Homeಮುಖಪುಟಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ

- Advertisement -
- Advertisement -

ಮಹಾರಾಷ್ಟ್ರದ ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಶಾಸಕ ಸುನೀಲ್ ಕಾಂಬ್ಳೆ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವೇದಿಕೆಯಿಂದ ಇಳಿದು ಬರುತ್ತಿದ್ದ ಶಾಸಕ ಸುನಿಲ್ ಕಾಂಬ್ಳೆ, ವೇದಿಕೆಯ ಮೆಟ್ಟಿಲ ಮೇಲೆ ನಿಂತಿದ್ದ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ನೂರಾರು ಜನರ ಮುಂದೆ ಕಪಾಳಮೋಕ್ಷ ಮಾಡಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು. ಘಟನೆ ನಡೆದಾಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೂಡ ವೇದಿಕೆಯಲ್ಲಿದ್ದರು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗೆ ಕಪಾಳ ಮೋಕ್ಷ ಮಾಡಿರುವುದನ್ನು ಶಾಸಕ ಸುನಿಲ್ ಕಾಂಬ್ಳೆ ನಿರಾಕರಿಸಿದ್ದಾರೆ. “ನಾನು ವೇದಿಕೆಯಿಂದ ಇಳಿಯುವಾಗ ನನ್ನ ಮೈಮೇಲೆ ಬಿದ್ದ ಪೊಲೀಸ್ ಅಧಿಕಾರಿಯನ್ನು ತಳ್ಳಿದ್ದೇನೆ ಹೊರತು, ಕಪಾಳಮೋಕ್ಷ ಮಾಡಿಲ್ಲ” ಎಂದು ಅವರು ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದರೆ, ಶಾಸಕ ಕಪಾಳಮೋಕ್ಷ ಮಾಡಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ)ಯ ಮಹಿಳಾ ಉದ್ಯೋಗಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪ ಇದೇ ಶಾಸಕ ಸುನಿಲ್ ಕಾಂಬ್ಳೆ ವಿರುದ್ದ ಇತ್ತೀಚೆಗೆ ಕೇಳಿ ಬಂದಿತ್ತು.

ಯಾವ ಕಾರಣಕ್ಕೆ ಶಾಸಕ ಸುನಿಲ್ ಕಾಂಬ್ಳೆ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ತಿಳಿದು ಬಂದಿಲ್ಲ. ಶಾಸಕರು ಸುಖಾಸುಮ್ಮನೆ ಪೊಲೀಸ್ ಅಧಿಕಾರಿಯ ಮೇಲೆ ದರ್ಪ ತೋರಿದ್ದಾರೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಶಾಸಕನ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ : 2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...