Homeಮುಖಪುಟಮಹಾರಾಷ್ಟ್ರ: EWS ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಘೋಷಣೆ

ಮಹಾರಾಷ್ಟ್ರ: EWS ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಘೋಷಣೆ

ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ (SEBC) ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು. ಇದನ್ನು ರಾಜ್ಯ ಸರ್ಕಾರವು ಈ ಹಿಂದೆಯೇ ಪ್ರಶ್ನಿಸಿತ್ತು.

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು ಮರಾಠ ಸಮುದಾಯಕ್ಕೆ ಆರ್ಥಿಕ ದುರ್ಬಲ ವರ್ಗಗಳ (EWS) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿದೆ. ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿಯ ಯಾವುದೇ ವಿಭಾಗಗಳ ಅಡಿಯಲ್ಲಿ ಒಳಪಡದವರಿಗೆ ಶೇಕಡಾ 10 ರಷ್ಟು EWS ಕೋಟಾವನ್ನು ನಿಗದಿಪಡಿಸಲಾಗಿದೆ.

ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ (SEBC) ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು. ಇದನ್ನು ರಾಜ್ಯ ಸರ್ಕಾರವು ಈ ಹಿಂದೆಯೇ ಪ್ರಶ್ನಿಸಿತ್ತು.

ಇದನ್ನೂ ಓದಿ: ನುಡಿ ನಮನ: ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಈ ಪ್ರಕರಣದ ವಿಚಾರಣೆಯನ್ನು 2021ರ ಜನವರಿ 25 ರಂದು ನಿಗದಿಪಡಿಸಲಾಗಿದೆ. ಈ ನಡುವೆ ಮಹರಾಷ್ಟ್ರ ಕ್ಯಾಬಿನೆಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಜೊತೆಗೆ, ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಜನವರಿ 3 ಅನ್ನು “ಮಹಿಳಾ ಶಿಕ್ಷಣ ದಿನ” ಎಂದು ಆಚರಿಸಲು ಕ್ಯಾಬಿನೆಟ್ ನಿರ್ಧರಿಸಿದೆ.


ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...