ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಬುಧವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ಪಕ್ಷವು ಮುಖ್ಯಮಂತ್ರಿಯಾಗಿ ಅವರ ನೇಮಕಕ್ಕೆ ದಾರಿ ಮಾಡಿಕೊಟ್ಟಿದೆ. ಗುರುವಾರ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮುಂಬೈಯಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ, ಫಡ್ನವೀಸ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಹಾಯುತಿ ಒಕ್ಕೂಟದ ನಾಯಕರು ಬುಧವಾರ ಮಧ್ಯಾಹ್ನ 3.30 ಗಂಟೆಗೆ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮುಂಬೈನ ವಿಧಾನಸಭಾ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಉಪಸ್ಥಿತರಿದ್ದರು. ಈ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಬಿಜೆಪಿ ನೇಮಿಸಿತ್ತು. ಮಹಾರಾಷ್ಟ್ರ
ಮಂಗಳವಾರ, ಫಡ್ನವೀಸ್ ಅವರು ರಾಜ್ಯದ ಹಂಗಾಮಿ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರನ್ನು ಅವರ ಅಧಿಕೃತ ನಿವಾಸ ‘ವರ್ಷ’ದಲ್ಲಿ ಭೇಟಿಯಾಗಿದ್ದಾರೆ. ಸರ್ಕಾರ ರಚನೆಗಾಗಿ ಕಳೆದ ವಾರ ದೆಹಲಿಯಲ್ಲಿ ನಡೆದ ಚರ್ಚೆಯ ನಂತರ ಅವರಿಬ್ಬರ ನಡುವೆ ನಡೆದ ಮೊದಲ ವೈಯಕ್ತಿಕ ಸಭೆ ಇದಾಗಿದೆ.
ಬಿಜೆಪಿ ನೇತೃತ್ವದ ಹೊಸ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಶಿಂಧೆ ಒಪ್ಪಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.
ಶಿಂಧೆ ಮತ್ತು ಫಡ್ನವಿಸ್ ನಡುವೆ ನಿನ್ನೆ ನಡೆದ ಒಂದು ಗಂಟೆ ಅವಧಿಯ ಸಭೆಯ ವಿವರ ಅಸ್ಪಷ್ಟವಾಗಿದ್ದರೂ, ಕೆಲವು ರಾಜಕೀಯ ವೀಕ್ಷಕರು, ಬಿಜೆಪಿಯು ತನ್ನ ಮಿತ್ರ ಪಕ್ಷಗಳನ್ನು ಸಮಾಧಾನಪಡಿಸುವ ಪ್ರಯತ್ನ ಇದೆಂದು ಪ್ರತಿಪಾದಿಸಿದ್ದಾರೆ. ಅದಾಗ್ಯೂ, ಈ ಸಭೆ ಡಿಸೆಂಬರ್ 5 ರಂದು ನಡೆಯುವ ಪ್ರಮಾಣವಚನಕ್ಕೆ ಸಂಬಂಧಿಸಿದ ಪ್ರಾಥಮಿಕ ಚರ್ಚೆಯಾಗಿದೆ ಎಂದು ನಂಬಲಾಗಿದೆ.
ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಭಾರಿ ಯಶಸ್ಸನ್ನು ಸಾಧಿಸಿತು. ರಾಜ್ಯದ 288 ವಿಧಾನಸಭಾ ಸ್ಥಾನಗಳಲ್ಲಿ ಪಕ್ಷವು 132 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಮೂಲಕ ಬಿಜೆಪಿ ಈವರೆಗಿನ ಅತ್ಯುತ್ತಮ ಸಾಧನೆ ಮಾಡಿದೆ. ಪಕ್ಷವು ತನ್ನ ಮಿತ್ರಪಕ್ಷಗಳಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಜೊತೆ ಸೇರಿ 230 ಸ್ಥಾನಗಳಲ್ಲಿ ಮೈತ್ರಿ ಸರ್ಕಾರ ನಡೆಸುವ ಬಹುಮತವನ್ನು ಹೊಂದಿದೆ.
ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ
ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ


