Homeಮುಖಪುಟಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ಬಿಜೆಪಿಯಿಂದ 148, ಕಾಂಗ್ರೆಸ್‌ನಿಂದ 103 ಅಭ್ಯರ್ಥಿಗಳು ಕಣಕ್ಕೆ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಂಗಳವಾರ (ಅ.29) ಕೊನೆಗೊಂಡಿದೆ. ವಿವಿಧ ಪಕ್ಷಗಳು ಮತ್ತು ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆಯಾಗಿವೆ.

ಒಟ್ಟು 288 ಸದಸ್ಯ ಬಲ ಹೊಂದಿರುವ ವಿಧಾನಸಭೆಗೆ ಬಿಜೆಪಿ ಅತೀ ಹೆಚ್ಚು , ಅಂದರೆ 148 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ 103 ಸ್ಥಾನಗಳಿಗೆ ಸ್ಪರ್ಧಿಸುತ್ತಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 80 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ 53 ಕಡೆಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಇತರ ‘ಮಹಾಯುತಿ’ ಮಿತ್ರರಿಗೆ ಐದು ಸ್ಥಾನಗಳನ್ನು ನೀಡಲಾಗಿದೆ. ಆದರೆ, ಎರಡೂ ಪಕ್ಷಗಳಿಂದ ಈ ಸ್ಥಾನಗಳ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಸ್ ಅಘಾಡಿಯಲ್ಲಿ (ಎಂವಿಎ) ಕಾಂಗ್ರೆಸ್ 103 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 89 ಮತ್ತು ಎನ್‌ಸಿಪಿ (ಎಸ್‌ಪಿ) 87 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇಲ್ಲಿಯೂ ಇತರ ಎಂವಿಎ ಮಿತ್ರರಿಗೆ ಆರು ಸ್ಥಾನಗಳನ್ನು ನೀಡಲಾಗಿದ್ದು, ಮೂರು ವಿಧಾನಸಭಾ ಕ್ಷೇತ್ರಗಳ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

ಆಡಳಿತ ಮತ್ತು ವಿರೋಧ ಒಕ್ಕೂಟಗಳ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಸುಮಾರು 8,000 (7,995) ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಒಟ್ಟಾರೆಯಾಗಿ, 7,995 ಅಭ್ಯರ್ಥಿಗಳಿಂದ ಚುನಾವಣಾ ಆಯೋಗಕ್ಕೆ (ಇಸಿ) 10,905 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿ ಹೊರಡಿಸಿದ ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 22 ರಂದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಾರಂಭಗೊಂಡಿತ್ತು. ಅಕ್ಟೋಬರ್ 29 (ಮಂಗಳವಾರ) ಕೊನೆಗೊಂಡಿದೆ. ಅಕ್ಟೋಬರ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನವೆಂಬರ್ 4 (ಮಧ್ಯಾಹ್ನ 3 ಗಂಟೆಯವರೆಗೆ) ರವರೆಗೆ ಸಮಯವಿದೆ.

ನವೆಂಬರ್ 20 ರಂದು ಮತದಾನ ನಡೆಯಲಿದ್ದು, ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಈ ಬಾರಿ ಆಡಳಿತಾರೂಢ ಮಹಾಯುತಿ ಮತ್ತು ವಿರೋಧ ಪಕ್ಷಗಳ ಎಂವಿಎ ನಡುವೆ ಹಣಾಹಣಿ ಏರ್ಪಡಲಿದೆ.

ಇದನ್ನೂ ಓದಿ : ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಪೊಲೀಸರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...