Homeಮುಖಪುಟಮಹಾರಾಷ್ಟ್ರ: ಸೇತುವೆ ಕುಸಿದು ಕನಿಷ್ಠ 5 ಮಂದಿ ಸಾವು; ನದಿ ನೀರಿನಲ್ಲಿ ಕೆಲವರು ಕಣ್ಮರೆ

ಮಹಾರಾಷ್ಟ್ರ: ಸೇತುವೆ ಕುಸಿದು ಕನಿಷ್ಠ 5 ಮಂದಿ ಸಾವು; ನದಿ ನೀರಿನಲ್ಲಿ ಕೆಲವರು ಕಣ್ಮರೆ

- Advertisement -
- Advertisement -

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮಾವಲ್‌ನಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸಣ್ಣ ಸೇತುವೆ ಭಾನುವಾರ ಕುಸಿದು ಬಿದ್ದ ನಂತರ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಕೆಲವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ಮಧ್ಯಾಹ್ನ 03.30 ಗಂಟೆಯ ಸುಮಾರಿಗೆ ನಡೆದಿದೆ.

ಘಟನೆಯ ಸಮಯದಲ್ಲಿ ಸೇತುವೆಯಲ್ಲಿದ್ದ ಒಟ್ಟು 20 ರಿಂದ 25 ಜನರಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಆರಂಭಿಕ ವರದಿಗಳು ತಿಳಿಸಿವೆ.

“ಹಲವು ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳುತ್ತಿವೆ. ಜನರನ್ನು ರಕ್ಷಿಸುವುದು ಆರಂಭಿಕ ಆದ್ಯತೆಯಾಗಿದೆ” ಎಂದು ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಹೇಳಿದರು.

ಕುಂದಮಾಲ ಸೇತುವೆ ಎಂದು ಕರೆಯಲ್ಪಡುವ ಈ ಸೇತುವೆ ಇಂದ್ರಯಾಣಿ ನದಿಯ ಮೇಲೆ ಇದ್ದು, ಮಳೆಗಾಲದಲ್ಲಿ ಪ್ರವಾಸಿಗರಲ್ಲಿ ಬಹಳ ಜನಪ್ರಿಯವಾಗಿದೆ.

ಪೊಲೀಸ್ ಕಲೆಕ್ಟರೇಟ್, ಪುಣೆ ಗ್ರಾಮೀಣ ಪೊಲೀಸ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ನ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪುಣೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ.

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....