Homeಮುಖಪುಟಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

- Advertisement -
- Advertisement -

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ.

ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ ಘೋರ್ಪಡೆ ಅವರು ಆಪ್ಟೆಯ ನಾಮನಿರ್ದೇಶನದ ಕುರಿತು ದೃಢಪಡಿಸಿದ್ದಾರೆ. ಒಟ್ಟು ಐವರು ನಾಮನಿರ್ದೇಶಿತ ಸದಸ್ಯರಲ್ಲಿ ತುಷಾರ್ ಆಪ್ಟೆ ಕೂಡ ಒಬ್ಬ. ನಾಮನಿರ್ದೇಶನ ಪೂರ್ಣಗೊಂಡ ನಂತರ ಅವರನ್ನು ಮುನ್ಸಿಪಲ್ ಕೌನ್ಸಿಲ್‌ಗೆ ಸ್ವಾಗತಿಸಲಾಗಿದೆ. ಆಪ್ಟೆ ಜೊತೆಗೆ ಇಬ್ಬರು ಶಿವಸೇನೆಯಿಂದ ಮತ್ತು ಒಬ್ಬರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದಿಂದ (ಎನ್‌ಸಿಪಿ) ನಾಮನಿರ್ದೇಶನ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ ನಡೆದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿದ್ದ ಆಪ್ಟೆ ವಿರುದ್ಧ, ಅಪರಾಧವನ್ನು ವರದಿ ಮಾಡಲು ವಿಫಲವಾದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲಿಸದಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 21(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ನಡೆದ 44 ದಿನಗಳ ನಂತರ ಆಪ್ಟೆ ಅವರನ್ನು ಬಂಧಿಸಲಾಗಿತ್ತು ಮತ್ತು 48 ಗಂಟೆಗಳಲ್ಲಿ ಜಾಮೀನು ನೀಡಲಾಗಿತ್ತು. ಪ್ರಕರಣವು ಪ್ರಸ್ತುತ ವಿಚಾರಣೆಯ ಹಂತದಲ್ಲಿದೆ.

ಮುನ್ಸಿಪಲ್ ಕೌನ್ಸಿಲ್‌ಗೆ ಆಪ್ಟೆಯ ನಾಮನಿರ್ದೇಶನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ರಾಜನ್ ಘೋರ್ಪಡೆ, ಆಪ್ಟೆ ಒಬ್ಬ ಸಾಮಾಜಿಕ ಕಾರ್ಯಕರ್ತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಪದಾಧಿಕಾರಿ ಎಂದು ಹೇಳಿದ್ದಾರೆ.

“ಆಪ್ಟೆ ಅವರನ್ನು ಆರೋಪಿ ಎಂದು ಹೆಸರಿಸಲಾಗಿದ್ದರೂ, ಅವರ ಮೇಲಿನ ಅಪರಾಧ ಸಾಬೀತಾಗಿಲ್ಲ. ಪ್ರಕರಣದ ಪ್ರಮುಖ ಆರೋಪಿಗೆ ಈಗಾಗಲೇ ಶಿಕ್ಷೆಯಾಗಿದೆ. ಆಪ್ಟೆ ಪಕ್ಷಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡಿದವರು ಮತ್ತು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೊಡುಗೆ ನೀಡಿದವರು. ಆದ್ದರಿಂದ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ” ಎಂದು ಘೋರ್ಪಡೆ ತಿಳಿಸಿದ್ದಾರೆ.

ಆಪ್ಟೆ ಕಾರ್ಯದರ್ಶಿಯಾಗಿದ್ದ ಶಾಲೆಯ ಆವರಣದಲ್ಲಿ ಅಕ್ಷಯ್ ಶಿಂಧೆ ಎಂಬಾತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆ ವಿರುದ್ದ ಪೋಷಕರು ಮತ್ತು ನಾಗರಿಕರಿಂದ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು.

ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯ ಶೌಚಾಲಯದೊಳಗೆ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಮುಖ ಆರೋಪಿ ಅಕ್ಷಯ್ ಶಿಂಧೆ (24) ಅನ್ನು ಆಗಸ್ಟ್ 2024ರಲ್ಲಿ ಬಂಧಿಸಲಾಯಿಗಿತ್ತು.

ಸೆಪ್ಟೆಂಬರ್ 23ರಂದು, ನವಿ ಮುಂಬೈನ ತಲೋಜಾ ಜೈಲಿನಿಂದ ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆತನ ಸಾವನ್ನಪ್ಪಿದ್ದಾನೆ. ಅಕ್ಷಯ್ ವ್ಯಾನ್‌ನಲ್ಲಿದ್ದ ಒಬ್ಬ ಪೊಲೀಸ್ ಅಧಿಕಾರಿಯ ಬಂದೂಕನ್ನು ಕಸಿದುಕೊಂಡು ಗುಂಡು ಹಾರಿಸಿದ್ದ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಎಂದು ಹೇಳಲಾಗಿದೆ. ಆರೋಪಿಯ ವಿರುದ್ಧ ಪತ್ನಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆತನನ್ನು ಕರೆದೊಯ್ಯಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...