Homeಮುಖಪುಟಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

- Advertisement -
- Advertisement -

ಮಹಾರಾಷ್ಟ್ರದ ಆಢಳಿತರೂಡ ‘ಮಹಾಯುತಿ’ ಮೈತ್ರಿಕೂಟ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಪ್ರತಿಪಕ್ಷಗಳ ಒಕ್ಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಡ ಇಂದು (ನ.7) ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿದೆ.

ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಬಿಕೆಸಿಯಲ್ಲಿ ನಡೆದ ಎಂವಿಎ ಸಮಾವೇಶದಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಹಿಳೆಯರಿಗೆ ಮಾಸಿಕ 3 ಸಾವಿರ ರೂ. ಧನ ಸಹಾಯ, ‘ಮಹಾಲಕ್ಷಿ’ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಎಂವಿಎ ಅಧಿಕಾರಕ್ಕೆ ಬಂದರೆ ನೀಡಲಿದೆ ಎಂದು ಭರವಸೆ ನೀಡಿದರು.

ಉಚಿತ ಔಷಧಿಯೊಂದಿಗೆ 25 ಲಕ್ಷದ ರೂಪಾಯಿ ಉಚಿತ ಕುಟುಂಬ ವಿಮಾ ಯೋಜನೆ, ರೂ. 3 ಲಕ್ಷದವರೆಗಿನ ರೈತರ ಸಾಲ ಮನ್ನಾ ಜೊತೆಗೆ ಸಾಲ ಮರುಪಾವತಿ ಮಾಡದವರಿಗೆ ರೂ. 50,000 ಪ್ರೋತ್ಸಾಹ ಧನ, ಜಾತಿಗಣತಿ ನಡೆಸುವುದು, ಮೀಸಲಾತಿ ಮೇಲಿನ 50 ಶೇ. ಮಿತಿ ತೆಗೆದು ಹಾಕುವುದು, ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಮಾಸಿಕ 4 ಸಾವಿರ ರೂ. ಧನ ಸಹಾಯ ನೀಡುವುದು ಸೇರಿದಂತೆ ಇನ್ನೂ ಅನೇಕ ಭರವೆಸಗಳನ್ನು ಎಂವಿಎ ಜನರಿಗೆ ನೀಡಿದೆ.

ಸಮಾವೇಶದಲ್ಲಿ ಭಾಗವಹಿಸಿದ್ದ ನಾಯಕರು ಸಿಎಂ ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರವು ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು. ಮಹಾಯುತಿ ಸರ್ಕಾರವನ್ನು ಬಿಜೆಪಿಯು ಏಕನಾಥ್ ಶಿಂಧೆಯವರ ಜೊತೆಗೂಡಿ ರಹಸ್ಯವಾಗಿ ರಚಿಸಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನವನ್ನು ಆದಷ್ಟು ಬೇಗ ತೆಗೆದು ಹಾಕಲು ಎನ್‌ಡಿಎ ಮತ್ತು ಆರ್‌ಎಸ್‌ಎಸ್‌ ಸಿದ್ದತೆ ನಡೆಸುತ್ತಿದೆ. ಹಾಗಾಗಿ, ಸಂವಿಧಾನ ರಕ್ಷಣೆಗೆ ರಾಷ್ಟ್ರವ್ಯಾಪಿ ಚಳವಳಿಯ ಅಗತ್ಯವಿದೆ ಎಂದು ಎಂವಿಎ ನಾಯಕರು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರು ಯುವಕರಿಗೆ ಆರ್ಥಿಕ ನೆರವು ನೀಡುವ ಕುರಿತು ಸುದೀರ್ಘವಾಗಿ ಮಾತನಾಡಿದರು.  ಧಾರಾವಿ ಯೋಜನೆ ಸೇರಿದಂತೆ ಅದಾನಿ ಜೊತೆಗಿನ ಎಲ್ಲಾ ಟೆಂಡರ್‌ಗಳನ್ನು ರದ್ದುಗೊಳಿಸುತ್ತೇವೆ ಎಂದು ಪುನರುಚ್ಚರಿಸಿದರು. ಶರದ್ ಪವಾರ್ ಸಾಲ ಮನ್ನಾ ಯೋಜನೆ ಕುರಿತು ಸುದೀರ್ಘವಾಗಿ ಮಾತನಾಡಿದರು.

ಇದನ್ನೂ ಓದಿ : ಮಹಾರಾಷ್ಟ್ರ ಬದಲಾವಣೆ ಬಯಸುತ್ತಿದೆ, ನಮ್ಮ ಮೈತ್ರಿ ಅದಕ್ಕಾಗಿ ಕೆಲಸ ಮಾಡುತ್ತಿದೆ: ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...