Homeಮುಖಪುಟಮಹಾರಾಷ್ಟ್ರ | ಬಿಜೆಪಿ ಶಾಸಕಾಂಗ ನಾಯಕರಾಗಿ ಆಯ್ಕೆಯಾದ ಫಡ್ನವಿಸ್

ಮಹಾರಾಷ್ಟ್ರ | ಬಿಜೆಪಿ ಶಾಸಕಾಂಗ ನಾಯಕರಾಗಿ ಆಯ್ಕೆಯಾದ ಫಡ್ನವಿಸ್

ಡಿಸೆಂಬರ್ 5 ರಂದು ಸಿಎಂ ಅಗಿ ಪ್ರಮಾಣವಚನ ಸ್ವೀಕರಿಸಲಿರುವ ಅವರ ಜೊತೆಗೆ ಉಪ ಮುಖ್ಯಮಂತ್ರಿಯಾಗಿ ಶಿಂಧೆ ಕೂಡಾ ಅಧಿಕಾರ ವಹಿಸಲಿದ್ದಾರೆ

- Advertisement -
- Advertisement -

ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಬುಧವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ಪಕ್ಷವು ಮುಖ್ಯಮಂತ್ರಿಯಾಗಿ ಅವರ ನೇಮಕಕ್ಕೆ ದಾರಿ ಮಾಡಿಕೊಟ್ಟಿದೆ. ಗುರುವಾರ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ.

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮುಂಬೈಯಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ, ಫಡ್ನವೀಸ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಹಾಯುತಿ ಒಕ್ಕೂಟದ ನಾಯಕರು ಬುಧವಾರ ಮಧ್ಯಾಹ್ನ 3.30 ಗಂಟೆಗೆ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಂಬೈನ ವಿಧಾನಸಭಾ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಉಪಸ್ಥಿತರಿದ್ದರು. ಈ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಬಿಜೆಪಿ ನೇಮಿಸಿತ್ತು. ಮಹಾರಾಷ್ಟ್ರ

ಮಂಗಳವಾರ, ಫಡ್ನವೀಸ್ ಅವರು ರಾಜ್ಯದ ಹಂಗಾಮಿ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರನ್ನು ಅವರ ಅಧಿಕೃತ ನಿವಾಸ ‘ವರ್ಷ’ದಲ್ಲಿ ಭೇಟಿಯಾಗಿದ್ದಾರೆ. ಸರ್ಕಾರ ರಚನೆಗಾಗಿ ಕಳೆದ ವಾರ ದೆಹಲಿಯಲ್ಲಿ ನಡೆದ ಚರ್ಚೆಯ ನಂತರ ಅವರಿಬ್ಬರ ನಡುವೆ ನಡೆದ ಮೊದಲ ವೈಯಕ್ತಿಕ ಸಭೆ ಇದಾಗಿದೆ.

ಬಿಜೆಪಿ ನೇತೃತ್ವದ ಹೊಸ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಶಿಂಧೆ ಒಪ್ಪಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.

ಶಿಂಧೆ ಮತ್ತು ಫಡ್ನವಿಸ್ ನಡುವೆ ನಿನ್ನೆ ನಡೆದ ಒಂದು ಗಂಟೆ ಅವಧಿಯ ಸಭೆಯ ವಿವರ ಅಸ್ಪಷ್ಟವಾಗಿದ್ದರೂ, ಕೆಲವು ರಾಜಕೀಯ ವೀಕ್ಷಕರು, ಬಿಜೆಪಿಯು ತನ್ನ ಮಿತ್ರ ಪಕ್ಷಗಳನ್ನು ಸಮಾಧಾನಪಡಿಸುವ ಪ್ರಯತ್ನ ಇದೆಂದು ಪ್ರತಿಪಾದಿಸಿದ್ದಾರೆ. ಅದಾಗ್ಯೂ, ಈ ಸಭೆ ಡಿಸೆಂಬರ್ 5 ರಂದು ನಡೆಯುವ ಪ್ರಮಾಣವಚನಕ್ಕೆ ಸಂಬಂಧಿಸಿದ ಪ್ರಾಥಮಿಕ ಚರ್ಚೆಯಾಗಿದೆ ಎಂದು ನಂಬಲಾಗಿದೆ.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಭಾರಿ ಯಶಸ್ಸನ್ನು ಸಾಧಿಸಿತು. ರಾಜ್ಯದ 288 ವಿಧಾನಸಭಾ ಸ್ಥಾನಗಳಲ್ಲಿ ಪಕ್ಷವು 132 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಮೂಲಕ ಬಿಜೆಪಿ ಈವರೆಗಿನ ಅತ್ಯುತ್ತಮ ಸಾಧನೆ ಮಾಡಿದೆ. ಪಕ್ಷವು ತನ್ನ ಮಿತ್ರಪಕ್ಷಗಳಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಜೊತೆ ಸೇರಿ 230 ಸ್ಥಾನಗಳಲ್ಲಿ ಮೈತ್ರಿ ಸರ್ಕಾರ ನಡೆಸುವ ಬಹುಮತವನ್ನು ಹೊಂದಿದೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...