Homeಮುಖಪುಟಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

ಸಚಿವ ಏಕನಾಥ್‌ ಶಿಂಧೆ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಎಂಎಲ್‌ಸಿ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ, 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ.

ಸಚಿವ ಮತ್ತು ಶಿವಸೇನೆಯ ಉನ್ನತ ನಾಯಕ ಏಕನಾಥ್ ಶಿಂಧೆ, 13 ಶಾಸಕರೊಂದಿಗೆ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಇದು ಮಹಾರಾಷ್ಟ್ರದ ಸರ್ಕಾರದಲ್ಲಿ ಅಪರೇಷನ್ ಕಮಲದ ಎಚ್ಚರಿಕೆಯನ್ನು ನೀಡಿದೆ.

ಉದ್ಧವ್ ಠಾಕ್ರೆ ಕರೆದಿರುವ ತುರ್ತು ಸಭೆಗೆ ಎಲ್ಲಾ ಶಾಸಕರು ಸಭೆಯಲ್ಲಿ ಹಾಜರಿರಲು ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಆದರೆ, ಗುಜರಾತ್‌ನ ಹೋಟೆಲ್‌ನಲ್ಲಿರುವ ಬಾಳ್ ಠಾಕ್ರೆ ನಿಷ್ಠಾವಂತ ನಾಯಕ ಏಕನಾಥ್ ಶಿಂದೆ ಇಂದು ಸೂರತ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿಯ ಮೃತದೇಹಗಳು ಪತ್ತೆ, ತನಿಖೆ ಆರಂಭ

ವಿಧಾನ ಪರಿಷತ್ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ತಲಾ ಐದು ಸ್ಥಾನಗಳನ್ನು ಗೆದ್ದ ಕೆಲವೇ ಗಂಟೆಗಳ ನಂತರದ ಬೆಳವಣಿಗೆಗಳು ಕಂಡುಬಂದಿವೆ. ಪ್ರತಿಪಕ್ಷ ಬಿಜೆಪಿ ಸ್ಪರ್ಧಿಸಿದ್ದ ಎಲ್ಲ ಐದು ಸ್ಥಾನಗಳನ್ನು ಗೆದ್ದಿದೆ. ಆದರೆ, ಆಡಳಿತಾರೂಢ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಾಂತ ಹಂದೋರೆ ಸೋತಿದ್ದಾರೆ. ಇದು ಆಪರೇಷನ್ ಕಮಲದ ಸುಳಿವು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯನ್ನು ಗುರಿಯಾಗಿಸಿಕೊಂಡು ಶಿವಸೇನೆ ಸಂಸದ ಸಂಜಯ್ ರಾವತ್, ’ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಾಡಿದಂತೆಯೇ, ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸುವ ಸಂಚು ನಡೆಯುತ್ತಿದೆ. ಆದರೆ, ಶಿವಸೇನೆ ನಿಷ್ಠಾವಂತರ ಪಕ್ಷವಾಗಿದೆ, ನಾವು ಹಾಗೆ ಮಾಡಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಜೊತೆಗೆ “ಏಕನಾಥ್ ಶಿಂಧೆ ಅವರು ಹೋಟೆಲ್‌ನಲ್ಲಿ ನಮ್ಮೊಂದಿಗೆ ಇದ್ದರು. ಮಹಾ ವಿಕಾಸ್ ಅಘಾಡಿ ಅಭ್ಯರ್ಥಿಯ ಗೆಲುವು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈಗ ನಾವು ಅವರೊಂದಿಗೆ ಮಾತನಾಡುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ” ಎಂದು ಸಂಜಯ್ ರಾವತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಸಚಿವ ಏಕನಾಥ್‌ ಶಿಂಧೆ ಅವರು ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ವರದಿಯಾಗಿದೆ. ಥಾಣೆಯ ಪ್ರಮುಖ  ಶಿವಸೇನಾ ನಾಯಕರಾಗಿರುವ ಶಿಂಧೆ ಅವರು ಈ ಪ್ರದೇಶದಲ್ಲಿ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ ಶಿವಸೇನೆಯ ಸಂಸದರಾಗಿದ್ದಾರೆ.

ಇತ್ತ, ಮಹಾರಾಷ್ಟ್ರದ ಬಿಜೆಪಿಯ ಪ್ರಮುಖ ನಾಯಕ ದೇವೇಂದ್ರ ಫಡ್ನವೀಸ್ ದೆಹಲಿಗೆ ಆಗಮಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಉದ್ಧವ್ ಸರ್ಕಾರಕ್ಕೆ ಅಪರೇಷನ್ ಕಮಲದ ಎಚ್ಚರಿಕೆಯನ್ನು ನೀಡುತ್ತಿದೆ.


ಇದನ್ನೂ ಓದಿ: ಹೋರಾಟಕ್ಕೆ ಪ್ರತೀಕಾರವಾಗಿ ಬುಲ್ಡೋಜರ್; ಬಿಜೆಪಿಯ ಕೀಳು ರಾಜಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...