹಂಚಿಕೊಳ್ಳುವಂತೆ ಆಯೋಗವನ್ನು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ
ಸಾರ್ವತ್ರಿಕ ಚುನಾವಣೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದಿದ್ದು, ಅದರ ನಂತರ ನವೆಂಬರ್‌ನಲ್ಲಿ ರಾಜ್ಯದ ವಿಧಾನಸಭೆ ಚುನಾವಣೆ ನಡೆಯಿತು. ವಿಧಾನಸಭಾ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ಸಂಪೂರ್ಣ ವಯಸ್ಕ ಜನಸಂಖ್ಯೆಗಿಂತ (9.54 ಕೋಟಿ) ಹೇಗೆ ಹೆಚ್ಚಾಗಲು ಸಾಧ್ಯ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಹುಲ್ ಗಾಂಧಿಯವರು ಚುನಾವಣಾ ಆಯೋಗವನ್ನು ಕೇಳಿದ್ದಾರೆ. ಮಹಾರಾಷ್ಟ್ರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವಿನ ಅವಧಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಲ್ಲಿ ಕಳೆದ ಐದು ವರ್ಷಗಳಿಗಿಂತ ಹೆಚ್ಚಿನ ಮತದಾರರನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ವಿವರಿಸುವಂತೆ ಅವರು ಒತ್ತಾಯಿಸಿದ್ದಾರೆ.
ಹಿಮಾಚಲ ಪ್ರದೇಶದ ಸಂಪೂರ್ಣ ಮತದಾರರ ಜನಸಂಖ್ಯೆಗೆ ಸಮಾನವಾದ ಸುಮಾರು 39 ಲಕ್ಷ ಮತದಾರರನ್ನು ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯ ನಡುವೆ ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಸೇರಿಸಲಾಯಿತು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಹೋಲಿಸಿದರೆ, 2019 ರ ಮಹಾರಾಷ್ಟ್ರ ಚುನಾವಣೆ ಮತ್ತು 2024 ರ ಸಂಸತ್ ಚುನಾವಣೆಯ ನಡುವೆ ಕೇವಲ 32 ಲಕ್ಷ ಮತದಾರರನ್ನು ಸೇರಿಸಲಾಗಿದೆ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ. ಮಹಾರಾಷ್ಟ್ರ
ನಾಗ್ಪುರ ಜಿಲ್ಲೆಯ ಕಾಮ್ಥಿ ವಿಧಾನಸಭಾ ಕ್ಷೇತ್ರದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಅಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಅಂತರವು ಸೇರಿಸಲಾದ ಹೊಸ ಮತದಾರರ ಸಂಖ್ಯೆಗೆ ಬಹುತೇಕ ಸಮಾನವಾಗಿದೆ ಎಂದು ಹೇಳಿದ್ದಾರೆ. “ಚುನಾವಣಾ ಆಯೋಗ ಪಟ್ಟಿಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದೆ ಎಂದು ಇದಕ್ಕಿಂತ ಉತ್ತಮ ಸಂದರ್ಭ ಬೇಕಿಲ್ಲ. ಆಯೋಗ ಈ ಪಟ್ಟಿಯ ತಿದ್ದುಪಡಿಯನ್ನು ನಿರ್ವಹಿಸಿದೆ. ಆದರೆ ಈಗ ಅದರಲ್ಲಿ ಏನಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದು ಆಯೋಗದ ಜವಾಬ್ದಾರಿಯಾಗಿದೆ.” ಎಂದು ಅವರು ಹೇಳಿದ್ದಾರೆ.
LIVE: Press briefing by Shri @RahulGandhi, Smt @supriya_sule and Shri @rautsanjay61 in New Delhi. https://t.co/ZzX1zbV8Ba
— Congress (@INCIndia) February 7, 2025
ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಸಂಜಯ್ ರಾವತ್ ಮತ್ತು ಎನ್‌ಸಿಪಿ (ಶರದ್ಚಂದ್ರ ಪವಾರ್)ಯ ಸುಪ್ರಿಯಾ ಸುಳೆ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ಆರೋಪಗಳನ್ನು ಮಾಡಿದ್ದಾರೆ. ಈ ಮೂರು ಪಕ್ಷಗಳು ರಾಜ್ಯದ ವಿರೋಧ ಪಕ್ಷದ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಯ ಪ್ರಮುಖ ಘಟಕಗಳಾಗಿವೆ.
ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಪಕ್ಷಗಳು ವಿಭಜನೆಯಾಗುವುದು, ಪಕ್ಷದ ಚಿಹ್ನೆಗಳ ಸುತ್ತಲಿನ ಗೊಂದಲ ಮತ್ತು ಮತದಾರರ ಪಟ್ಟಿಗಳಲ್ಲಿನ ವೈಪರೀತ್ಯಗಳ ಮೂಲಕ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ಮೇಲೆ “ಬಹುಮುಖ ದಾಳಿ” ನಡೆದಿದೆ ಎಂದು ಎನ್‌ಸಿಪಿ ಸಂಸದೆ ಸುಲೆ ಆರೋಪಿಸಿದ್ದಾರೆ.
ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ, ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡ ಆಡಳಿತಾರೂಢ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದಿತ್ತು. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ 46 ಸ್ಥಾನಗಳನ್ನು ಗೆದ್ದಿತ್ತಿ.
ಆದಾಗ್ಯೂ, ಇದಕ್ಕಿಂತಲೂ ಕೇವಲ ಐದು ತಿಂಗಳ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಹಾರಾಷ್ಟ್ರದಲ್ಲಿ ಹಿನ್ನಡೆಯನ್ನು ಅನುಭವಿಸಿತ್ತು. ಜೊತೆಗೆ ರಾಜ್ಯದ 48 ಕ್ಷೇತ್ರಗಳಲ್ಲಿ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ, ವಿರೋಧ ಪಕ್ಷವಾದ ಇಂಡಿಯಾ ಬಣವು 29 ಸ್ಥಾನಗಳನ್ನು ಗೆದ್ದಿತ್ತು. ಇವುಗಳಲ್ಲಿ, ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು (13) ಗಳಿಸಿತ್ತು. ಬಿಜೆಪಿ ಒಂಬತ್ತು ಸ್ಥಾನಗಳಿಗೆ ಇಳಿದಿತ್ತು.
ಇದನ್ನೂಓದಿ: ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ
ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ


