ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಹಾಯುತಿ ಮೈತ್ರಿಕೂಟದ ಮುಖ್ಯಮಂತ್ರಿಯಾಗುತ್ತಾರೆ ಎಂದು ಯಾವುದೇ ಹೆಸರನ್ನು ನೇರವಾಗಿ ಹೇಳದೆ, ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಸುಳಿವು ನೀಡಿದ್ದಾರೆ. ಶಿಂಧೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪಕ್ಕದಲ್ಲಿ ಕೂತು ಫಡ್ನವಿಸ್ ಅವರು ಸರ್ಕಾರದ ಕೆಲಸದ ವರದಿ ಕಾರ್ಡ್ ಅನ್ನು ಬಿಡುಗಡೆ ಮಾಡುವ ಸಮಾರಂಭದಲ್ಲಿ ಮಾತನಾಡಿದ ಅವರು “ನಮ್ಮ ಮುಖ್ಯಮಂತ್ರಿ ಇಲ್ಲಿ ಕುಳಿತಿದ್ದಾರೆ” ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್‌ಗೆ ಸವಾಲು ಹಾಕಿದ ಅವರು ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಘೋಷಿಸುವಂತೆ ಕೇಳಿದ ಫಡ್ನವಿಸ್, “ನಾವು ಮುಖ್ಯಮಂತ್ರಿಯ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ, ನಮ್ಮ ಮುಖ್ಯಮಂತ್ರಿ ಇಲ್ಲಿ ಕುಳಿತಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಮಹಾ ವಿಕಾಸ್ ಅಘಾಡಿ ಅವರು ಮುಖ್ಯಮಂತ್ರಿಯ ಅಭ್ಯರ್ಥಿ ಘೋಷಿಸುತ್ತಿಲ್ಲ. ಏಕೆಂದರೆ ಚುನಾವಣೆಯ ನಂತರ ಅವರು ತಮ್ಮ ಮುಖ್ಯಮಂತ್ರಿ ಇಲ್ಲಿ ಇರಲಿದ್ದಾರೆ ಎಂದು ಭಾವಿಸುವುದಿಲ್ಲ. ನಾನು ಪವಾರ್ ಸಾಹಬ್ ಅವರಿಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ಸವಾಲು ಹಾಕುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಫಡ್ನವಿಸ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿಯ ಪ್ರಮುಖ ಮುಖವಾಗಿರುವ ಫಡ್ನವೀಸ್, ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ಚರ್ಚೆಗಳು ಅಂತಿಮ ಹಂತದಲ್ಲಿವೆ ಎಂದು ಹೇಳಿದ್ದಾರೆ. ಪ್ರಸ್ತುತ ಉಪ ಮುಖ್ಯಮಂತ್ರಿಗಳಾಗಿರುವ ಫಡ್ನವೀಸ್ ಮತ್ತು ಅಜಿತ್ ಪವಾರ್ ಇಬ್ಬರೂ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿದ್ದಾರೆ ಎಂಬುದು ವರದಿಯಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಈ ವಿಷಯವನ್ನು ನೇರವಾಗಿ ಹೇಳದೆ, ಎರಡು ವರ್ಷಗಳ ಕೆಲಸ ಮತ್ತು ಕಾರ್ಯಕ್ಷಮತೆ ಮೈತ್ರಿ ಸರ್ಕಾರದ ಮುಖವಾಗಿದೆ ಎಂದು ಹೇಳಿದ್ದಾರೆ.
ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಕೂಡ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಸಾರ್ವಜನಿಕವಾಗಿ ಈ ವರೆಗೆ ಘೋಷಿಸಿಲ್ಲ. ಈ ವಾರದ ಆರಂಭದಲ್ಲಿ ಮಾತನಾಡಿದ್ದ ಉದ್ಧವ್ ಠಾಕ್ರೆ, ಮಹಾಯುತಿಯು ಅಭ್ಯರ್ಥಿ ಘೋಷಣೆ ಮಾಡಿದ ನಂತರವೇ ಮಹಾ ವಿಕಾಸ್ ಅಘಾಡಿ ತನ್ನ ಅಭ್ಯರ್ಥಿಯನ್ನು ಹೆಸರಿಸಲಿದೆ ಎಂದು ಹೇಳುವ ಮೂಲಕ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.
ಶರದ್ ಪವಾರ್ ಅವರು ಹಲವಾರು ಸಂದರ್ಭಗಳಲ್ಲಿ ಮೈತ್ರಿಕೂಟದ ಮುಖ್ಯಮಂತ್ರಿ ಮುಖವನ್ನು ಚುನಾವಣೆಯಲ್ಲಿ ಯಾವ ಪಕ್ಷವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದನ್ನು ಆಧರಿಸಿದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಮಹಾರಾಷ್ಟ್ರ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಜಾರ್ಖಂಡ್ ಜೊತೆಗೆ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ
ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ


